ಸಮಾಜ ಸರಿ ದಿಕ್ಕಿನಲ್ಲಿ ಸಾಗಲು ಶಿಕ್ಷಕರ ಪಾತ್ರ ಮಹತ್ವದ್ದು

| Published : Sep 06 2024, 01:07 AM IST

ಸಮಾಜ ಸರಿ ದಿಕ್ಕಿನಲ್ಲಿ ಸಾಗಲು ಶಿಕ್ಷಕರ ಪಾತ್ರ ಮಹತ್ವದ್ದು
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜ ಬದಲಾವಣೆಯಲ್ಲಿ ಶಿಕ್ಷಕರ ಪಾತ್ರ ಗಮನಾರ್ಹವಾಗಿದೆ. ಶಿಕ್ಷಕ ವೃತ್ತಿ ವೃತ್ತಿಯಾಗಿರದೇ ಅದೊಂದು ಯಜ್ಞವಾಗಿದೆ ಎಂದು ಸಚಿವ ಮಂಕಾಳ ವೈದ್ಯ ತಿಳಿಸಿದರು.

ಭಟ್ಕಳ: ಸಮಾಜ ಸರಿಯಾದ ದಿಕ್ಕಿನಲ್ಲಿ ಸಾಗಬೇಕೆಂದರೆ ಶಿಕ್ಷಕರ ಪಾತ್ರ ಮಹತ್ವದ್ದು. ಗುರುವಂದನೆ ಎನ್ನುವ ಶಬ್ದವೇ ಅದ್ಭುತ ಕಲ್ಪನೆ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜೀವನವೇ ಒಂದು ಆದರ್ಶ. ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದರು.

ಇಲ್ಲಿನ ಕಮಲಾವತಿ ರಾಮನಾಥ ಶ್ಯಾನಭಾಗ ಕಲಾಮಂಟಪದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಗುರುವಂದನಾ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಮಾಜ ಬದಲಾವಣೆಯಲ್ಲಿ ಶಿಕ್ಷಕರ ಪಾತ್ರ ಗಮನಾರ್ಹವಾಗಿದೆ. ಶಿಕ್ಷಕ ವೃತ್ತಿ ವೃತ್ತಿಯಾಗಿರದೇ ಅದೊಂದು ಯಜ್ಞವಾಗಿದೆ. ಸಮಾಜದಲ್ಲಿ ಶಿಕ್ಷಕರಿಗೆ ಉನ್ನತವಾದ ಗೌರವಿದೆ ಎಂದರು.

ಕೋಟೇಶ್ವರ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ನಾಯಕ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ ಮುಂತಾದವರು ಮಾತನಾಡಿದರು.

ತಹಸೀಲ್ದಾರ್ ನಾಗರಾಜ ನಾಯ್ಕಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಉಲ್ಲಾಸ ನಾಯ್ಕ, ಪ್ರಧಾನ ಕಾರ್ಯದರ್ಶಿ ಎಂ.ಎನ್. ನಾಯ್ಕ, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ಶಿರಾಲಿ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶಾರದಾ ನಾಯ್ಕ, ಅರ್ಬನ್ ಬ್ಯಾಂಕ್ ಅಧ್ಯಕ್ಷ ಜಾಪರ್ ಸಾಧಿಕ್, ಪಧಾನ ವ್ಯವಸ್ಥಾಪಕ ವಸಂತ ಶಾಸ್ತ್ರಿ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ ಪಟಗಾರ ಮುಂತಾದವರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ನಾಯಕ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಶಿಕ್ಷಕರಾದ ಪರಮೇಶ್ವರ ನಾಯ್ಕ, ಪ್ರತಿಭಾ ಕರ್ಕಿಕರ್ ನಿರೂಪಿಸಿದರು. ಕ್ಷೇತ್ರ ಸಂಪನ್ಮೂಲ ಅಧಿಕಾರಿ ಪೂರ್ಣಿಮಾ ಮೊಗೇರ ವಂದಿಸಿದರು. ಇದೇ ಸಂದರ್ಭದಲ್ಲಿ ಸಾಲಗದ್ದೆ ಸ್ಪೋರ್ಟ್ಸನಿಂದ, ಕೆ.ವಿ. ಪ್ರಭು ಶಿರಾಲಿ, ಭಟ್ಕಳ ಅರ್ಬನ್ ಬ್ಯಾಂಕ್‌ನಿಂದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿವೃತ್ತ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಮಕ್ಕಳ ಮನಸ್ಸು ಅರಿತು ಬೋಧಿಸಿ: ವೀಣಾ

ಕುಮಟಾ: ಶಿಕ್ಷಕರು ಮಕ್ಕಳ ಮನಸ್ಸು ಅರಿತು ಪಾಠ ಮಾಡಬೇಕು. ಶಿಸ್ತು, ಸಂಯಮ ಮತ್ತು ವಿಷಯ ಪ್ರಭುತ್ವ ಬೆಳೆಸಿಕೊಳ್ಳಬೇಕು. ಎಲ್ಲ ವಿದ್ಯಾರ್ಥಿಗಳನ್ನು ಸಮಾನವಾಗಿ ಕಾಣಬೇಕು ಎಂದು ನಿವೃತ್ತ ಮುಖ್ಯಾಧ್ಯಾಪಕಿ ವೀಣಾ ಕೂರ್ಸೆ ಹೇಳಿದರು.ಇಲ್ಲಿನ ಕಮಲಾ ಬಾಳಿಗಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಸನ್ಮಾನಿತರಾಗಿ ಮಾತನಾಡಿದರು.ಮುಖ್ಯ ಅತಿಥಿ ಆಭರಣ ಜ್ಯುವೆಲರ್ಸ್ ಕುಮಟಾ ಶಾಖೆಯ ಇಒ ರಮೇಶ ಪೈ, ಶಿಕ್ಷಕ ಸಮಾಜದ ಶಿಲ್ಪಿ ಎಂದರು. ಕಾಲೇಜಿನ ಎಲ್ಲ ಉಪನ್ಯಾಸಕರನ್ನು ಗೌರವಿಸಿದರು.ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯೆ ಡಾ. ಪ್ರೀತಿ ಪಿ. ಭಂಡಾರಕರ, ಶಿಕ್ಷಕರು ಮಕ್ಕಳಲ್ಲಿ ಮಾನವೀಯ ಸಂಬಂಧ, ಜೀವನ ಕೌಶಲ್ಯ ಬೆಳೆಸಬೇಕು. ಸಮಾಜ ಶಿಕ್ಷಕರಿಂದ ಅನೇಕ ನಿರೀಕ್ಷೆಗಳನ್ನು ಹೊಂದಿದ್ದು ಅವುಗಳನ್ನು ಪೂರೈಸಬೇಕು ಎಂದರು.

ಶಿಕ್ಷಕರ ದಿನಾಚರಣೆ ನಿಮಿತ್ತ ಕಾಲೇಜಿನಲ್ಲಿ ಆದರ್ಶ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್ ಕುರಿತು ನಡೆಸಿದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಮಹೇಶ ಎಸ್. ಕಲ್ಯಾಣಕರ, ತೇಜಾ ಎಂ. ನಾಯ್ಕ ದ್ವಿತೀಯ ಮತ್ತು ದೀಪಲಕ್ಷ್ಮೀ ಲಕ್ಷ್ಮೇಶ್ವರ, ವಿ. ಅನ್ವಿತಾ ದ್ವಿತೀಯ ಹಾಗೂ ಸಮಾಧಾನಕರ ಬಹುಮಾನವನ್ನು ಸುಮಾ ಎ. ನಾಯ್ಕ ಸ್ವೀಕರಿಸಿದರು.ನಾಗಶ್ರೀ ವಿ. ಹೆಗಡೆ ಪ್ರಾರ್ಥಿಸಿದರು. ವಿದ್ಯಾರ್ಥಿ ಸಂಘದ ಕಾರ್ಯಧ್ಯಕ್ಷ ಜಿ.ಡಿ. ಭಟ್ ಸ್ವಾಗತಿಸಿದರು. ಸುಬ್ರಹ್ಮಣ್ಯ ಕೆ. ಭಟ್ ಅತಿಥಿಗಳನ್ನು ಪರಿಚಯಿಸಿದರು. ಬಹುಮಾನಿತರ ಯಾದಿಯನ್ನು ಉಮೇಶ ನಾಯ್ಕ ಎಸ್.ಜೆ. ವಾಚಿಸಿದರು. ತೇಜಾ ಎಂ. ನಾಯ್ಕ ವಂದಿಸಿದರು. ವಿ. ಅನ್ವಿತಾ ಕಾರ್ಯಕ್ರಮ ನಿರ್ವಹಿಸಿದರು.