ನಾಳೆ ಗುರುರಾಜ ಹೆಬ್ಬಾರ್ ಹೆಸರಿನ ರಸ್ತೆಗೆ ನಾಮಫಲಕ

| Published : Jan 03 2025, 12:32 AM IST

ನಾಳೆ ಗುರುರಾಜ ಹೆಬ್ಬಾರ್ ಹೆಸರಿನ ರಸ್ತೆಗೆ ನಾಮಫಲಕ
Share this Article
  • FB
  • TW
  • Linkdin
  • Email

ಸಾರಾಂಶ

ಸರ್ಕಾರಿ ಮಹಿಳಾ ಕಾಲೇಜು ಮುಂಭಾಗ ಶನಿವಾರ ಡಾ. ಗುರುರಾಜ ಹೆಬ್ಬಾರ್ ಹೆಸರಿನ ರಸ್ತೆಯ ನಾಮಫಲಕ ಅನಾವರಣ ಮತ್ತು ರಕ್ತದಾನ ಶಿಬಿರ ಹಾಗೂ ದೇಹದಾನ ನೇತ್ರದಾನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜನಕಲ್ಯಾಣ ರೀಸರ್ಚ್‌ ಅಂಡ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ.ವಿ. ಕರೀಗೌಡ ಮತ್ತು ಟ್ರಸ್ಟ್ ಗೌರವಾಧ್ಯಕ್ಷ ಎಚ್.ಪಿ. ಮೋಹನ್ ತಿಳಿಸಿದರು. ಡಾ. ಗುರುರಾಜ ಹೆಬ್ಬಾರ್ ಸೇವಾ ಪ್ರಶಸ್ತಿ ಪುರಸ್ಕೃತವನ್ನು ವೈದ್ಯಕೀಯ ಕ್ಷೇತ್ರದಲ್ಲಿ ಬೆಂಗಳೂರಿನ ಐಗಾಟ್ ಸಂಸ್ಥಾಪಕ ನಿರ್ದೇಶಕ ಡಾ. ಎನ್.ಎಸ್. ನಾಗೇಶ್ ಅವರಿಗೆ ನೀಡಿ ಗೌರವಿಸಲಾಗುತ್ತದೆ.

ಕನ್ನಡಪ್ರಭ ವಾರ್ತೆ ಹಾಸನ

ನಗರದ ಸರ್ಕಾರಿ ಮಹಿಳಾ ಕಾಲೇಜು ಮುಂಭಾಗ ಶನಿವಾರ ಡಾ. ಗುರುರಾಜ ಹೆಬ್ಬಾರ್ ಹೆಸರಿನ ರಸ್ತೆಯ ನಾಮಫಲಕ ಅನಾವರಣ ಮತ್ತು ರಕ್ತದಾನ ಶಿಬಿರ ಹಾಗೂ ದೇಹದಾನ ನೇತ್ರದಾನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜನಕಲ್ಯಾಣ ರೀಸರ್ಚ್‌ ಅಂಡ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಬಿ.ವಿ. ಕರೀಗೌಡ ಮತ್ತು ಟ್ರಸ್ಟ್ ಗೌರವಾಧ್ಯಕ್ಷ ಎಚ್.ಪಿ. ಮೋಹನ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಡಾ. ಗುರುರಾಜ ಹೆಬ್ಬಾರ್‌ ಮೆಮೋರಿಯಲ್‌ ಚಾರಿಟೇಬಲ್ ಟ್ರಸ್ಟ್ ಹಾಗೂ ಜನಕಲ್ಯಾಣ ರಿಸರ್ಚ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಸಂಜೀವಿನಿ ಸಹಕಾರಿ ಆಸ್ಪತ್ರೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ. ರಾಷ್ಟ್ರೀಯ ಸೇವಾ ಯೋಜನೆ, ಹಿಮ್ಸ್, ಪರಿಪೂರ್ಣ ಚಾರಿಟಬಲ್ ಟ್ರಸ್ಟ್, ಕಾಮಧೇನು ಸಹಕಾರಿ ವಿದ್ಯಾಶ್ರಮ, ರೈತ ಬಂದು ಸಹಕಾರಿ ಸಂಘ, ವಿದ್ಯಾಸೌಧ ಶಿಕ್ಷಣ ಸಂಸ್ಥೆ ಮತ್ತು ಪ್ರಶಾಂತಿ ಸೇವಾ ಟ್ರಸ್ಟ್, ಕಟ್ಟಾಯ ಹೋಬಳಿ ಗ್ರಾಮಸ್ಥರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ.ಗುರುರಾಜ ಹೆಬ್ಬಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಜನವರಿ ೪ರಂದು ಬೆಳಿಗ್ಗೆ ೮ ಗಂಟೆಗೆ ಸರ್ಕಾರಿ ಮಹಿಳಾ ಕಾಲೇಜು ಮುಂಭಾಗದ ರಸ್ತೆಯಲ್ಲಿ ಡಾ.ಗುರುರಾಜ ಹೆಬ್ಬಾರ್ ಹೆಸರಿನ ರಸ್ತೆಯ ನಾಮಫಲಕ ಅನಾವರಣ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ಕೆಂಗೇರಿ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಡಾ. ನಿಶ್ಚಲಾನಂದನಾಥ ಮಹಾಸ್ವಾಮೀಜಿ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಅಂದು ಬೆಳಿಗ್ಗೆ ೧೦:೩೦ಕ್ಕೆ ಜನಕಲ್ಯಾಣ ರೀಸರ್ಚ್ ಚಾರಿಟೆಬಲ್ ಟ್ರಸ್ಟ್ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ದೇಹದಾನ-ನೇತ್ರದಾನ ನೋಂದಣಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ವಿಶ್ರಾಂತ ಕುಲಪತಿಗಳಾದ ಡಾ. ಕರಿಸಿದ್ದಪ್ಪ ಉದ್ಘಾಟನೆ ಮಾಡಲಿದ್ದಾರೆ. ನಾನು ಅಧ್ಯಕ್ಷತೆ ವಹಿಸಲಿದ್ದು, ಸಂಸದರಾದ ಶ್ರೇಯಸ್ ಎಂ. ಪಟೇಲ್, ಶಾಸಕರು ಹಾಗೂ ಸಂಜೀವಿನಿ ಸಹಕಾರಿ ಆಸ್ಪತ್ರೆಯ ಅಧ್ಯಕ್ಷ ಎಚ್.ಪಿ. ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಸಿ. ಸತ್ಯಭಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್‌. ಪೂರ್ಣಿಮಾ, ಎಸ್.ಪಿ. ಮಹಮ್ಮದ್ ಸುಜೀತಾ, ನಗರಸಭೆಯ ಪೌರಾಯುಕ್ತರಾದ ಟಿ.ಎನ್. ನರಸಿಂಹಮೂರ್ತಿ ಅವರು ಗೌರವ ಉಪಸ್ಥಿತಿಯನ್ನು ವಹಿಸಲಿದ್ದಾರೆ ಎಂದು ಹೇಳಿದರು. ಡಾ. ಗುರುರಾಜ ಹೆಬ್ಬಾರ್‌ ಮೆಮೋರಿಯಲ್ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ. ಜಿ. ಪ್ರತಿಭಾ ಮಾತನಾಡಿ, ಡಾ. ಗುರುರಾಜ ಹೆಬ್ಬಾರ್ ಸೇವಾ ಪ್ರಶಸ್ತಿ ಪುರಸ್ಕೃತವನ್ನು ವೈದ್ಯಕೀಯ ಕ್ಷೇತ್ರದಲ್ಲಿ ಬೆಂಗಳೂರಿನ ಐಗಾಟ್ ಸಂಸ್ಥಾಪಕ ನಿರ್ದೇಶಕ ಡಾ. ಎನ್.ಎಸ್. ನಾಗೇಶ್, ಸಮಾಜಸೇವಾ ಕ್ಷೇತ್ರದಲ್ಲಿ ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ನಿರ್ದೇಶಕರಾದ ಜಿ.ಬಿ. ಶಿವರಾಜು ಹಾಗೂ ಪ್ರತಿಭಾ ಪುರಸ್ಕಾರದಲ್ಲಿ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಎಂ. ಬಿಂದುಲತಾ ಇವರನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದು ಕಾರ್ಯಕ್ರಮ ಬಗ್ಗೆ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಡಾ. ಗುರುರಾಜ ಹೆಬ್ಬಾರ್‌ ಮೆಮೋರಿಯಲ್ಚಾರಿಟೇಬಲ್ ಟ್ರಸ್ಟ್ ಗೌರವಾಧ್ಯಕ್ಷ ಎಚ್.ಪಿ. ಮೋಹನ್, ಅಧ್ಯಕ್ಷೆ ಡಾ. ಜಿ. ಪ್ರತಿಭಾ, ಕಾಮಧೇನು ಸಹಕಾರಿ ವಿದ್ಯಾಶ್ರಮದ ಅಧ್ಯಕ್ಷ ಮಾಧವ್ ಶೆಣ್ಯೆ, ಡಾ. ವೈ.ಎಸ್. ವೀರಭದ್ರಪ್ಪ, ಪರಿಪೂರ್ಣ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ಹೆಚ್.ವಿ. ಲಕ್ಷ್ಮೀನಾರಾಯಣ್, ಇತರರು ಉಪಸ್ಥಿತರಿದ್ದರು.