ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು

| Published : Sep 06 2025, 01:00 AM IST

ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾ ವಿಕಾಸ ಪದವಿಪೂರ್ವ ಕಾಲೇಜಿನಲ್ಲಿ ದೇಶಭಕ್ತರ ಬಳಗ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ದೇಶಭಕ್ತಿ, ಸಾಮಾಜಿಕ ಜವಾಬ್ದಾರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಲು ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಅದೇ ರೀತಿ ಮಲ್ಲಿಕಾರ್ಜುನಪುರ ಶಾಲೆಯ ಮುಖ್ಯೋಪಾಧ್ಯಾಯರಾದ ಈರೇಶ್ ಅವರು ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸುವಲ್ಲಿ ಅವರ ಪ್ರಯತ್ನ ಶ್ಲಾಘನೀಯವಾಗಿದ್ದು ಉತ್ತಮ ಶಿಕ್ಷಕರಾಗಿ ಸನ್ಮಾನಿಸುತ್ತಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿ ಎಂದರು.

ಕನ್ನಡಪ್ರಭ ವಾರ್ತೆ ಬೇಲೂರು

ಉತ್ತಮ ಸಮಾಜವನ್ನು ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ ಎಂದು ದೇಶಭಕ್ತರ ಬಳಗದ ಅಧ್ಯಕ್ಷ ಡಾ. ಸಂತೋಷ್ ಹೇಳಿದರು.

ವಿದ್ಯಾ ವಿಕಾಸ ಪದವಿಪೂರ್ವ ಕಾಲೇಜಿನಲ್ಲಿ ದೇಶಭಕ್ತರ ಬಳಗ ವತಿಯಿಂದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ಮಕ್ಕಳಲ್ಲಿ ಉತ್ತಮ ಸಂಸ್ಕಾರ, ದೇಶಭಕ್ತಿ, ಸಾಮಾಜಿಕ ಜವಾಬ್ದಾರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಲು ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಾರೆ. ಅದೇ ರೀತಿ ಮಲ್ಲಿಕಾರ್ಜುನಪುರ ಶಾಲೆಯ ಮುಖ್ಯೋಪಾಧ್ಯಾಯರಾದ ಈರೇಶ್ ಅವರು ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸುವಲ್ಲಿ ಅವರ ಪ್ರಯತ್ನ ಶ್ಲಾಘನೀಯವಾಗಿದ್ದು ಉತ್ತಮ ಶಿಕ್ಷಕರಾಗಿ ಸನ್ಮಾನಿಸುತ್ತಿರುವುದು ಸಂಸ್ಥೆಗೆ ಹೆಮ್ಮೆಯ ಸಂಗತಿ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಮಾತನಾಡಿ, ಈರೇಶ್ ಅವರನ್ನು ಸನ್ಮಾನಿಸುತ್ತಿರುವ ದೇಶಭಕ್ತರ ಬಳಗದ ಕಾರ್ಯವನ್ನು ಪ್ರಶಂಸಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ಬೇಲೂರು ಘಟಕದ ಅಧ್ಯಕ್ಷ ಚಂದ್ರಶೇಖರ್ ಅವರು, ಈರೇಶ್ ಅವರ ತ್ಯಾಗಮಯ ಜೀವನವನ್ನು ಕೊಂಡಾಡಿದರು. ಸರ್ಕಾರ ದ್ವಿಭಾಷಾ ಸೂತ್ರ ನೀತಿ ಜಾರಿಯಲ್ಲಿ ವಿಳಂಬ ಮಾಡಿದರೆ ಹೋರಾಟ ಮಾಡುವುದಾಗಿ ಅವರು ಎಚ್ಚರಿಸಿದರು. ಬೇಲೂರು ಸರ್ಕಾರಿ ಶಿಕ್ಷಕರ ಸಂಘದ ಅಧ್ಯಕ್ಷ ಪಾಲಾಕ್ಷ ಮಾತನಾಡಿದರು. ಕಾರ್ಯಕ್ರಮದಲ್ಲಿ ದೇಶಭಕ್ತರ ಬಳಗದ ಕಾರ್ಯದರ್ಶಿ ಮಹೇಶ್, ಪದಾಧಿಕಾರಿಗಳಾದ ಮಹದೇವ್, ಆಂದಲೆ ಕೃಷ್ಣಮೂರ್ತಿ, ಕೇಶವ, ಕಿರಣ್, ವಿದ್ಯಾ ವಿಕಾಸ ಪದವಿಪೂರ್ವ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.