ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಕ್ರೀಡೆ ಪಾತ್ರ ಅನನ್ಯ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು

| Published : Jan 28 2024, 01:20 AM IST

ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಕ್ರೀಡೆ ಪಾತ್ರ ಅನನ್ಯ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು
Share this Article
  • FB
  • TW
  • Linkdin
  • Email

ಸಾರಾಂಶ

ಆರ್ಯಭಟ ಅಂತಾರಾಷ್ಟ್ರೀಯ ಅಕಾಡೆಮಿ ಶಿಕ್ಷಣ ಸಂಸ್ಥೆ 6ನೇ ವಾರ್ಷಿಕ ಕ್ರೀಡಾಕೂಟಕ್ಕೆ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು ಚಾಲನೆ ನೀಡಿದರು

ಕನ್ನಡಪ್ರಭ ವಾರ್ತೆ ಯಾದಗಿರಿ

ಸ್ಪರ್ಧಾತ್ಮಕ ಯುಗದಲ್ಲಿ, ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯಲ್ಲಿ ಕ್ರೀಡೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.

ನಗರದ ಹೊರವಲಯದಲ್ಲಿರುವ ಆರ್ಯಭಟ ಅಂತಾರಾಷ್ಟ್ರೀಯ ಅಕಾಡೆಮಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಹಮ್ಮಿಕೊಂಡಿದ್ದ 6ನೇ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಪೋಷಕರು ಕೂಡ ತಮ್ಮ ಮಕ್ಕಳ ಅಭ್ಯಾಸ, ಹವ್ಯಾಸ ಚಟುವಟಿಕೆಗಳ ಬಗ್ಗೆ ಗಮನ ಹರಿಸಬೇಕು. ಅವರಿಗೆ ಉತ್ತಮ ಸಂಸ್ಕಾರ ನೀಡುವ ಮೂಲಕ ಅವರಿಗೆ ಸದಾ ಸಕರಾತ್ಮಕ ಚಟುವಟಿಕೆಗಳಿಗೆ ಬೆಂಬಲಿಸಬೇಕು. ಅಂದಾಗ ಮಾತ್ರ ಅವರಲ್ಲಿ ಆತ್ಮವಿಶ್ವಾಸ ವೃದ್ಧಿಯಾಗಿ ಮುಂದುವರಿಯುತ್ತಾರೆ ಎಂದು ತಿಳಿಸಿದರು.

ಈ ಶಾಲೆಯಲ್ಲಿ ಆಡಳಿತ ಮಂಡಳಿಯವರು ವಿದ್ಯಾರ್ಥಿಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಜೊತೆಗೆ ಉತ್ತಮ ಪರಿಸರ ನಿರ್ಮಾಣ ಮಾಡಿ, ಸ್ಪರ್ಧಾ ಮನೋಭಾವನೆ ಮೂಡಿಸಿರುವುದು ಬದಲಾವಣೆ ಸಂಕೇತ. ಕ್ರೀಡಾಪಟುಗಳು ಸಾಧನೆ ಮಾಡಿ ರಾಜ್ಯಮಟ್ಟದವರೆಗೆ ತಮ್ಮ ಕ್ರೀಡಾಪ್ರದರ್ಶನ ಮಾಡಿ, ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಜಿಲ್ಲೆಗೆ ಕೀರ್ತಿ ತರಲಿ ಎಂದು ಹಾರೈಸಿದರು.

ಮೈದಾನದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಕ್ರೀಡಾ ಚಟುವಟಿಕೆಗಳು ಹಾಗೂ ಯೋಗ ಪ್ರದರ್ಶನ ಎಲ್ಲರ ಗಮನ ಸೆಳೆದವು. ಪ್ರಾಸ್ತಾವಿಕವಾಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಧಾಕರರಡ್ಡಿ ಮಾಲಿ ಪಾಟೀಲ್ ಅನಪೂರ ಮಾತನಾಡಿದರು. ಪ್ರಾಂಶುಪಾಲ ಪಿ. ಅರವಿಂದಾಕ್ಷಣ, ವೆಂಕಟರಡ್ಡಿ ಪಾಟೀಲ್, ಅರವಿಂದರಡ್ಡಿ ವೇದಿಕೆಯಲ್ಲಿದ್ದರು. ದೈಹಿಕ ಶಿಕ್ಷಕ ಅನೂಪ್ ಸ್ವಾಗತಿಸಿದರು. ಲಕ್ಷ್ಮಿ ಪಾಟೀಲ್ ವಂದಿಸಿದರು.