ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಬೆಳವಣಿಗೆಯಲ್ಲಿ ಕನ್ನಡಪರ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ.
ಕನ್ನಡಪ್ರಭ ವಾರ್ತೆ ಗದಗ
ಕನ್ನಡ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆ ಹಾಗೂ ಬೆಳವಣಿಗೆಯಲ್ಲಿ ಕನ್ನಡಪರ ಸಂಘಟನೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸಂಘಟನೆಗಳು ಕೇವಲ ಹೋರಾಟಕ್ಕೆ ಸೀಮಿತವಾಗದೆ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮೂಲಕ ಸಮಾಜಕ್ಕೆ ಮಾದರಿಯಾಗುತ್ತಿರುವುದು ಶ್ಲಾಘನೀಯ ಎಂದು ಶಾಸಕ ಹಾಗೂ ಮಾಜಿ ಸಚಿವ ಎಚ್. ಕೆ. ಪಾಟೀಲ ಹೇಳಿದರು.ಗದಗ ನಗರದಲ್ಲಿ ಸ್ವಾಭಿಮಾನ ಕರ್ನಾಟಕ ರಕ್ಷಣಾ ವೇದಿಕೆಯ ದಶಮಾನೋತ್ಸವ ಹಾಗೂ 71ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಮತ್ತು ಗಣ್ಯರ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ಗದಗ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮವನ್ನು ಸ್ವಾಭಿಮಾನ ಕರವೇ ರಾಜ್ಯಾಧ್ಯಕ್ಷ ರಾಜೇಶ ರೆಡ್ಡಿ ಉದ್ಘಾಟಿಸಿದರು. ವೇದಿಕೆಯ ಉತ್ತರ ಕರ್ನಾಟಕ ಹಾಗೂ ಗದಗ ಜಿಲ್ಲಾಧ್ಯಕ್ಷ ಎಂ.ಎ. ಕುರ್ತಕೋಟಿ ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಮಾಜಿ ಸದಸ್ಯ ಎಂ.ಎಂ. ಮಾಳೆಕೊಪ್ಪ, ನ್ಯಾಷನಲ್ ರಾಜೀವ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಿ.ಎಂ. ನದ್ದಿಮುಲ್ಲಾ, ಕಾಂಗ್ರೆಸ್ ಮುಖಂಡ ಸೈಯದ್ ಖಾಲಿದ್ ಕೊಪ್ಪಳ, ಚಲನಚಿತ್ರ ನಾಯಕ ನಟ ಹರೀಶ್ ಜಿ. ದೊಡ್ಡಮನಿ, ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೇಶ್ ಎಸ್.ಎಚ್., ಇಮಾಮ್ ಸಾಬ್ ನಮಾಜಿ, ಫೋರ್ ವೀಲರ್ ಮೆಕ್ಯಾನಿಕ್ ಸಂಘದ ಅಧ್ಯಕ್ಷ ಉಸ್ಮಾನ್ ಮಾಳೆಕೊಪ್ಪ ಹಾಗೂ ಸ್ವಾಭಿಮಾನ ಕರವೇ ಉಪಾಧ್ಯಕ್ಷ ಹನಮಂತ ನಾಗರಳ್ಳಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಮಮತಾಜ್ ದೊಡ್ಡಮನಿ ನಿರೂಪಿಸಿದರು. ಉಮೇಶ್ ಪೂಜಾರ, ಗೋವಿಂದ ಖ್ಯಾಡದ, ಸುರೇಶ ಗಾಣಿಗೇರ, ಗಣಪತಿ ಬನಕಾರ, ಕಾರ್ತಿಕ ಬಡಿಗೇರ, ನಿಖಿಲ ಕಡೆಮನಿ, ಮುತ್ತಪ್ಪ ಪೂಜಾರ, ಯಚ್ಚರಪ್ಪ ಪೂಜಾರ, ಮಲೀಕ, ಇಮ್ರಾನ್, ಹಜರತ್ ಅಲಿ, ಬಾದಷಾ, ಜೈಲಾನಿ ನರೇಗಲ್, ಸಿಕಂದರ್ ಸೇರಿದಂತೆ ವೇದಿಕೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.