ಸಾರಾಂಶ
ಕನ್ನಡಪ್ರಭ ವಾರ್ತೆ ಹನೂರು
ತಾಲೂಕಿನ ರಾಮಾಪುರ ಹಿರಿಯ ಪ್ರಾಥಮಿಕ ಉನ್ನತೀಕರಿಸಿದ ಶಾಲೆಯ ಸಹ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ನನ್ನನ್ನು ಗುರುತಿಸಿ ರಾಜ್ಯಮಟ್ಟದ ಪ್ರಶಸ್ತಿ ನೀಡಿರುವುದು ಸಂತಸ ತಂದಿದೆ ಎಂದು ಕೆಂಚಪ್ಪ ತಿಳಿಸಿದರು. ಹನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕಳೆದ 18 ವರ್ಷಗಳಿಂದ ಹನೂರು ಶೈಕ್ಷಣಿಕ ವಲಯದ ಜಡೇಸ್ವಾಮಿ ದೊಡ್ಡಿ, ಅರೇಕಾಡುವಿನ ದೊಡ್ಡಿ, ಪ್ರಸ್ತುತ ರಾಮಪುರ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಇದುವರೆಗೂ ತಾಲೂಕು, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, ಕಾನನ ಕುಸುಮ ಪ್ರಶಸ್ತಿ ಲಭಿಸಿದ್ದವು. ಇದೀಗ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವುದು ಮತ್ತಷ್ಟು ಜವಾಬ್ದಾರಿ ಹೆಚ್ಚಾಗಿದೆ ಎಂದರು.ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ನಾಲ್ಕು ಬಾರಿ ಪ್ರತಿನಿಧಿಸಿದ್ದಾರೆ. ನಾನು ಸಹ ಜಾನಪದ ನೃತ್ಯ, ಗೀತೆಗಳು, ರಾಜ್ಯಮಟ್ಟದ ನಾಟಕ, ನಲಿ ಕಲಿ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಅರೆಕಾಡುವಿನ ದೊಡ್ಡಿ ಗ್ರಾಮದಲ್ಲಿ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಬೈಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಭಾಷಾ ಶಿಕ್ಷಕರು ಇಲ್ಲದೇ ಇರುವುದು ಗಮನಕ್ಕೆ ಬಂದಾಗ ಸತತ ನಾಲ್ಕು ವರ್ಷಗಳ ಕಾಲ ವಿದ್ಯಾರ್ಥಿಗಳಿಗೆ ಪ್ರತಿದಿನ ಬೆಳಗ್ಗೆ ಒಂದು ಗಂಟೆ, ಶನಿವಾರ, ಭಾನುವಾರ ವಿಶೇಷ ತರಗತಿಗಳನ್ನು ತೆಗೆದುಕೊಂಡು ಇಂಗ್ಲಿಷ್ ಪಾಠ ಮಾಡಿದ್ದೇನೆ. ಇದರ ಫಲವಾಗಿ ಒಂದು ವರ್ಷ ಶೇ. ನೂರರಷ್ಟು ಫಲಿತಾಂಶ ಇನ್ನು ಮೂರು ವರ್ಷ ಶೇ. 94, 96, 98 ರಷ್ಟು ಫಲಿತಾಂಶ ಬಂದಿರುವುದು ಜೀವನದಲ್ಲಿ ಮರೆಯಲಾಗದ ಕ್ಷಣ ಎಂದು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಪ್ರಶಸ್ತಿ ಲಭಿಸಲು ಸಹಕರಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಪತ್ರಿಕಾ ಮಾಧ್ಯಮದವರಿಗೆ ಅಭಿನಂದನೆ ಸಲ್ಲಿಸಿದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))