ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳವಾಗಿದೆ. ಪ್ರತಿಯೊಬ್ಬ ಅರ್ಹ ನಾಗರೀಕನ ಮತಕ್ಕೂ ಅದರದ್ದೇ ಆದ ಮೌಲ್ಯವಿದೆ. ಆದರೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ವ್ಯಕ್ತವಾಗುತ್ತಿರುವ ಗಂಭೀರ ಆರೋಪಗಳು ಪ್ರಜಾಪ್ರಭುತ್ವದ ಪಾರದರ್ಶಕತೆ, ಚುನಾವಣಾ ಪ್ರಕ್ರಿಯೆ ವಿಶ್ವಾಸಾರ್ಹತೆ ಹಾಗೂ ನಾಗರೀಕರ ಮತದಾನದ ಹಕ್ಕಿನ ರಕ್ಷಣೆಯ ಕುರಿತು ಆತಂಕ ಮೂಡಿಸಿವೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಕಳವಳ ವ್ಯಕ್ತಪಡಿಸಿದ್ದಾರೆ.

- ಮಾಸಡಿ ಗ್ರಾಮದಿಂದ ಭಾರತ್ ಜೋಡೋ-2 ಅಂಗವಾಗಿ ಪಾದಯಾತ್ರೆ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಭಾರತ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳವಾಗಿದೆ. ಪ್ರತಿಯೊಬ್ಬ ಅರ್ಹ ನಾಗರೀಕನ ಮತಕ್ಕೂ ಅದರದ್ದೇ ಆದ ಮೌಲ್ಯವಿದೆ. ಆದರೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ವ್ಯಕ್ತವಾಗುತ್ತಿರುವ ಗಂಭೀರ ಆರೋಪಗಳು ಪ್ರಜಾಪ್ರಭುತ್ವದ ಪಾರದರ್ಶಕತೆ, ಚುನಾವಣಾ ಪ್ರಕ್ರಿಯೆ ವಿಶ್ವಾಸಾರ್ಹತೆ ಹಾಗೂ ನಾಗರೀಕರ ಮತದಾನದ ಹಕ್ಕಿನ ರಕ್ಷಣೆಯ ಕುರಿತು ಆತಂಕ ಮೂಡಿಸಿವೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಕಳವಳ ವ್ಯಕ್ತಪಡಿಸಿದರು.

ಶುಕ್ರವಾರ ತಾಲೂಕಿನ ಮಾಸಡಿ ಗ್ರಾಮದಿಂದ ಭಾರತ್ ಜೋಡೋ-2 ಅಂಗವಾಗಿ ಆರಂಭಿಸಿದ ಪಾದಯಾತ್ರೆ ಉದ್ದೇಶಿಸಿ ಅವರು ಮಾತನಾಡಿದರು. ಇತ್ತೀಚೆಗೆ ಜಿ.ಪಂ. ತಾ.ಪಂ. ಮೀಸಲಾತಿ ಅಧಿಸೂಚನೆ ಪ್ರಕಟವಾಗಿದೆ. ಅದರಲ್ಲಿ ಹಿಂದುಳಿದ ಎಸ್‌ಟಿ ವರ್ಗಗಳಿಗೆ ಅನ್ಯಾಯವಾಗಿದೆ. ಅದಕ್ಕೆ ತಾವೇ ಕಾರಣ ಎಂದು ಬಿಜೆಪಿಯವರು ಆರೋಪಿಸಿದ್ದು ಸರಿಯಲ್ಲ. ನನಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ. ಇದರಲ್ಲಿ ನನ್ನ ಹಸ್ತಕ್ಷೇಪ ಇಲ್ಲ ಎಂದು ಸ್ಪಷ್ಟಪಡಿಸಿದರು.

ಆಯುಕ್ತರ ವಜಾಗೊಳಿಸಿ:

ಬಯಲುಸೀಮೆ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ ಮಾತನಾಡಿ, ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ಅವರನ್ನು ವಜಾಗೊಳಿಸಬೇಕು. ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಉನ್ನತಮಟ್ಟದ ತನಿಖೆ ನಡೆಸುವಂತೆ ರಾಷ್ಟ್ರಪತಿಗೆ ಈ ಮುಖೇನ ಮನವಿ ಸಲ್ಲಿಸಲಾಗುವುದು ಎಂದರು.

ಗ್ರೇಡ್-2 ತಹಸೀಲ್ದಾರ್ ಸುರೇಶ್ ಅವರಿಗೆ ಮನವಿ ಸಲ್ಲಿಸಿದ್ದು, ಅದನ್ನು ರಾಷ್ಟ್ರಪತಿ ಅವರಿಗೆ ರವಾನಿಸಲು ಮನವಿ ಮಾಡಲಾಯಿತು. ಜಿ.ಪಂ. ಮಾಜಿ ಸದಸ್ಯ ಡಿ.ಜಿ. ವಿಶ್ವನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಣ್ಣಕ್ಕಿ ಬಸವನಗೌಡ, ಆರ್.ನಾಗಪ್ಪ, ಎ.ಆರ್. ಚಂದ್ರಶೇಖರಪ್ಪ ಮಾತನಾಡಿದರು.

ಮುಖಂಡರಾದ ಎಚ್.ಎ. ಗದ್ದಿಗೇಶ್, ಮಧುಗೌಡ, ಎಚ್.ಬಿ. ಅಣ್ಣಪ್ಪ, ಪ್ರಭಾಕರ ಕೆಂಗಲಹಳ್ಳಿ, ಕ್ಯಾಸಿನಕೆರೆ ಶೇಖರಪ್ಪ, ಬೆನಕಪ್ಪ ಹರಳಹಳ್ಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾರವೀಶ್, ಯುವಕಾಂಗ್ರೆಸ್ ಅಧ್ಯಕ್ಷ ಮನುವಾಲಜ್ಜಿ, ನೂರಾರು ಜನ ಹಾಜರಿದ್ದರು.

- - -

-16ಎಚ್.ಎಲ್.ಐ2:

ಶಾಸಕ ಡಿ.ಜಿ. ಶಾಂತನಗೌಡ, ಎಚ್.ಬಿ.ಮಂಜಪ್ಪ ಜನತೆ ಉದ್ದೇಶಿಸಿ ಮಾತನಾಡಿದರು.