ಸಾರಾಂಶ
ಮಕ್ಕಳು ಸರ್ವಾಂಗೀಣವಾಗಿ ಬೆಳೆಯಲು ಇಂತಹ ಕಾರ್ಯಕ್ರಮಗಳು ಸಹಕಾರಿ
ಮುಂಡರಗಿ: ಶಿಕ್ಷಣ ಕ್ಷೇತ್ರದಲ್ಲಿ ಕಲೆ ಉತ್ತೇಜಿಸುವ ದೃಷ್ಟಿಯಿಂದ ಪ್ರತಿಭಾ ಕಾರಂಜಿ ಪ್ರಾರಂಭಿಸಲಾಗಿದೆ. ಇದರಿಂದ
ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಗೊಳಿಸುವ ಜತೆಗೆ ಅವರನ್ನು ಕ್ರಿಯಾಶೀಲವನ್ನಾಗಿಸುವುದು ಕಾರ್ಯಕ್ರಮದ ಉದ್ದೇಶ ಎಂದು ಪುರಸಭೆಯ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ ಹೇಳಿದರು.ಇಲ್ಲಿಯ ಶ್ರೀ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಪೂರ್ವ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ಸಂಪೂರ್ಣವಾಗಿ ಬೆಳೆಯಬೇಕಾದರೆ ಇಂತಹ ಪಠ್ಯೇತರ ಚಟುವಟಿಕೆ ಅವಶ್ಯವಾಗಿ ಬೇಕು. ಈ ಸ್ಪರ್ಧೆಯಲ್ಲಿ
ರಾಜ್ಯಮಟ್ಟದಲ್ಲಿ ಭಾಗವಹಿಸುವ ಮಕ್ಕಳಿಗೆ ಹಣಕಾಸಿನ ಸಹಾಯ ಮಾಡುವುದಾಗಿ ತಿಳಿಸಿದರು.ಬಿಇಒ ಎಂ.ಎಚ್. ಪಡ್ನೇಶ ಹಾಗೂ ಸಮನ್ವಯಧಿಕಾರಿ ಗಂಗಾಧರ ಅಣ್ಣಿಗೇರಿ ಮಾತನಾಡಿ, ಮಕ್ಕಳು ಸರ್ವಾಂಗೀಣವಾಗಿ ಬೆಳೆಯಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಿವೆ. ಮಕ್ಕಳ ಪ್ರತಿಭೆ ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವುದು ನಮ್ಮ ಜವಾಬ್ದಾರಿಯಾಗಬೇಕು ಎಂದರು.
ಆಡಳಿತಾಧಿಕಾರಿ ಸಿ.ಎಸ್. ಅರಸನಾಳ ಅಧ್ಯಕ್ಷತೆ ವಹಿಸಿದ್ದರು. ಸಿಆರ್‌ಪಿ ಎಸ್.ಡಿ. ಬಸೇಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಚ್.ಎನ್. ಗೌಡರ, ಎಂ.ಎಂ. ಬಿಚಗತ್ತಿ, ಎನ್.ಎಂ. ಕುಕನೂರ, ಪ್ರಧಾನ ಗುರು ಪರಮೇಶ ನಾಯಕ ಮುಂತಾದವರಿದ್ದರು. ಮುಖ್ಯೋಪಾಧ್ಯಾಯ ದೇವರಡ್ಡಿ ಇಮ್ರಾಪುರ ಸ್ವಾಗತಿಸಿದರು. ಶಿಕ್ಷಕ ಕೊಟ್ರೇಶ ಕಟಗಿ ಕಾರ್ಯಕ್ರಮ ನಿರೂಪಿಸಿದರು.