ಸಾರಾಂಶ
ಹೆದ್ದಾರಿಗಳ ನಿರ್ಮಾಣ ಕಾರ್ಯದಲ್ಲಿ ರಾಜ್ಯ ಸರ್ಕಾರ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತದೆ, ಚೆನ್ನೈನಿಂದ ಬೆಂಗಳೂರು ನಡುವಿನ ಪ್ರಯಾಣವನ್ನು ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇವಲ ಮೂರು ಗಂಟೆಗಳಲ್ಲಿ ಕ್ರಮಿಸಬಹುದು,
ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ರಾಷ್ಟ್ರ ಮತ್ತು ರಾಜ್ಯ ಅಭಿವೃದ್ಧಿಯಾಗಲು ಹೆದ್ದಾರಿಗಳ ಪಾತ್ರ ಬಹಳ ಪ್ರಮುಖವಾದುದು, ದೇಹಕ್ಕೆ ನರನಾಡಿಗಳಂತೆ ಅಭಿವೃದ್ಧಿಗೆ ರಸ್ತೆಗಳೇ ನರನಾಡಿಗಳಾಗಿವೆ, ಅಭಿವೃದ್ಧಿಯಲ್ಲಿ ಮುಂಚೂಣಿ ಸ್ಥಾನದಲ್ಲಿರುವ ರಾಜ್ಯಗಳಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಅಭಿಪ್ರಾಯಪಟ್ಟರು.ತಾಲೂಕಿನ ಕಾರಹಳ್ಳಿ ಗ್ರಾಮ ಪಂಚಾಯ್ತಿಯ ಕಲ್ಕೆರೆ ಗ್ರಾಮದ ಬೆಂಗಳೂರು- ಚೆನ್ನೈ ಹೆದ್ದಾರಿ ಬದಿಯಲ್ಲಿ ಪ್ರಯಾಣಿಕರಿಗೆ ಸೌಲಭ್ಯ ಕಲ್ಪಿಸುವ ವಿಶ್ರಾಂತಿ ಕೊಠಡಿ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಹೆದ್ದಾರಿಗಳ ನಿರ್ಮಾಣ ಕಾರ್ಯದಲ್ಲಿ ರಾಜ್ಯ ಸರ್ಕಾರ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತದೆ, ಚೆನ್ನೈನಿಂದ ಬೆಂಗಳೂರು ನಡುವಿನ ಪ್ರಯಾಣವನ್ನು ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇವಲ ಮೂರು ಗಂಟೆಗಳಲ್ಲಿ ಕ್ರಮಿಸಬಹುದು, ಈ ಕೀರ್ತಿ ರಾಜ್ಯ ಮತ್ತು ಕೇಂದ್ರಕ್ಕೆ ಸಲ್ಲಬೇಕು. ಈ ರಸ್ತೆಯಿಂದ ಪ್ರತ್ಯೇಕವಾಗಿ ಮತ್ತು ಪರೋಕ್ಷವಾಗಿ ಇಪ್ಪತ್ತು ಲಕ್ಷ ಜನರಿಗೆ ಉದ್ಯೋಗ ಅವಕಾಶ ದೊರೆಯುತ್ತದೆ, ಮೊದಲ ಬಾರಿಗೆ 2 ಸಾವಿರ ಕೋಟಿ ರು.ಗಳ ವೆಚ್ಚದಲ್ಲಿ ಈ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರಲ್ಲದೆ, ಈ ವಿಶ್ರಾಂತಿ ಸ್ಥಳದಲ್ಲಿ 150 ಅಡಿ ಎತ್ತರದ ಅಭಯ ಆಂಜನೇಯ ಸ್ವಾಮಿ ವಿಗ್ರಹ ಸ್ಥಾಪಿಸುವ ಮೂಲಕ ಬೃಹತ್ ಆಧ್ಯಾತ್ಮಿಕ ಕೇಂದ್ರವಾಗಿಯೂ ಸಹ ರೂಪುಗೊಳ್ಳಲಿದೆ ಎಂದು ತಿಳಿಸಿದರು.
ವೈ ಸ್ಪೇಸ್ ಸಂಸ್ಥೆಯ ಸಿಇಒ ರತ್ನಕುಮಾರ್ , ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯವಸ್ಥಾಪಕ ಪ್ರಭಾಕರ್ , ಅರ್ಚನಾ, ರಾಮನಾಥ್, ಸೋಮಶೇಖರ್, ಮಲ್ಲಿಕಾರ್ಜುನ್, ಸೋಮಶೇಖರ್ ರೆಡ್ಡಿ, ದಯಾಕರ್, ರಾಮನಾಥ್, ಶ್ರೀನಿವಾಸ್ ಉಪಸ್ಥಿತರಿದ್ದರು.