ಕಾಂಗ್ರೆಸಿನ ಫೈಬರ್‌ಗೆ ಕೊನೆ ಮೊಳೆ ಜಡಿದ ತಮ್ಮದೇ ಸರ್ಕಾರದ ತಜ್ಞರ ವರದಿ: ಶ್ರೀನಿಧಿ ಹೆಗ್ಡೆ

| Published : Jul 17 2025, 12:42 AM IST

ಕಾಂಗ್ರೆಸಿನ ಫೈಬರ್‌ಗೆ ಕೊನೆ ಮೊಳೆ ಜಡಿದ ತಮ್ಮದೇ ಸರ್ಕಾರದ ತಜ್ಞರ ವರದಿ: ಶ್ರೀನಿಧಿ ಹೆಗ್ಡೆ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್ ದ್ವೇಷದ ರಾಜಕಾರಣಕ್ಕೆ ಅಭಿವೃದ್ಧಿಯನ್ನೇ ಸಹಿಸಿಕೊಳ್ಳದ ಕಾಂಗ್ರೆಸ್ ಪಕ್ಷ ಉಡುಪಿಯ ಪ್ರವಾಸೋದ್ಯಮಕ್ಕೆ ಮುನ್ನುಡಿ ಆಗುತ್ತಿದ್ದ ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕಾರ್ಪಣೆ ಆದ ಪರಶುರಾಮ ಥೀಮ್ ಪಾರ್ಕ್ ಅನ್ನು ಕಾಂಗ್ರೆಸ್ ಪಕ್ಷ ಮಿತಿ ಮಿರಿ ಅಪಪ್ರಚಾರ ಮಾಡುವ ಮೂಲಕ ಕೇವಲ ಕಾರ್ಕಳ ಕ್ಷೇತ್ರ ಮಾತ್ರವಲ್ಲದೆ ಇಡೀ ಜಿಲ್ಲೆಗೆ ಪ್ರವಾಸೋದ್ಯಮದಲ್ಲಿ ಹಿನ್ನಡೆ ಉಂಟು ಮಾಡಿದೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಲಾದ ಪರಶುರಾಮ ದೇವರ ಮೂರ್ತಿ ಫೈಬರ್ ಪ್ರತಿಮೆ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದ್ದು, ಈ ಮೂಲಕ ರಾಜ್ಯಾದ್ಯಂತ ಫೈಬರ್ ಪ್ರತಿಮೆ ಎಂದು ಆಧಾರ ರಹಿತ ಅಪಪ್ರಚಾರ ಮಾಡಿದ್ದ ಕಾಂಗ್ರೆಸ್‌ ನಾಯಕರಿಗೆ ಸ್ಪಷ್ಟ ಸೋಲಾಗಿದೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಹೇಳಿದ್ದಾರೆ.ಕಾಂಗ್ರೆಸ್ ದ್ವೇಷದ ರಾಜಕಾರಣಕ್ಕೆ ಅಭಿವೃದ್ಧಿಯನ್ನೇ ಸಹಿಸಿಕೊಳ್ಳದ ಕಾಂಗ್ರೆಸ್ ಪಕ್ಷ ಉಡುಪಿಯ ಪ್ರವಾಸೋದ್ಯಮಕ್ಕೆ ಮುನ್ನುಡಿ ಆಗುತ್ತಿದ್ದ ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಲೋಕಾರ್ಪಣೆ ಆದ ಪರಶುರಾಮ ಥೀಮ್ ಪಾರ್ಕ್ ಅನ್ನು ಕಾಂಗ್ರೆಸ್ ಪಕ್ಷ ಮಿತಿ ಮಿರಿ ಅಪಪ್ರಚಾರ ಮಾಡುವ ಮೂಲಕ ಕೇವಲ ಕಾರ್ಕಳ ಕ್ಷೇತ್ರ ಮಾತ್ರವಲ್ಲದೆ ಇಡೀ ಜಿಲ್ಲೆಗೆ ಪ್ರವಾಸೋದ್ಯಮದಲ್ಲಿ ಹಿನ್ನಡೆ ಉಂಟು ಮಾಡಿದೆ.ಪ್ರತಿಮೆಯ ಸೊಂಟದ ಮೇಲ್ಭಾಗ ಮರು ವಿನ್ಯಾಸಕ್ಕೆ ತೆಗೆದು ಇಡಲಾಗಿತ್ತು, ಆದರೆ ಇದನ್ನೇ ತನ್ನ ರಾಜಕೀಯ ಬೇಲೆ ಬೇಯಿಸಲು ಬಳಸಿಕೊಂಡು ಕಾಂಗ್ರೆಸ್ ಫೈಬರ್ ಪ್ರತಿಮೆ ಎಂದು ಪ್ರವಾಸೋದ್ಯಮದಲ್ಲಿ ಹೊಸ ಭಾಷ್ಯ ಬರೆಯಬಹುದಿದ್ದ ಪರಶುರಾಮ ಥೀಮ್ ಪಾರ್ಕ್‌ಗೆ ಸುಳ್ಳು ಪ್ರಚಾರದ ಮೂಲಕ ಉಡುಪಿ ಜಿಲ್ಲೆಯ ಧಾರ್ಮಿಕ ಪ್ರವಾಸೋದ್ಯಮಕ್ಕೆ ಕಪ್ಪು ಚುಕ್ಕೆ ಇಟ್ಟಿದ್ದಾರೆ. ಇನ್ನಾದರೂ ರಾಜ್ಯ ಸರ್ಕಾರ ಈ ಯೋಜನೆಗೆ ತಾನು ತಡೆ ಹಿಡಿದಿರುವ ಅನುದಾನವನ್ನು ತಕ್ಷಣ ಬಿಡುಗಡೆಗೊಳಿಸಿ ಥೀಮ್ ಪಾರ್ಕ್ ಯೋಜನೆ ಪೂರ್ಣಗೊಳಿಸಿ ಪ್ರವಾಸೋದ್ಯಮ ಹಾಗೂ ಅಭಿವೃದ್ದಿಗೆ ಅನುವುಮಾಡಬೇಕು ಎಂದು ಶ್ರೀನಿಧಿ ಹೆಗ್ಡೆ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.