ಸಾರಾಂಶ
ಭೂ ಅಕ್ರಮಗಳನ್ನು ತಡೆಯಲುದಾಖಲೆಗಳ ಡಿಜಿಟಲೀಕರಣ ಸಹಕಾರಿ ಆಗಿದ್ದು, ಇದರಿಂದ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರ ಭೂಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿದ್ದು ಪ್ರತಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ ನೀಡಲಾಗುತ್ತದೆ. ಭೂ ದಾಖಲೆಗಳನ್ನು ಶಾಶ್ವತವಾಗಿ ಡಿಜಿಟಲ್ ದಾಖಲಾಗಿಕರಣವಾಗಿ ಪರಿವರ್ತಿಸಲಾಗುವುದು.
ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಸರ್ವೆ ಮತ್ತು ನೋಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣ ಮಾಡಿ ರೈತರಿಗೆ ಮತ್ತು ಭೂ ಮಾಲೀಕರಿಗೆ ತೊಂದರೆಯಾಗದಂತೆ ತಾಲೂಕಿನಲ್ಲಿ ಚಾಲನೆ ನೀಡಲಾಗಿದೆಯೆಂದು ಶಾಸಕ ಬಿ.ಎನ್ ರವಿಕುಮಾರ್ ತಿಳಿಸಿದರು.ನಗರದ ತಾಲೂಕು ಕಚೇರಿಯಲ್ಲಿ ರಾಜ್ಯ ಸರ್ಕಾರದ ಭೂ ಸುರಕ್ಷಾ ಯೋಜನೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಭೂ ಅಕ್ರಮಗಳನ್ನು ತಡೆಯಲು ಇದು ಸಹಕಾರಿ ಆಗಿದ್ದು, ಇದರಿಂದ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರ ಭೂಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿದ್ದು ಪ್ರತಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ ನೀಡಲಾಗುತ್ತದೆ ಎಂದರು. 95 ಲಕ್ಷ ಪುಟ ಸ್ಕ್ಯಾನ್
ಕ್ಷೇತ್ರದಲ್ಲಿ ಸುಮಾರು 95 ಲಕ್ಷ ಪುಟಗಳು ಸ್ಕ್ಯಾನ್ ಮಾಡುವ ಕಾರ್ಯ ನಡೆಯುತ್ತಿದ್ದು, ಕಂದಾಯ ಇಲಾಖೆಯ ಶಿರಸ್ತೇದಾರ್ ಈ ಕಾರ್ಯಕ್ರಮದಲ್ಲಿ 6 ಜನ ಹೊರಗುತ್ತಿಗೆದಾರರನ್ನು ಸೇವೆಗೆ ನೇಮಿಸಿ ಕಾರ್ಯವನ್ನು ಆರಂಭಿಸಿದ್ದಾರೆ ಪ್ರತಿಯೊಬ್ಬರು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ತಹಸೀಲ್ದಾರ್ ಬಿ.ಎನ್ ಸ್ವಾಮಿ ಮಾತನಾಡಿ, ದುಸ್ಥಿತಿಯಲ್ಲಿರುವ ಭೂ ದಾಖಲೆಗಳನ್ನು ಶಾಶ್ವತವಾಗಿ ಡಿಜಿಟಲ್ ದಾಖಲಾಗಿ ಕರಣವಾಗಿ ಪರಿವರ್ತಿಸಿ ನಿಮ್ಮ ದಾಖಲೆಗಳನ್ನು ನಿಮ್ಮ ಕೈಗೆ ಒಪ್ಪಿಸುವ ಭೂ ಸುರಕ್ಷಾ ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಶಿರಸ್ತೇದಾರ್ ಆಸಿಯಾಬಿ, ಮುಖಂಡರಾದ ತಾದೂರು ರಘು ಸೇರಿದಂತೆ ಇಲಾಖಾ ಅಧಿಕಾರಿಗಳು ಪಾಲ್ಗೊಂಡಿದ್ದರು.