ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಸಂಘಸಂಸ್ಥೆಗಳ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಅಲ್ಲದೆ, ಹಳೇ ವಿದ್ಯಾರ್ಥಿಗಳು, ದಾನಿಗಳು, ಮೇಲ್ವಿಚಾರಣಾ ಸಮಿತಿಗಳ ಮೂಲಕ ಮೂಲ ಸೌಕರ್ಯ ಕಲ್ಪಿಸುವುದು, ಗುಣಮಟ್ಟದ ಶಿಕ್ಷಣಕ್ಕೆ ಬೆಂಬಲ ನೀಡುವುದು ಹಾಗೂ ಶಾಲಾ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಸಕ್ರಿಯವಾಗಿ ತೊಡಗಿಸಿಕೊಂಡು ಮಾದರಿ ಶಾಲೆಯನ್ನಾಗಿ ರೂಪಿಸುವುದು ಎಲ್ಲರ ಆದ್ಯ ಕರ್ತವ್ಯವೂ ಆಗಿದೆ ಎಂದು ಅದಿಜಾಂಬವ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷ ಡಾ. ಎನ್. ಪ್ರಕಾಶ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಹೊಸನಗರ
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಸಂಘಸಂಸ್ಥೆಗಳ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಅಲ್ಲದೆ, ಹಳೇ ವಿದ್ಯಾರ್ಥಿಗಳು, ದಾನಿಗಳು, ಮೇಲ್ವಿಚಾರಣಾ ಸಮಿತಿಗಳ ಮೂಲಕ ಮೂಲ ಸೌಕರ್ಯ ಕಲ್ಪಿಸುವುದು, ಗುಣಮಟ್ಟದ ಶಿಕ್ಷಣಕ್ಕೆ ಬೆಂಬಲ ನೀಡುವುದು ಹಾಗೂ ಶಾಲಾ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಸಕ್ರಿಯವಾಗಿ ತೊಡಗಿಸಿಕೊಂಡು ಮಾದರಿ ಶಾಲೆಯನ್ನಾಗಿ ರೂಪಿಸುವುದು ಎಲ್ಲರ ಆದ್ಯ ಕರ್ತವ್ಯವೂ ಆಗಿದೆ ಎಂದು ಅದಿಜಾಂಬವ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷ ಡಾ. ಎನ್. ಪ್ರಕಾಶ್ ತಿಳಿಸಿದರು.ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ರಾಮಚಂದ್ರಪುರ ಮಠದಲ್ಲಿ ಶ್ರೀ ರಾಮ ಜನ್ಮದಿನದ ಅಂಗವಾಗಿ ಆಯೋಜಿಸಿರುವ ರಾಮೋತ್ಸವ ಕಾರ್ಯಕ್ರಮದಲ್ಲಿ ಪೀಠಾಧ್ಯಕ್ಷ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ತಾಲೂಕಿನ ಮಂಡ್ರಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಗೆ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ 135 ನೇ ಜಯಂತಿ ಅಂಗವಾಗಿ ಶಿವಮೊಗ್ಗ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾಂತೀಯ ಮುಖ್ಯಸ್ಥ ವಿಶು ಕುಮಾರ್ ಹಾಗೂ ಡಾ.ಅಂಬೇಡ್ಕರ್ ಆದಿಜಾಂಬವ ರಾಜ್ಯ ಸಮಿತಿ ಇವರ ಸಹಯೋಗದಲ್ಲಿ ಉಚಿತವಾಗಿ ನೀಡಿದ ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮದ ಬಳಿಕ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ದಾನಿಗಳು ಮುಂದಾಗಬೇಕು. ಆಧುನಿಕ ತಂತ್ರಜ್ಞಾನಗಳ ಸೌಕರ್ಯ ಮತ್ತು ಬಳಕೆ ವಿದ್ಯಾರ್ಥಿಗಳ ಕೈಗೆಟುಕಿದಾಗ ಮಾತ್ರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಸಾಧ್ಯವಿದೆ. ಈ ನಿಟ್ಟಿನಲ್ಲಿ ಆದಿಜಾಂಬವ ಸಮಿತಿ ರಾಜ್ಯ ವ್ಯಾಪ್ತಿ ಕಾರ್ಯೋನ್ಮುಖವಾಗಿದೆ ಎಂದರು.ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಎಂ.ಎಸ್.ಪುಟ್ಟಪ್ಪ, ಸದಸ್ಯ ತೊಗರೆ ದೇವೇಂದ್ರ, ಮುಖೋಪಾಧ್ಯಾಯ ಮಹಾಂತೇಶ್, ಶಿಕ್ಷಕಿ ಆಸ್ಮಾ, ಲೋಲಾಕ್ಷಿ, ರೇಖಾ ಕುಮಾರಿ, ರಾಜ್ಯ ಆದಿ ಜಾಂಬವ ಸಂಘದ ಗೌರವ ಅದ್ಯಕ್ಷ ದೇವೇಂದ್ರಪ್ಪ, ಕಾರ್ಯದರ್ಶಿ ಚನ್ನೇಶ್, ಜಿಲ್ಲಾಧ್ಯಕ್ಷ ಕರಿಬಸಪ್ಪ, ತಾಲೂಕು ಅಧ್ಯಕ್ಷ ದೇವೇಂದ್ರ, ನಗರ ಅಧ್ಯಕ್ಷ ಪ್ರವೀಣ್ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.