ಜಾತಿ, ವರ್ಗರಹಿತ ಸಮಾಜ ನಿರ್ಮಾಣಕ್ಕೆ ವಕೀಲರ ಪಾತ್ರ ಮಹತ್ವ:

| Published : Jan 15 2024, 01:45 AM IST

ಜಾತಿ, ವರ್ಗರಹಿತ ಸಮಾಜ ನಿರ್ಮಾಣಕ್ಕೆ ವಕೀಲರ ಪಾತ್ರ ಮಹತ್ವ:
Share this Article
  • FB
  • TW
  • Linkdin
  • Email

ಸಾರಾಂಶ

ವಕೀಲರು ಉತ್ತಮ ಸಮಾಜ ನಿರ್ಮಾಣ ಮಾಡುವ ದಿಕ್ಕಿನಲ್ಲಿ ಆಲೋಚನೆ ಮಾಡುವ ಜೊತೆಗೆ ಜಾತಿ ಹಾಗೂ ವರ್ಗರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ವಕೀಲರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾದೀಶರಾದ ಡಿ. ಭಾರತಿ ಅವರು ತಿಳಿಸಿದರು.

ನ್ಯಾ. ಡಿ. ಭಾರತಿ ಅಭಿಮತ । ವಕೀಲರ ಸಂಘದಿಂದ ಡೈರಿ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಚಾಮರಾಜನಗರ ವಕೀಲರು ಉತ್ತಮ ಸಮಾಜ ನಿರ್ಮಾಣ ಮಾಡುವ ದಿಕ್ಕಿನಲ್ಲಿ ಆಲೋಚನೆ ಮಾಡುವ ಜೊತೆಗೆ ಜಾತಿ ಹಾಗೂ ವರ್ಗರಹಿತ ಸಮಾಜ ನಿರ್ಮಾಣ ಮಾಡುವಲ್ಲಿ ವಕೀಲರ ಪಾತ್ರ ಮಹತ್ವದಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾದೀಶರಾದ ಡಿ. ಭಾರತಿ ಅವರು ತಿಳಿಸಿದರು.

ನಗರದ ವಕೀಲರ ಸಂಘದ ಕಚೇರಿ ಮುಂಭಾಗ ಜಿಲ್ಲಾ ವಕೀಲರ ಸಂಘದಿಂದ ೨೦೨೪ನೇ ಸಾಲಿನ ನೂತನ ಕ್ಯಾಲೆಂಡರ್ ಹಾಗೂ ಡೇರಿಯನ್ನು ಬಿಡುಗಡೆಗೊಳಿಸಿ ನಂತರ ಮಾತನಾಡಿ, ವಕೀಲರು ಮತ್ತು ನ್ಯಾಯಾಧೀಶರ ಬಾಂಧವ್ಯ ಉತ್ತಮವಾಗಿದ್ದರೆ ಕಕ್ಷಿದಾರಿಗೆ ತ್ವರಿತ ನ್ಯಾಯ ಒದಗಿಸಬಹುದಾಗಿದೆ. ವಕೀಲ ವೃತ್ತಿ ಶ್ರೇಷ್ಠ ವೃತ್ತಿಯಾಗಿದ್ದು, ಪ್ರತಿಯೊಬ್ಬರು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪ್ರಾಮಾಣಿಕ ವಾಗಿ ಕರ್ತವ್ಯ ನಿರ್ವಹಿಸಬೇಕು. ವಕೀಲರ ಸಮುದಾಯವೇ ಒಂದು ಜಾತಿ ಇದ್ದಂತೆ. ವಕೀಲರಾಗಿ ಕಪ್ಪು ಕೋರ್ಟು ಧರಿಸಿ, ನ್ಯಾಯಾಲಯಕ್ಕೆ ಹಾಜರಾದಂತೆ ನಾವೆಲ್ಲರೂ ಒಂದೇ ಎಂಬ ಭಾವನೆ ಮೂಡಬೇಕು. ಸದಾ ಅಧ್ಯಯನ ಶೀಲರಾಗಿ ಕಕ್ಷೀದಾರರಿಗೆ ನ್ಯಾಯ ಒದಗಿಸಿಕೊಡಲು ನಿಮ್ಮ ಪ್ರಯತ್ನದಲ್ಲಿ ಸದಾ ಮುಂದಾಗಬೇಕು ಎಂದರು. ವಕೀಲರ ಸಂಘ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ಸಂಘ ವಕೀಲರ ಹಿತ ರಕ್ಷಣೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬರುತ್ತಿದೆ. ಹಿರಿಯ ವಕೀಲರ ಸಹಕಾರದಿಂದ ಕ್ಯಾಲೆಂಡರ್ ಹಾಗೂ ಡೇರಿ ಪ್ರಕಟಿಸಿ, ಬಿಡುಗಡೆ ಮಾಡಲಾಗುತ್ತಿದೆ. ವಕೀಲರು ಸಮಾಜದ ತಪ್ಪುಗಳನ್ನು ತಿದ್ದುವಂತವರು. ಹೀಗಾಗಿ ವಕೀಲರು ಸದಾ ಅಧ್ಯಯನಶೀಲರಾಗಿ ಅಭಿವೃದ್ಧಿಯತ್ತ ಸಾಗಬೇಕು. ಕಕ್ಷಿದಾರರ ಪರ ಸೇವೆ ಮಾಡುವ ಮೂಲಕ ಸ್ವಾಸ್ಥ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದರು. ಕಾರ್ಯಕ್ರಮದಲ್ಲಿ ನಿವೃತ್ತ ಸಹಕಾರಿ ಅಭಿಯೋಜಕ ವಿ.ಬಿ. ನಾಯಕ್, ಹಾಗೂ ನೂತನ ಸರ್ಕಾರಿ ವಕೀಲ ಅರುಣ್ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ನ್ಯಾಯಾಧೀಶ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಲೋಕಪ್ಪ, ಹಿರಿಯ ಸಿವಿಲ್ ನ್ಯಾಯಾಧೀಶ ಹೊನ್ನಪ್ಪ, ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಶ್ರೀಧರ್, ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಚಂಪಕ, ಪ್ರಧಾನ ಸಿವಿಲ್ ನ್ಯಾಯಾದೀಶ ಎನ್. ವೆಂಕಟೇಶ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಎನ್. ನಿವೇದಿತಾ, ಕಾರ್ಯದರ್ಶಿ ಎನ್.ಕೆ. ವಿರೂಪಕ್ಷಸ್ವಾಮಿ, ಜಂಟಿ ಕಾರ್ಯದರ್ಶಿ ಮಲ್ಲು ಇದ್ದರು.