ಸಾರಾಂಶ
ಶನಿವಾರ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ನೆರವೇರಿತು.
ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಪತ್ರಿಕಾ ವಿಶ್ವಾಸಾರ್ಹತೆಯ ಬಗ್ಗೆ ಇಂದು ಚರ್ಚೆಯಾಗಬೇಕಾಗಿದೆ. ಸಂಶೋಧನಾತ್ಮಕ ವರದಿಗಳು ಬರುತ್ತಿಲ್ಲ ಎಂಬುವುದೂ ಚಿಂತನೀಯ ವಿಚಾರ. ಸಾಮಾಜಿಕ ಮಾಧ್ಯಮಗಳೆಂಬ ಸವಾಲುಗಳ ನಡುವೆ ಪತ್ರಿಕೆಗಳು ತಮ್ಮ ಮೌಲ್ಯಗಳನ್ನು ಉಳಿಸಿಕೊಂಡಿರುವುದು ಗಮನಾರ್ಹ. ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯಪಟ್ಟರು.ಶನಿವಾರ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ನಡೆದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಉಪನ್ಯಾಸ ನೀಡಿದ ಬೆಂಗಳೂರು ಆಕಾಶವಾಣಿ ಸಹಾಯಕ ನಿರ್ದೇಶಕ ಜಿತು ನಿಡ್ಲೆ, ಭಾಷಾ ಬೆಳವಣಿಗೆಯಲ್ಲಿ ಪತ್ರಿಕೆಗಳು ಮಹತ್ವ ವಹಿಸಿವೆ. ವಿವೇಚನೆಯಿಂದ ಪತ್ರಕರ್ತರು ವ್ಯವಹರಿಸಬೇಕಾಗಿದೆ ಎಂದುಯ ಹೇಳಿದರು.ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮಾತನಾಡಿದರು. ಅಧ್ಯಕ್ಷತೆಯನ್ನು ಸಂಘ ಅಧ್ಯಕ್ಷ ಪ್ರಸಾದ ಶೆಟ್ಟಿ ಏಣಿಂಜೆ ವಹಿಸಿದ್ದರು.ವೇದಿಕೆಯಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಗ್ರಾಮೀಣ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ಇದ್ದರು.
ಈ ಬಾರಿಯ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಪತ್ರಕರ್ತ ಮನೋಹರ ಬಳಂಜ- ಲಿಖಿತಾ ದಂಪತಿಯ ಪುತ್ರಿ ದಿತಿಯ ಸ್ಮರಣಾರ್ಥ ಆರು ಮಂದಿ ಆನಾರೋಗ್ಯ ಪೀಡಿತರಿಗೆ ದಿತಿ ಸಾಂತ್ವನ ನಿಧಿಯನ್ನು ಶಾಸಕರು ಹಸ್ತಾಂತರಿಸಿದರು.ಸಂಘದ ಕಾರ್ಯದರ್ಶಿ ತುಕಾರಾಮ್ ಬಿ. ಸ್ವಾಗತಿಸಿದರು. ಮನೋಹರ ಸಂದೇಶ ವಾಚಿಸಿದರು. ಅಚುಶ್ರೀ ಬಾಂಗೇರು ಉಪನ್ಯಾಸಕರ ಪರಿಚಯ ನೀಡಿದರು. ಅಶ್ರಫ್ ಆಲಿ ಕುಂಞ ಸಾಂತ್ವನ ನಿಧಿಯ ಮಾಹಿತಿ ನೀಡಿದರು. ಗಣೇಶ್ ಶಿರ್ಲಾಲು ವಂದಿಸಿದರು.