ಸಂತ್ರಸ್ತರಿಗೆ ಧೈರ್ಯ ತುಂಬಿದ ಸರ್ವೋತ್ತಮ ಜಾರಕಿಹೊಳಿ

| Published : Jul 31 2024, 01:06 AM IST

ಸಂತ್ರಸ್ತರಿಗೆ ಧೈರ್ಯ ತುಂಬಿದ ಸರ್ವೋತ್ತಮ ಜಾರಕಿಹೊಳಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರವಾಹ ಪೀಡಿತ ಪ್ರದೇಶಗಳಿಗೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಮಂಗಳವಾರ ಅರಭಾವಿ ಕ್ಷೇತ್ರದ ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ, ಹುಣಶ್ಯಾಳ ಪಿಜಿ, ವಡೇರಹಟ್ಟಿ ಮತ್ತು ಮುಸಗುಪ್ಪಿ ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಪ್ರವಾಹ ಪೀಡಿತ ಪ್ರದೇಶಗಳಿಗೆ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಮಂಗಳವಾರ ಅರಭಾವಿ ಕ್ಷೇತ್ರದ ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ, ಬಳೋಬಾಳ, ಹುಣಶ್ಯಾಳ ಪಿಜಿ, ವಡೇರಹಟ್ಟಿ ಮತ್ತು ಮುಸಗುಪ್ಪಿ ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.

ಅಲ್ಲಿನ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಮಳೆಯ ಪ್ರಮಾಣ ಸದ್ಯಕ್ಕೆ ಇಳಿಕೆಯಾಗುತ್ತಿದೆ. ಜಾನುವಾರುಗಳಿಗೆ ಮೇವಿನ ಸಮಸ್ಯೆ ಉದ್ಭವವಾಗುತ್ತಿದೆ. ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ನೆರವು ನೀಡಲು ನಾವು ಸಿದ್ಧರಿದ್ದೇವೆ. ಯಾವುದಕ್ಕೂ ಧೃತಿಗೆಡಬೇಡಿ. ನಿಮ್ಮ ನೋವುಗಳನ್ನು ನಾವು ಪರಿಹರಿಸುತ್ತೇವೆ. ಸರ್ಕಾರದಿಂದ ಸಿಗಬೇಕಿರುವ ಸೌಲಭ್ಯಗಳನ್ನು ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಸಂತ್ರಸ್ತರಿಗೆ ಅಗತ್ಯವಿರುವ ಕಾಳಜಿ ಕೇಂದ್ರ ಪ್ರಾರಂಭಿಸಿದ್ದು, ಅಲ್ಲಿ ಊಟ, ವಸತಿ ಸೌಕರ್ಯ ಮಾಡಲಾಗಿದೆ ಎಂದು ಹೇಳಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನಿರ್ದೇಶನದ ಹಿನ್ನೆಲೆಯಲ್ಲಿ ಸಂತ್ರಸ್ತರನ್ನು ಖುದ್ದು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸುತ್ತಿರುವುದಾಗಿ ಹೇಳಿದರು.ಬಳಿಕ ಸರ್ವೋತ್ತಮ ಜಾರಕಿಹೊಳಿ ಅವರು ಲೋಳಸೂರ ಸೇತುವೆ ವೀಕ್ಷಿಸಿದರು. ನಂತರ ವಿವಿಧ ಗ್ರಾಮಗಳಿಗೆ ತೆರಳಿ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕರಾದ ದಾಸಪ್ಪ ನಾಯಿಕ, ಸಿ.ಪಿ.ಯಕ್ಸಂಬಿ, ಆಯಾ ಗ್ರಾಮಗಳ ಪ್ರಮುಖರು, ಉಸ್ತುವಾರಿ ಅಧಿಕಾರಿಗಳು, ಪಿಡಿಒಗಳು, ಗ್ರಾಮ ಆಡಳಿತ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.