ವಿಧಾನ ಪರಿಷತ್‌ ಚುನಾವಣೆಯ ಕಣ ರಂಗೇರಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಮಂಗಳವಾರ ಒಟ್ಟು 31 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಿಂದಾಗಿ ನಾಲ್ಕು ಕ್ಷೇತ್ರಗಳಿಂದ ಒಟ್ಟಾರೆ 75 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ವಿಧಾನ ಪರಿಷತ್‌ ಚುನಾವಣೆಯ ಕಣ ರಂಗೇರಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಮಂಗಳವಾರ ಒಟ್ಟು 31 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಿಂದಾಗಿ ನಾಲ್ಕು ಕ್ಷೇತ್ರಗಳಿಂದ ಒಟ್ಟಾರೆ 75 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ.

ಪಶ್ಚಿಮ ಪದವೀಧರ ಮತಕ್ಷೇತ್ರದಿಂದ ಮಂಗಳವಾರ ಒಟ್ಟು 21 ನಾಮಪತ್ರಗಳು ಸಲ್ಲಿಕೆಯಾಗಿವೆ. ಬಿಜೆಪಿಯಿಂದ ಎಸ್‌.ವಿ.ಸಂಕನೂರ ನಾಮಪತ್ರ ಸಲ್ಲಿಸಿದರು. ಇದರಿಂದಾಗಿ ಈ ಕ್ಷೇತ್ರದಲ್ಲಿ ಈವರೆಗೆ 18 ಅಭ್ಯರ್ಥಿಗಳಿಂದ 36 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಒಂದು ಸ್ಥಾನಕ್ಕಾಗಿ ಮಂಗಳವಾರ 8 ಅಭ್ಯರ್ಥಿಗಳಿಂದ 9 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಿಂದಾಗಿ ಒಟ್ಟಾರೆಯಾಗಿ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳಿಂದ ಒಟ್ಟು 24 ನಾಮಪತ್ರ‌ಗಳು ಸಲ್ಲಿಕೆಯಾದಂತಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಒಂದು ಸ್ಥಾನಕ್ಕಾಗಿ ಒಟ್ಟಾರೆ 10 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ. ಇದೇ ವೇಳೆ, ಆಗ್ನೇಯ ಪದವೀಧರ ಕ್ಷೇತ್ರದಿಂದ ಒಟ್ಟು 5 ನಾಮಪತ್ರಗಳು ಸಲ್ಲಿಕೆಯಾಗಿವೆ.

ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅ.9ರವರೆಗೆ ಉಮೇದುವಾರಿಕೆ ವಾಪಸ್‌ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಅ.23ರಂದು ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಅ.27ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ.

ಜನತಾ ಚಳವಳಿ ಭಾರತ ಪಕ್ಷದಿಂದ ಶಿವಕುಮಾರ ತಳವಾರ, ಕಿತ್ತೂರು ಕಲ್ಯಾಣ ಕರ್ನಾಟಕ ಸೇನಾ ಪಕ್ಷದಿಂದ ಮಲ್ಲಿಕಾರ್ಜುನ ಚನ್ನಪ್ಪ ಗಂಗಾಧರ ಹಾಗೂ ಪಕ್ಷೇತರರಾಗಿ ಉಮೇಶ ದೈವಜ್ಞ, ಜಿಶಾನ ಸಿರಸಂಗಿ, ಅಬ್ದುಲ ಮುನ್ನನ, ಇಮ್ರಾನ್ ಕೂಡಲ, ಆರ್.ಎಂ.ಕುಬೇರಪ್ಪ, ಸಲೀಮ ಜವಳಿ, ಸುರೇಶ ಎಸ್.ಬಿಸ್ಟನಗೌಡರ, ಸಂತೋಷ ವೆರ್ಣೇಕರ ನಾಮಪತ್ರ ಸಲ್ಲಿಸಿದರು. ಈ ಮಧ್ಯೆ, ಪಕ್ಷೇತರರಾಗಿ ಬಸವರಾಜ ಕೊಟಗಿ, ಜೀಶಾನ ಅಹ್ಮದಖಾನ ಪಠಾಣ, ಕಾಂತಕುಮಾರ್, ಕೆಆರ್‌ಎಸ್‌ ವತಿಯಿಂದ ನಿಶಾಂತ ಬಂಕಾಪೂರ ಮರುಪಶ್ಚಿಮ ಪದವೀಧರ ಕ್ಷೇತ್ರದಿಂದ ಸಂಕನೂರ ಕಣಕ್ಕೆ:

ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಎಸ್.ವಿ.ಸಂಕನೂರ ಮಂಗಳವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಧಾರವಾಡದ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು, ಬಳಿಕ ಧಾರವಾಡದ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ವಿಪ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಚಿವರಾದ ಬಿ.ಸಿ.ಪಾಟೀಲ, ಸಿ.ಸಿ.ಪಾಟೀಲ್, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಮತ್ತಿತರ ನಾಯಕರು ಸಾಥ್‌ ನೀಡಿದರು.