ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರ ಜತೆಗೆ ಪಾಲಕರ ಪಾತ್ರ ಮಹತ್ವದ್ದು

| Published : Dec 30 2024, 01:00 AM IST

ಸಾರಾಂಶ

ಕ್ಕಳ ಸರ್ವಾಗೀಣ ವಿಕಾಸಕ್ಕೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳು ಅವಶ್ಯ

ಡಂಬಳ: ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರ ಜತೆಗೆ ಪಾಲಕರ ಪಾತ್ರವೂ ಮಹತ್ವದಾಗಿದೆ. ಬಡ ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು, ಸರ್ಕಾರದ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಿಲಯ ಪಾಲಕ ಎಸ್.ಎ. ಯಲ್ಲರಡ್ಡಿ ಹೇಳಿದರು.

ಡಂಬಳ ಗ್ರಾಮದ ಡಿ.ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಭಾನುವಾರ ಜರುಗಿದ ಪಾಲಕರ ಸಭೆ ಶೈಕ್ಷಣಿಕ ಚಟುವಟಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳ ಸರ್ವಾಗೀಣ ವಿಕಾಸಕ್ಕೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳು ಅವಶ್ಯವಾಗಿದ್ದು , ಆ ನಿಟ್ಟಿನಲ್ಲಿ ವಸತಿ ಶಾಲೆಯಲ್ಲಿ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ಪ್ರೊ. ಆರ್.ಎಂ. ದೊಡ್ಡಮನಿ, ಶಿಕ್ಷಕ ಆನಂದ ಆರ್ ಮಾತನಾಡಿ, ಮಕ್ಕಳ ಭವಿಷ್ಯಕ್ಕಾಗಿ ಪಾಲಕರು ಹಾಗೂ ಶಿಕ್ಷಕರು ನಿರಂತರವಾಗಿ ಶ್ರಮಿಸಬೇಕು ಎಂದರು. ವಸತಿ ನಿಲಯ ಸಿಬ್ಬಂದಿ ಈರಣ್ಣ ಬೂದಿಹಾಳ, ವಿಟ್ಟಲ್ ನಾವಳ್ಳಿ ಮಾತನಾಡಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ಸರ್ಕಾರ ವಸತಿ ಶಾಲೆ ಆರಂಭಿಸಿದ್ದು, ಇಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಜತೆಗೆ ಶಿಕ್ಷಣಕ್ಕೆ ಅಗತ್ಯವಾದ ಶೈಕ್ಷಣಿಕ ವಾತಾವರಣ ಕಲ್ಪಿಸುವಲ್ಲಿ ಕಾಳಜಿ ವಹಿಸಲಾಗುತ್ತಿದೆ ಎಂದರು.

ಪಾಲಕ ದಾನಯ್ಯ ಬೇನಾಳ ಮಾತನಾಡಿದರು.

ಕಾರ್ಯಕ್ರಮದಲ್ಲಿ ಶರಣಪ್ಪ ಸಂಶಿ, ಈರಪ್ಪ ಕೊರವರ, ನಿಂಗಪ್ಪ ಕುರಿ,ಸುಜಾತಾ ಬೆಳ್ಳಟ್ಟಿ, ಸುಧಾ ಬಡಿಗೇರ, ರೇಣುಕಾ ಪೂಜಾರ, ಪಾಲಕರು ವಿದ್ಯಾರ್ಥಿಗಳು ಇದ್ದರು.