ಸಂಸ್ಕಾರಯುತ ವ್ಯಕ್ತಿತ್ವ ರೂಪಿಸುವುದು ಶಿಕ್ಷಣದ ಉದ್ದೇಶ

| Published : Mar 29 2024, 12:50 AM IST

ಸಂಸ್ಕಾರಯುತ ವ್ಯಕ್ತಿತ್ವ ರೂಪಿಸುವುದು ಶಿಕ್ಷಣದ ಉದ್ದೇಶ
Share this Article
  • FB
  • TW
  • Linkdin
  • Email

ಸಾರಾಂಶ

ಪಠ್ಯೇತರ ಚಟುವಟಿಕೆಗಳ ಜ್ಞಾನ ನೀಡುವುದರ ಮೂಲಕ ಅವರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಬಹುದೊಡ್ಡ ಜವಾಬ್ದಾರಿ

ನರಗುಂದ: ಸಂಸ್ಕಾರಯುತ ವ್ಯಕ್ತಿತ್ವ ರೂಪಿಸುವುದು ಶಿಕ್ಷಣದ ಮೂಲ ಉದ್ದೇಶವಾಗಿದ್ದು, ತರಗತಿಯಲ್ಲಿ ಪಠ್ಯಕ್ರಮ ಅಭ್ಯಾಸಿಸುವುದರ ಜತೆಗೆ ಸಾಮಾಜಿಕ ಕಳಕಳಿಯ ಪಠ್ಯೇತರ ಚಟುವಟಿಕೆಗಳು ಪ್ರಶಿಕ್ಷಣಾರ್ಥಿಗಳನ್ನು ಅನುಭವಶಾಲಿ ನಾಗರಿಕರನ್ನಾಗಿ ಪರಿವರ್ತಿಸುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಡಾ. ಎಸ್‌.ಬಿ.ಯಾದವಾಡ ಹೇಳಿದರು.

ಅವರು ಪಟ್ಟಣದ ಶ್ರೀಯಡಿಯೂರ ಸಿದ್ದಲಿಂಗೇಶ್ವರ ಶಿಕ್ಷಣ ಮಹಾವಿದ್ಯಾಲಯದ ಬಿಇಡಿ ಪ್ರಥಮ ವರ್ಷದ ಶಿಕ್ಷಕ ವಿದ್ಯಾರ್ಥಿಗಳ ಸ್ವಾಗತ ಹಾಗೂ 2023 -4ನೇ ಸಾಲಿನ ಪ್ರಶಿಕ್ಷಣಾರ್ಥಿಗಳ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಸಮಕಾಲಿನ ಜಗತ್ತು ಸ್ಪರ್ಧಾತ್ಮಕತೆಯಿಂದ ಕೂಡಿದೆ, ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಜ್ಞಾನ ನೀಡುವುದರ ಮೂಲಕ ಅವರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಬಹುದೊಡ್ಡ ಜವಾಬ್ದಾರಿ ಹೊಂದಿವೆ. ಪ್ರಶಿಕ್ಷಣಾರ್ಥಿಗಳು ತಮ್ಮ ಓದಿನ ಜತೆಗೆ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ವೀರನಗೌಡ ಪಾಟೀಲ ಮಾತನಾಡಿ, ದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಶಿಕ್ಷಣಾರ್ಥಿಗಳ ಮೇಲೆ ಅಪಾರವಾದ ಜವಾಬ್ದಾರಿ ಇದ್ದು ಅದನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದರು.

ಸಂಸ್ಥೆಯ ನಿರ್ದೇಶಕ ಅಜ್ಜನಗೌಡ ಪಾಟೀಲ ಮಾತನಾಡಿ, ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿ ಪಡೆದ ಅನೇಕ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಬೇರೆ ಬೇರೆ ಸರ್ಕಾರಿ ಇಲಾಖೆಗಳಲ್ಲಿಯೂ ಕೂಡ ಸೇವೆ ಸಲ್ಲಿಸುತ್ತಿದ್ದಾರೆ ಇದಕ್ಕೆ ಕಾರಣ ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ದೊರೆಯುತ್ತಿರುವ ಗುಣಮಟ್ಟದ ತರಬೇತಿ ಶಿಕ್ಷಣವೇ ಕಾರಣ ಇದಕ್ಕೆಲ್ಲ ಶ್ರಮಿಸುತ್ತಿರುವ ಶಿಕ್ಷಕ ವೃಂದದವರಿಗೂ ಕೃತಜ್ಞತೆ ಎಂದರು.

ಸಾನ್ನಿಧ್ಯ ವಹಿಸಿದ್ದ ಭೈರನಹಟ್ಟಿಯ ದೊರೆಸ್ವಾಮಿ ವಿರಕ್ತಮಠದ ಹಾಗೂ ಶಿರೋಳ ತೋಂಟದಾರ್ಯ ಮಠದ ಶಾಂತಲಿಂಗ ಶ್ರೀಗಳು ಮಾತನಾಡಿ, ಮುದ್ದು ಮಕ್ಕಳ ಮನಸ್ಸನ್ನು ಅರಿತು ಅವರನ್ನು ಪ್ರಗತಿಯಡೆಗೆ ಕೊಂಡೊಯ್ಯಬಲ್ಲ ಏಕೈಕ ನೇತಾರ ಶಿಕ್ಷಕ ಇಂತಹ ವೃತ್ತಿ ಪವಿತ್ರವಾದದ್ದಾಗಿದೆ ಇದನ್ನು ನಿಭಾಯಿಸುವ ಸಹನ ಶಕ್ತಿ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದರು.

ಕವಿವಿಯ ಭೂಗೋಳ ಶಾಸ್ತ್ರದಲ್ಲಿ ಪಿಎಚ್ ಡಿ ಪದವಿ ಮಾಡುತ್ತಿರುವ ಶರಣಪ್ಪ ಗೌಡರ ಹಾಗೂ ಶಿವಮೊಗ್ಗ ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರದಲ್ಲಿ ಪಿಎಚ್ ಡಿ ಮಾಡುತ್ತಿರುವ ಮಂಜುನಾಥ ನಾಯಕರ ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.

ಪ್ರಾಚಾರ್ಯ ಆರ್.ಬಿ. ಪಾಟೀಲ ಮಾತನಾಡಿ, ಮುಂದಿನ ಬಾವಿ ಶಿಕ್ಷಕರಾಗಬೇಕು ಎಂದು ಕನಸು ಹೊತ್ತು ಬಂದ ವಿದ್ಯಾರ್ಥಿಗಳೇ ನಿಮಗಿದು ಒಂದು ಸುವರ್ಣ ಅವಕಾಶ ಕಾರಣ ಶಿಕ್ಷಕ ವೃತ್ತಿ ಎಂಬುದು ಒಂದು ತಪಸ್ಸು ಇದ್ದ ಹಾಗೇ ಅದಕ್ಕೆ ದೇವರೇ ಒಲಿಯುತ್ತಾನೆ ಹಾಗಾಗಿ ದೇವರನ್ನು ಕಾಣುವ ಏಕೈಕ ವ್ಯಕ್ತಿ ಅಂದರೆ ಅದು ಶಿಕ್ಷಕರು ಮಾತ್ರ ಎಂದರು.

ಶಿಕ್ಷಣ ಸಂಸ್ಥೆಯ ನಿರ್ದೇಶಕ ಅಜ್ಜನಗೌಡ ಪಾಟೀಲ, ವೀರನಗೌಡ ಪಾಟೀಲ, ಶಿವನಗೌಡ ಪಾಟೀಲ, ಕಾರ್ಯದರ್ಶಿ ಮಹೇಶಗೌಡ ಪಾಟೀಲ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ವಂದನಾ ರೇವತ್ಗಾವ್ ಪ್ರಾರ್ಥಿಸಿದರು. ಭಾಗ್ಯಶ್ರೀ ಉಳ್ಳಾಗಡ್ಡಿ ಸ್ವಾಗತಿಸಿದರು. ಶಿವರಂಜನ್ ಗುರು ಬಸಣ್ಣವರ ವಂದಿಸಿದರು. ಜ್ಯೋತಿ ಜಾಮದಾರ್ ಮತ್ತು ಶ್ರೀದೇವಿ ನಿಡಗುಂದಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಶಿಕ್ಷಣಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.