ಸಾರಾಂಶ
ಯಾದಗಿರಿ ನಗರದಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಘನತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಯಲ್ಲಿ ತೊಡಗಿರುವ ಜಿ.ಪಿ.ಎಲ್.ಎಫ್ ಸದಸ್ಯರಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮ ಜರುಗಿತು.
ಕನ್ನಡಪ್ರಭ ವಾರ್ತೆ ಯಾದಗಿರಿ
ಗ್ರಾಮೀಣ ಪ್ರದೇಶದಲ್ಲಿ ಘನತ್ಯಾಜ್ಯ ನಿರ್ವಹಿಸುವುದು ಪ್ರಮುಖ ವಿಷಯವಾಗಿದ್ದು, ಇದಕ್ಕೆ ಪೂರಕವಾಗಿ ಸ್ವ-ಸಹಾಯ ಸಂಘಗಳ ಸದಸ್ಯರ ಪಾತ್ರ ಮಹತ್ವಪೂರ್ಣವಾದದ್ದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ ಹೇಳಿದ್ದಾರೆ.ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಘನತ್ಯಾಜ್ಯ ನಿರ್ವಹಣೆ ಮತ್ತು ಕಾರ್ಯಾಚರಣೆಯಲ್ಲಿ ತೊಡಗಿರುವ ಜಿ.ಪಿ.ಎಲ್.ಎಫ್ ಸದಸ್ಯರಿಗೆ ನಗರದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮಾಂತರ ಪ್ರದೇಶದಲ್ಲಿ ತಾಜ್ಯ ಸಂಪತ್ತಿನೆಡೆಗೆ ನಡೆಯುವ ಮಾರ್ಗವಾಗಿದೆ. ಪರಿಸರ ಸಂರಕ್ಷಣೆ ಮಾಡುವ ಮೂಲಕ ಗಾಂಧೀಜಿ ಅವರ ಕನಸಾದ ಶುಚಿತ್ವ ಎಲ್ಲರೂ ಪಾಲಿಸೋಣ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿಗಳಾದ ಗುರುನಾಥ ಗೌಡಪ್ಪನೋರ್, ಯೋಜನಾ ನಿರ್ದೇಶಕರಾದ ಕೆ. ಕುಮಲಯ್ಯ, ಯಾದಗಿರಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ ಶರಭೈ, ವಡಗೇರಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ್, ಯಾದಗಿರಿ ತಾಲೂಕು ಯೋಜನಾಧಿಕಾರಿ ಶಶಿಧರ್, ವ್ಯವಸ್ಥಾಪಕರಾದ ಅಶೋಕ ಕಲಾಲ್ ಸೇರಿದಂತೆ ಇತರರಿದ್ದರು.