ಸಾರಾಂಶ
ನರಗುಂದದಲ್ಲಿ ನಡೆಯುತ್ತಿರುವ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ 3040ನೇ ದಿನ ಪದಾರ್ಪಣೆ ಮಾಡಿದೆ.
ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ
ನರಗುಂದ: ರಾಜ್ಯ ಸರ್ಕಾರ ರೈತ ಸಮುದಾಯಕ್ಕೆ ಅನುಕೂಲವಾಗುವ ಕೃಷಿ ಭಾಗ್ಯ ಯೋಜನೆ ಮರು ಜಾರಿಗೆ ತಂದಿರುವುದು ರೈತರಿಗೆ ಹರ್ಷ ತಂದಿದೆ ಎಂದು ಕರ್ನಾಟಕ ರೈತ ಸೇನಾ ಸಂಘಟನೆ ರಾಜ್ಯ ಕಾರ್ಯದರ್ಶಿ ಎಸ್.ಬಿ. ಜೋಗಣ್ಣವರ ಹೇಳಿದರು.ಅವರು 3040ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಯ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿದರು.
ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ರೈತರ ಜಮೀನಗಳಲ್ಲಿ ಕೃಷಿ ಭಾಗ್ಯ ಯೋಜನೆಯಲ್ಲಿ ಕೃಷಿ ಹೊಂಡಗಳನ್ನು ಉಚಿತವಾಗಿ ಸರ್ಕಾರ ಮಾಡಿದ್ದರಿಂದ ನೂರಾರು ರೈತ ಕುಟುಂಬಗಳು ಇಂದು ಕೃಷಿ ಹೊಂಡದ ನೀರು ಬೆಳೆಗಳಿಗೆ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಡವಾಗಿದ್ದಾರೆ. ಆದರೆ ನಂತರ ದಿನಗಳಲ್ಲಿ ಬೇರೆ ಪಕ್ಷದ ಸರ್ಕಾರ ರಾಜ್ಯದಲ್ಲಿ ಬಂದಿದ್ದರಿಂದ ಈ ಕೃಷಿ ಭಾಗ್ಯ ಯೋಜನೆ ನಿಂತಿತ್ತು. ಆದರೆ ನಂ.9ರ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೃಷಿ ಭಾಗ್ಯ ಯೋಜನೆ ಮರು ಜಾರಿ ಮಾಡಿದ್ದರು ಹರ್ಷ ತಂದಿದೆ ಎಂದು ಹೇಳಿದರು. ರೈತ ಮುಖಂಡ ವೀರಬಸಪ್ಪ ಹೂಗಾರ ಮಾತನಾಡಿ, ಪ್ರಸುಕ್ತ ವರ್ಷ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ತಾಲೂಕಿನಲ್ಲಿ ಮಳೆಯಾಗದೆ ರೈತರು ತ್ರೀವು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವರ್ಷ ರೈತರು ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿ ಫಸಲ ಬೀಮಾ ಬೆಳೆ ವಿಮೆ ಯೋಜನೆ ಅಡಿಯಲ್ಲಿ ರೈತರು ಬೆಳೆ ವಿಮೆ ತುಂಬಿದ್ದಾರೆ. ಈ ಬೆಳೆ ವಿಮೆ ಕಂಪನಿಯವರು ಕೇವಲ ಹೆಸರು ಬೆಳೆಯ ವಿಮೆ ಪರಿಹಾರ ಹಾಕಿ ಕೈ ತೊಳೆದುಕೊಂಡಿದ್ದಾರೆ. ಆದ್ದರಿಂದ ಕೃಷಿ ಮಂತ್ರಿಗಳಾದ ಚಲವರಾಮಸ್ವಾಮಿ ರೈತರ ಬೆಳೆ ವಿಮೆ ತುಂಬಿಕೊಂಡ ಖಾಸಗಿ ಬೆಳೆ ವಿಮೆ ಕಂಪನಿಯವರಿಗೆ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡಲು ಸೂಚನೆ ನೀಡಬೇಕೆಂದು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಪರಶುರಾಮ ಜಂಬಗಿ, ಸುಭಾಸ ಗಿರಿಯಣ್ಣವರ, ಹನಮಂತ ಸರನಾಯ್ಕರ, ಫಕೀರಪ್ಪ ಅಣ್ಣಿಗೇರಿ, ಅರ್ಜುನ ಮಾನೆ, ಮಲ್ಲೇಶ ಅಣ್ಣಿಗೇರಿ, ಅನಸವ್ವ ಶಿಂದೆ, ನಾಗರಾತ್ನ ಸವಳಭಾವಿ, ವಾಸು ಚವಾಣ, ವಿಜಯಕುಮಾರ ಹೂಗಾರ, ಯಲ್ಲಪ್ಪ ಚಲವಣ್ಣವರ, ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.