ಹೆಚ್ಚಿದ ಗಾಳಿಯಬ್ಬರ: ಕಬ್ಬಿನಮನೆಯಲ್ಲಿ ರಸ್ತೆಗೆ ಮರ

| Published : Jul 23 2024, 12:43 AM IST

ಸಾರಾಂಶ

ಬಾಳೆಹೊನ್ನೂರು, ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಮಳೆ ಕಡಿಮೆಯಾಗಿದ್ದು, ಗಾಳಿಯ ಅಬ್ಬರ ಹೆಚ್ಚಾಗಿದೆ. ಹಲಸೂರು ಸಮೀಪದ ಕಬ್ಬಿನಮನೆ ಎಂಬಲ್ಲಿ ಸೋಮವಾರ ಬೆಳಿಗ್ಗೆ ಮಾಗುಂಡಿ-ಮಹಲ್ಗೋಡು ತೆರಳುವ ರಸ್ತೆಗೆ ಬೃಹತ್ ಗಾತ್ರದ ಮರವೊಂದು ಬಿದ್ದಿದ್ದು, ಈ ಭಾಗದಲ್ಲಿ ಸಂಚರಿಸುವ ವಾಹನಗಳ ಸಂಪರ್ಕ ವ್ಯವಸ್ಥೆ ಕಡಿತಗೊಂಡಿತ್ತು. ಬಳಿಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು

ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೋಮವಾರ ಮಳೆ ಕಡಿಮೆಯಾಗಿದ್ದು, ಗಾಳಿಯ ಅಬ್ಬರ ಹೆಚ್ಚಾಗಿದೆ.

ಹಲಸೂರು ಸಮೀಪದ ಕಬ್ಬಿನಮನೆ ಎಂಬಲ್ಲಿ ಸೋಮವಾರ ಬೆಳಿಗ್ಗೆ ಮಾಗುಂಡಿ-ಮಹಲ್ಗೋಡು ತೆರಳುವ ರಸ್ತೆಗೆ ಬೃಹತ್ ಗಾತ್ರದ ಮರವೊಂದು ಬಿದ್ದಿದ್ದು, ಈ ಭಾಗದಲ್ಲಿ ಸಂಚರಿಸುವ ವಾಹನಗಳ ಸಂಪರ್ಕ ವ್ಯವಸ್ಥೆ ಕಡಿತಗೊಂಡಿತ್ತು. ಬಳಿಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಸೋಮವಾರ ಬೆಳಗ್ಗಿನಿಂದ ಒಂದೆರಡು ಬಾರಿ ಬಿಸಿಲಿನ ದರ್ಶನವಾಗಿದ್ದು, ಉಳಿದಂತೆ ಆಗಾಗ ಸಾಧಾರಣ ಪ್ರಮಾಣ ದಲ್ಲಿ ಮಳೆ ಸುರಿಯಿತು. ಬಾರೀ ಪ್ರಮಾಣದಲ್ಲಿ ಗಾಳಿ ಬೀಸುತ್ತಿದ್ದು, ಹಲವು ಕಡೆಗಳಲ್ಲಿ ದಿನನಿತ್ಯ ಮರಗಳು ಉರುಳುತ್ತಿವೆ. ಅಡಕೆ ತೋಟಗಳಲ್ಲಿ ಅಡಕೆ ಮರಗಳು ಗಾಳಿಗೆ ತುಂಡಾಗಿ ಬೀಳುತ್ತಿವೆ.ವಸ್ತಾರೆ ಸಮೀಪದಲ್ಲಿ ಬಾಳೆಹೊನ್ನೂರು-ಶೃಂಗೇರಿ-ಕೊಪ್ಪ-ಜಯಪುರ ಮುಂತಾದ ಕಡೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಟವರ್ ತುಂಡಾಗಿ ಬಿದ್ದಿದ್ದು, ಈ ಭಾಗಕ್ಕೆ ಸಂಪೂರ್ಣ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಕೆಲವು ಗ್ರಾಮಗಳಲ್ಲಿ ಕಳೆದ ಐದಾರು ದಿನಗಳಿಂದ ವಿದ್ಯುತ್ ಇಲ್ಲದೇ ಸಂಪೂರ್ಣ ಕತ್ತಲೆಯಲ್ಲಿ ಮುಳುಗಿವೆ. ವಿದ್ಯುತ್ ಇಲ್ಲದೇ ಹಲವು ಕಡೆಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿದೆ. ೨೨ಬಿಹೆಚ್‌ಆರ್ ೨: ಬಾಳೆಹೊನ್ನೂರು ಸಮೀಪದ ಹಲಸೂರು ಕಬ್ಬಿನಮನೆ ಗ್ರಾಮದಲ್ಲಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ.