ಫಾರ್ಮಸಿಸ್ಟ್‍ಗಳ ಸೇವೆ ವಿಶಿಷ್ಟವಾದದ್ದು, ಫಾರ್ಮಸಿ ಅಧಿಕಾರಿಗಳು ವೈದ್ಯಾಧಿಕಾರಿಗಳ ಮತ್ತು ಇತರೇ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಕೊಂಡಿಯಾಗಿ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರೋಗಿಗಳಿಗೆ ಉತ್ತಮ ಗುಣಮಟ್ಟದ ಔಷಧಿಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ವೆನ್ಲಾಕ್ ಅಧೀಕ್ಷಕ ಡಾ.ಶಿವಪ್ರಕಾಶ್ ಡಿ.ಎಸ್. ಹೇಳಿದರು.

ಮಂಗಳೂರು : ಫಾರ್ಮಸಿಸ್ಟ್‍ಗಳ ಸೇವೆ ವಿಶಿಷ್ಟವಾದದ್ದು, ಫಾರ್ಮಸಿ ಅಧಿಕಾರಿಗಳು ವೈದ್ಯಾಧಿಕಾರಿಗಳ ಮತ್ತು ಇತರೇ ವೈದ್ಯಕೀಯ ಸಿಬ್ಬಂದಿಗಳೊಂದಿಗೆ ಕೊಂಡಿಯಾಗಿ ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರೋಗಿಗಳಿಗೆ ಉತ್ತಮ ಗುಣಮಟ್ಟದ ಔಷಧಿಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ವೆನ್ಲಾಕ್ ಅಧೀಕ್ಷಕ ಡಾ.ಶಿವಪ್ರಕಾಶ್ ಡಿ.ಎಸ್. ಹೇಳಿದರು.

ಅವರು ‘ಆರೋಗ್ಯಕರ ಭವಿಷ್ಯಕ್ಕಾಗಿ ಫಾರ್ಮಸಿಸ್ಟ್‍ಗಳ ಸಬಲೀಕರಣ’ ಎಂಬ ಧ್ಯೇಯದೊಂದಿಗೆ ವಿಶ್ವ ಫಾರ್ಮಸಿಸ್ಟ್ ದಿನಾಚರಣೆ 2026ನ್ನು ನಗರದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿದರು.

ನಿವಾಸಿ ವೈದ್ಯಾಧಿಕಾರಿ ಡಾ.ಮಧುಸೂದನ್ ಮಾತನಾಡಿ, ಆಂಟಿಬಯೋಟಿಕ್‍ಗಳ ಬಳಕೆ ಬಗ್ಗೆ ಜಾಗ್ರತೆ ವಹಿಸಬೇಕೆಂದು ತಿಳಿಸಿದರು.

ಫಾರ್ಮಸಿ ಸಹಾಯಕ ನಿರ್ದೇಶಕ ರವೀಂದ್ರ ದಾಂಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವ ಫಾರ್ಮಸಿಸ್ಟ್ ದಿನಾಚರಣೆ ಆಚರಣೆ ಬಳಕೆಗೆ ಬಂದ ಹಿನ್ನೆಲೆ ಬಗ್ಗೆ ತಿಳಿಸಿದರು.ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ಅಧ್ಯಕ್ಷ ಸುನಿಲ್ ಮಾತನಾಡಿ, ಎಲ್ಲ ಫಾರ್ಮಸಿ ಅಧಿಕಾರಿಗಳು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಿ ಸಾರ್ವಜನಿಕರ ಹಾಗೂ ರೋಗಿಗಳ ಆರೋಗ್ಯವನ್ನು ಕಾಪಾಡುವಲ್ಲಿ ಶ್ರಮಿಸಬೇಕೆಂದು ಕರೆ ನೀಡಿದರು.

ಸ್ನೇಹಲತಾ ಸ್ವಾಗತಿಸಿದರು. ಬೇಬಿ, ವೀಣಾ ನಿರೂಪಿಸಿದರು. ಯಶ್ವಿನಿ ವಂದಿಸಿದರು.