ಜೆಡಿಎಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ಮಾಜಿ ಪ್ರಧಾನಿ ದೇವೇಗೌಡರು ಶಾಸಕರಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ರೈತರ ಏಳಿಗೆಗೆ ಜನಪರ ಕಾರ್ಯಗಳನ್ನು ಮಾಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅವರು ನೀಡಿದ ಸಲಹೆ ಹಾಗೂ ಮಾರ್ಗದರ್ಶನದಿಂದ ಶಿಕ್ಷಣ ಕ್ಷೇತ್ರದ ಪ್ರಗತಿ, ಸರ್ಕಾರಿ ಕಾಲೇಜುಗಳ ಅಭಿವೃದ್ಧಿಯಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ದೊರೆತ ಸದುಪಯೋಗವನ್ನು ಬಳಸಿಕೊಂಡು ಉನ್ನತ ವ್ಯಾಸಂಗದಲ್ಲೂ ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದರು. ಹಾಸನದ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಕಾರ್ಖಾನೆಗಳ ಸ್ಥಾಪನೆಗೆ ಅವಕಾಶ ಕಲ್ಪಿಸುವ ಮೂಲಕ ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಜೀವನ ರೂಪಿಸಿಕೊಂಡಿದ್ದಾರೆ ಎಂದು ಶಾಸಕ ಎಚ್. ಡಿ. ರೇವಣ್ಣ ತಿಳಿಸಿದರು.

ಹೊಳೆನರಸೀಪುರ: ಮಾಜಿ ಪ್ರಧಾನಿ ದೇವೇಗೌಡರ ೬೦ ವರ್ಷದ ರಾಜಕೀಯ ಜೀವನದಲ್ಲಿ ಹಾಸನ ಜಿಲ್ಲೆಯಲ್ಲಿ ಬಹಳ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ರೈಲ್ವೆ ಯೋಜನೆಗಳನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹಾಸನದ ಕೈಗಾರಿಕಾ ಪ್ರದೇಶದಲ್ಲಿ ಖಾಸಗಿ ಕಾರ್ಖಾನೆಗಳ ಸ್ಥಾಪನೆಗೆ ಅವಕಾಶ ಕಲ್ಪಿಸುವ ಮೂಲಕ ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಜೀವನ ರೂಪಿಸಿಕೊಂಡಿದ್ದಾರೆ ಎಂದು ಶಾಸಕ ಎಚ್. ಡಿ. ರೇವಣ್ಣ ತಿಳಿಸಿದರು.

ಪಟ್ಟಣದ ಚೆನ್ನಾಂಬಿಕ ಕಲ್ಯಾಣ ಮಂಟಪದಲ್ಲಿ ಸೋಮವಾರ ಆಯೋಜನೆ ಮಾಡಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ಮಾಜಿ ಪ್ರಧಾನಿ ದೇವೇಗೌಡರು ಶಾಸಕರಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ರೈತರ ಏಳಿಗೆಗೆ ಜನಪರ ಕಾರ್ಯಗಳನ್ನು ಮಾಡಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅವರು ನೀಡಿದ ಸಲಹೆ ಹಾಗೂ ಮಾರ್ಗದರ್ಶನದಿಂದ ಶಿಕ್ಷಣ ಕ್ಷೇತ್ರದ ಪ್ರಗತಿ, ಸರ್ಕಾರಿ ಕಾಲೇಜುಗಳ ಅಭಿವೃದ್ಧಿಯಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ದೊರೆತ ಸದುಪಯೋಗವನ್ನು ಬಳಸಿಕೊಂಡು ಉನ್ನತ ವ್ಯಾಸಂಗದಲ್ಲೂ ಪ್ರಗತಿ ಸಾಧಿಸಲು ಸಾಧ್ಯವಾಗಿದೆ ಎಂದರು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ಸಂಕಷ್ಟಕ್ಕೆ ಸ್ಪಂದಿಸುವ ಸಲುವಾಗಿ ೫೩೦ ಕೋಟಿ ರು.ಗಳನ್ನು ಮನ್ನಾ ಮಾಡುವ ಮೂಲಕ ರೈತರ ಸಮಸ್ಯೆಗೆ ಸ್ಪಂಧಿಸಿದ್ದಾರೆ ಜತೆಗೆ ರಸ್ತೆಗಳು, ಫ್ಲೈ ಓವರ್‌ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಸಾಕಷ್ಟು ಹಣ ನೀಡಿದ್ದಾರೆ. ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಮಳೆ ಹಾನಿ ಹಾಗೂ ಸಂಕಷ್ಟಕ್ಕೆ ಸಿಲುಕಿದವರಿಗೆ ೨ ಸಾವಿರ ಮನೆಳ ನಿರ್ಮಾಣಕ್ಕೆ ೧೦೦ ಕೋಟಿ ರು.ಗಳನ್ನು ನೀಡಿದ್ದೇವೆ. ಆದರೆ ಕಳೆದ ೨.೫ ವರ್ಷದ ಕಾಂಗ್ರೆಸ್ ಆಡಳಿತದಲ್ಲಿ ಚನ್ನರಾಯಪಟ್ಟಣ ರಸ್ತೆಯು ಗುಂಡಿಗಳು ಮಯವಾಗಿದೆ. ಕಂದಾಯ ಇಲಾಖೆಯಲ್ಲಿ ದರಖಾಸ್ತು ಮಂಜೂರಾತಿ ಆಗುತ್ತಿಲ್ಲ, ನಮ್ಮ ತಾಲೂಕಿನಲ್ಲಿ ಸುಮಾರು ೧೫ರಿಂದ ೨೦ ಸಾವಿರ ಅರ್ಜಿಗಳು ವಿಲೇವಾರಿಯಾಗಿಲ್ಲ. ಇಂದಿನ ದಿನಗಳಲ್ಲಿ ಪೊಲೀಸ್ ಇಟ್ಟುಕೊಂಡು ಹೆದರಿಸುವ ಕಾರ್ಯಕ್ರಮ ನಡೆಯುತ್ತಿದೆ. ನಮ್ಮ ಕಾರ್ಯಕರ್ತರಿಗೆ ನೋವಾಗಲು ನಾ ಬಿಡೊಲ್ಲ, ಚಿಂತಿಸಬೇಡಿ ಎಂದರು. ಪರಿಶಿಷ್ಟ ಸಮಾಜ, ಹಿಂದುಳಿದವರು, ಮುಸ್ಲೀಮರು ಹಾಗೂ ಎಲ್ಲರೂ ನನಗೆ ಬೆಂಬಲವಾಗಿ ನಿಂತಿದ್ದಾರೆ. ಕೇವಲ ಒಕ್ಕಲಿಗರ ಬೆಂಬಲದಿಂದ ಬೆಳೆಯಲು ಸಾಧ್ಯವಿಲ್ಲ. ಎಲ್ಲಾ ಜನಾಂಗದವರು ಬೆಂಬಲದಿಂದ ಶಾಸಕನಾಗಲು ಸಾಧ್ಯವಾಗಿದೆ. ಪಟ್ಟಣದ ಅಯ್ಯಪ್ಪಸ್ವಾಮಿ ದೇವಸ್ಥಾನ ರಘುಪತಿ ದೇವಸ್ಥಾನ ಹಾಗೂ ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಜನರ ನಂಬಿಕೆ ಮತ್ತು ವಿಶ್ವಾಸಕ್ಕೆ ಪೂರಕವಾಗಿ ದೇವಾಲಯಗಳ ಅಭಿವೃದ್ಧಿಗೆ ಹಣ ಸಹಾಯ ಮಾಡಲಾಗಿದೆ ಎಂದರು. ಜನವರಿ ೨೪ನೇ ತಾರೀಕು ಹಾಸನದಲ್ಲಿ ನಡೆಯುವ ಜೆಡಿಎಸ್ ಸಮಾವೇಶದಲ್ಲಿ ದೇವೇಗೌಡರು, ಕುಮಾರಣ್ಣ ಹಾಗೂ ಶಾಸಕರು ಕ್ಷೇತ್ರಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಮತ್ತು ಶಾಸಕನಾಗಿ ನಾ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಎಲ್ಲರೂ ತಪ್ಪದೇ ಬನ್ನಿ ಎಂದು ಕೋರಿದರು.

ಕಾಂಗ್ರೆಸ್‌ ಸಮಾವೇಶಕ್ಕೆ ಕಂದಾಯ ಇಲಾಖೆಯಿಂದ ೨.೫ ಕೋಟಿ:

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದವರು ಕಳೆದ ೨.೫ ವರ್ಷದಲ್ಲಿ ೨ ಸಮಾವೇಶ ಮಾಡಿದ್ದಾರೆ. ಅವರು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು, ನೀರು ಘಂಟಿಗಳನ್ನು ಸೇರಿಸಿದ್ದಾರೆ. ಜಿಲ್ಲಾಧಿಕಾರಿಗಳಿಗೆ ತಾಲೂಕು ಅಧಿಕಾರಿಗಳು ಸಭೆ ನಡೆಸುವುದೇ ಕೆಲಸ. ಇಪ್ಪತ್ತು ಮೂವತ್ತು ಸಾವಿರ ಜನರನ್ನು ಸೇರಿಸಲು ಜಿಲ್ಲೆಯ ಜನರ ತೆರಿಗೆ ಹಣ, ಕಂದಾಯ ಇಲಾಖೆಯಿಂದ ೨.೫ ಕೋಟಿ ಹಣ ನೀಡಿದ್ದಾರೆ ಎಂದು ಆರೋಪಿಸಿದರು. ಶಾಸಕ ಎ. ಮಂಜು, ವಕೀಲರಾದ ರಾಜಶೇಖರ್ ಹಾಗೂ ಪೂರ್ಣೇಶ್, ಜಿಪಂ ಮಾಜಿ ಸದಸ್ಯರಾದ ಎಚ್.ವೈ. ಚಂದ್ರಶೇಖರ್ ಹಾಗೂ ಕೃಷ್ಣೇಗೌಡ, ತಾಪಂ ಮಾಜಿ ಸದಸ್ಯ ಗುಡ್ಡೇನಹಳ್ಳಿ ಶಿವಕುಮಾರ್, ಪುರಸಭೆ ಮಾಜಿ ಅಧ್ಯಕ್ಷ ಎ.ಶ್ರೀಧರ್, ಗಿರೀಶ್ ಇತರರು ಮಾತನಾಡಿದರು.ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್‌. ಬಿ. ಪುಟ್ಟೇಗೌಡ ಪ್ರಾರ್ಥಿಸಿದರು, ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್.ಎಸ್. ಪುಟ್ಟಸೋಮಪ್ಪ ಸ್ವಾಗತಿಸಿದರು ಹಾಗೂ ತಾಪಂ ಮಾಜಿ ಉಪಾಧ್ಯಕ್ಷ ಜವರೇಗೌಡ ನಿರೂಪಿಸಿದರು. ಉದ್ಯಮಿ ಟಿ.ಶಿವಕುಮಾರ್, ಸೋಮಶೇಖರ್ ಹಾಗೂ ಕೆ.ಎಂ.ಮೋಹನ್, ತಾಪಂ ಮಾಜಿ ಸದಸ್ಯ ಬಾಗಿವಾಳು ಬಸವರಾಜು, ಹೇಮಾವತಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಮುತ್ತಿಗೆ ರಾಜೇಗೌಡ, ಪುರಸಭೆ ಮಾಜಿ ಅಧ್ಯಕ್ಷ ಎ.ಜಗನ್ನಾಥ್, ಕೋಡಿಹಳ್ಳಿ ನಾಗರಾಜ್ ಇತರರು ಇದ್ದರು.