ಸಾರಾಂಶ
ಮಾಗಡಿ: ಮಾಗಡಿ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕೆಂಚೇಗೌಡ ಹಾಗೂ ಸದಸ್ಯರು ಅಧಿಕಾರ ಸ್ವೀಕಾರ ಮಾಡಿದರು.
ಮಾಗಡಿ: ಮಾಗಡಿ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕೆಂಚೇಗೌಡ ಹಾಗೂ ಸದಸ್ಯರು ಅಧಿಕಾರ ಸ್ವೀಕಾರ ಮಾಡಿದರು.
ಪಟ್ಟಣದ ಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ನೂತನ ಅಧ್ಯಕ್ಷರು ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರನ್ನು ಸಂಸದ ಡಿ.ಕೆ. ಸುರೇಶ್, ಶಾಸಕ ಬಾಲಕೃಷ್ಣ ಹಾಗೂ ಒಕ್ಕಲಿಗ ಸಂಘದ ನಿರ್ದೇಶಕ ಅಶೋಕ್ ಗುರುತಿಸಿ ನನಗೆ ದೊಡ್ಡ ಜವಾಬ್ದಾರಿ ವಹಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷದಲ್ಲೇ ಸಕ್ರಿಯನಾಗಿದ್ದು ಪಕ್ಷ ನನಗೆ ನೀಡಿದ ಅಧಿಕಾರವನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ಈಗಾಗಲೇ ಶಾಸಕ ಬಾಲಕೃಷ್ಣ ಪಟ್ಟಣದ ಅಭಿವೃದ್ಧಿ ಹಿನ್ನೆಲೆಯಲ್ಲಿ ಬ್ಲೂಪ್ರಿಂಟ್ ಸಿದ್ದಪಡಿಸಿದ್ದು ಅದರಂತೆ ಪಟ್ಟಣದ ಅಭಿವೃದ್ಧಿಗೆ ಪ್ರಾಧಿಕಾರದಿಂದ ಪ್ರಾಮಾಣಿಕ ಕೆಲಸ ಮಾಡಲಾಗುತ್ತದೆ. ಕಾಂಗ್ರೆಸ್ ಮುಖಂಡರ ಸಹಕಾರ ಸಲಹೆ ಪಡೆದು ಅಭಿವೃದ್ಧಿ ಪಡಿಸುವತ್ತ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದರು.ಬಮೂಲ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ನರಸಿಂಹಮೂರ್ತಿ ಮಾತನಾಡಿ, ಕಾಂಗ್ರೆಸ್ ಪಕ್ಷ ಎಲ್ಲಾ ವರ್ಗದ ಹಿತದೃಷ್ಟಿಯಿಂದ ಅಧಿಕಾರ ನೀಡುತ್ತಾ ಬಂದಿದ್ದು ಶಾಸಕ ಬಾಲಕೃಷ್ಣರು ಕಾರ್ಯಕರ್ತರನ್ನು ಗುರುತಿಸುತ್ತಿದ್ದು ಒಂದೊಂದೇ ಜವಾಬ್ದಾರಿಯನ್ನು ನೀಡುತ್ತಾ ಎಲ್ಲಾ ವರ್ಗದವರಿಗೂ ಅಧಿಕಾರ ಹಂಚಿಕೆ ಮಾಡುತ್ತಿದ್ದಾರೆ. ಮಾಗಡಿ ಯೋಜನೆ ಪ್ರಾಧಿಕಾರದಿಂದ ಅಭಿವೃದ್ಧಿ ಕಾರ್ಯಗಳಿಗೆ ಸಂಸದ ಡಿ.ಕೆ. ಸುರೇಶ್ ಹಾಗೂ ಶಾಸಕ ಬಾಲಕೃಷ್ಣ ಮಾರ್ಗದರ್ಶನದಲ್ಲಿ ಕೆರೆ ಅಭಿವೃದ್ಧಿ, ರಸ್ತೆ ಅಭಿವೃದ್ಧಿ ಸೇರಿದಂತೆ ಮೂಲ ಸೌಲಭ್ಯಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ನೂತನ ಅಧ್ಯಕ್ಷರಿಗೆ ಸಾಕಷ್ಟು ಜವಾಬ್ದಾರಿ ಇದ್ದು ಎಲ್ಲರ ಸಲಹೆ ಸಹಕಾರ ಪಡೆಯಲಿ ಎಂದು ತಿಳಿಸಿದರು.
ನೂತನ ಅಧ್ಯಕ್ಷ ಮತ್ತು ಸದಸ್ಯರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಜಯಕುಮಾರ್ ದಿಶಾ ಸಮಿತಿ ಸದಸ್ಯ ಜೆ.ಪಿ. ಚಂದ್ರೇಗೌಡ, ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚಿಗಲೂರು ಗಂಗಾಧರ್, ಬಿ.ಎಸ್. ಕುಮಾರ್, ಕಲ್ಕೆರೆ ಶಿವಣ್ಣ, ಎಂ.ಕೆ. ಕುಮಾರ್, ಪ್ರಾಧಿಕಾರದ ಸದಸ್ಯರಾದ ತೇಜಸ್ ಕುಮಾರ್, ಸುರೇಶ್, ಮೂರ್ತಿ ನಾಯಕ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.ಪೋಟೋ 11ಮಾಗಡಿ1:
ಮಾಗಡಿ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕೆಂಚೇಗೌಡ ಅಧಿಕಾರ ಸ್ವೀಕರಿಸಿದರು. ಬೆಂಬಲಿಗರು ಅಭಿನಂದನೆ ಸಲ್ಲಿಸಿದರು.