ಕಂದಾಯ ನೌಕರರ ಬೇಡಿಕೆಗಳ ಬಗ್ಗೆ ಮಂತ್ರಿಯೊಂದಿಗೆ ಚರ್ಚಿಸುವೆ

| Published : Feb 11 2025, 12:46 AM IST

ಕಂದಾಯ ನೌಕರರ ಬೇಡಿಕೆಗಳ ಬಗ್ಗೆ ಮಂತ್ರಿಯೊಂದಿಗೆ ಚರ್ಚಿಸುವೆ
Share this Article
  • FB
  • TW
  • Linkdin
  • Email

ಸಾರಾಂಶ

ಹೊಳೆನರಸೀಪುರ ತಾಲೂಕಿನಲ್ಲಿ ತಹಸೀಲ್ದಾರ್, ಅಧಿಕಾರಿಗಳ ಜತೆಗೆ ಗ್ರಾಮ ಆಡಳಿತ ಅಧಿಕಾರಿಗಳು ತೋರುವ ಕರ್ತವ್ಯ ನಿಷ್ಠೆಯಿಂದಾಗಿ ನಮ್ಮ ತಾಲೂಕಿನ ಕಂದಾಯ ಇಲಾಖೆ ಪ್ರಶಸ್ತಿ ಪಡೆಯಲು ಸಾಧ್ಯವಾಗಿದೆ. ಜತೆಗೆ ನಿಮ್ಮ ಬೇಡಿಕೆಗಳ ಈಡೇರಿಕೆಯೂ ಅಗತ್ಯವಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಲ್ಲಿ ಚರ್ಚೆ ನಡೆಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ ತಾಲೂಕಿನಲ್ಲಿ ತಹಸೀಲ್ದಾರ್, ಅಧಿಕಾರಿಗಳ ಜತೆಗೆ ಗ್ರಾಮ ಆಡಳಿತ ಅಧಿಕಾರಿಗಳು ತೋರುವ ಕರ್ತವ್ಯ ನಿಷ್ಠೆಯಿಂದಾಗಿ ನಮ್ಮ ತಾಲೂಕಿನ ಕಂದಾಯ ಇಲಾಖೆ ಪ್ರಶಸ್ತಿ ಪಡೆಯಲು ಸಾಧ್ಯವಾಗಿದೆ. ಜತೆಗೆ ನಿಮ್ಮ ಬೇಡಿಕೆಗಳ ಈಡೇರಿಕೆಯೂ ಅಗತ್ಯವಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಲ್ಲಿ ಚರ್ಚೆ ನಡೆಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ನಿರ್ಮಿಸಿದ್ದ ಪೆಂಡಾಲಿನಲ್ಲಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳು ಸಮಸ್ಯೆಗಳು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿನಂತಿಸಿ, ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಶಾಸಕ ಎಚ್.ಡಿ.ರೇವಣ್ಣ ಭೇಟಿ ನೀಡಿ ಮಾತನಾಡಿದರು. ತಾಲೂಕು ಕಚೇರಿ ಆವರಣದಲ್ಲಿ ನಿಮ್ಮ ಕರ್ತವ್ಯಕ್ಕೆ ಅನುಕೂಲ ಆಗುವಂತೆ ಪುರುಷರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಅಗತ್ಯ ಮೂಲಭೂತ ಸೌಲಭ್ಯಗಳೊಂದಿಗೆ ೨೦ ಕೊಠಡಿಗಳನ್ನು ನಿರ್ಮಿಸಿ ಕೊಡುತ್ತೇನೆ ಜತೆಗೆ ಅಗತ್ಯ ಉಪಕರಣಗಳ ವ್ಯವಸ್ಥೆ ಬಗ್ಗೆ ಚರ್ಚಿಸೋಣವೆಂದು ಭರವಸೆ ನೀಡಿದರು.

ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಗ್ರಾಮ ಆಡಳಿತ ಅಧಿಕಾರಿ ಪೃಥ್ವಿರಾಜ್ ಆರ್‌. ಅವರು ಶಾಸಕರಿಗೆ ಸಮಸ್ಯೆ ಕುರಿತು ಮಾಹಿತಿ ನೀಡುತ್ತಾ ಮಾತನಾಡಿ, ತಾಲೂಕಿನಲ್ಲಿ ೩೨ ಕಂದಾಯ ವೃತ್ತಗಳು ಜತೆಗೆ ೫ ಭೂಮಿ ಕೇಂದ್ರಗಳು ಇದ್ದು, ಇದರಲ್ಲಿ ೧೨ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆ ಜತೆಗೆ ೧ ಭೂಮಿ ಕೇಂದ್ರದ ಅಧಿಕಾರಿಯ ಹುದ್ದೆ ಖಾಲಿ ಇದೆ. ಜತೆಗೆ ಇತ್ತೀಚಿನ ವರ್ಷಗಳಲ್ಲಿ ೨೧ ತಂತ್ರಾಂಶಗಳಲ್ಲಿ ಮೊಬೈಲ್ ಅಥವಾ ಕಂಪ್ಯೂಟರ್‌ನಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಆದರೆ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ತಾಂತ್ರಿಕ ಹುದ್ದೆಗಳೆಂದು ಪರಿಗಣಿಸಿ, ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕಿದೆ. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಉತ್ತಮವಾದ ಪೀಠೋಪಕರಣ, ಅತ್ಯುತ್ತಮ ಮೊಬೈಲ್ ಫೋನ್, ಸಿಮ್ ಹಾಗೂ ಡೇಟಾ, ಗೂಗಲ್ ಕ್ರೋಮ್ ಬುಕ್ ಅಥವಾ ಲ್ಯಾಪ್‌ಟಾಪ್, ಪ್ರಿಂಟರ್, ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಕಲ್ಪಿಸುವ ವಿಷಯ ಸೇರಿದಂತೆ ಹಲವಾರು ಬೇಡಿಕೆಗಳ ಕುರಿತು ಕಂದಾಯ ಸಚಿವರಿಗೆ ಸೆಪ್ಟೆಂಬರ್ ೨೬ರಂದು ಮುಷ್ಕರ ನಡೆಸಿ, ನೀಡಿದ ಮನವಿ ಪತ್ರಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಮತ್ತೆ ಮಾಡುತ್ತಿದ್ದೇವೆ ಎಂದರು. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ವಿಶ್ವಪ್ರಸಾದ್, ಉಪಾಧ್ಯಕ್ಷ ಜಯರಾಮ್, ಪ್ರದಾನ ಕಾರ್ಯದರ್ಶಿ ಲೋಕೇಶ್, ಖಜಾಂಚಿ ಹರೀಶ್ ಬಣಕರ್ ಹಾಗೂ ಸದಸ್ಯರಾದ ನಾಗರಾಜ್, ಚಂದ್ರಶೇಖರ್, ಗುರುಮೂರ್ತಿ, ಹೇಮಲತಾ ಹರೀಶ್, ರಂಜಿತಾ, ದೀಪ, ಶಿಲ್ಪ, ನವೀನ್, ದಿವ್ಯಶ್ರೀ, ರಮೇಶ್, ಪ್ರವೀಣ್, ಜೀವಿತ, ರಾಜೇಶ್ವರಿ, ಇತರರು ಇದ್ದರು.