ದೇಶದ ಪ್ರಗತಿಯಲ್ಲಿ ಶಿಕ್ಷಕ ಪಾತ್ರ ಮಹತ್ವದ್ದು

| Published : Sep 06 2025, 01:00 AM IST

ಸಾರಾಂಶ

ಬಹುತೇಕವಾಗಿ ಬಡ ಮಕ್ಕಳೇ ಹೆಚ್ಚಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಾರೆ ಅದು ಅಲ್ಲದೆ ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆ ಬೀಳುವ ಕಾರಣದಿಂದಾಗಿ ಸರ್ಕಾರ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು. ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು ಕೂಡಲೇ ಶಾಲೆಗಳಿಗೆ ದೈಹಿಕ ಶಿಕ್ಷಕರನ್ನು ನಿಯೋಜನೆ ಮಾಡಬೇಕು ಗುಣಮಟ್ಟದ ಶಿಕ್ಷಣವಿಲ್ಲದ ದೇಶ ಭವಿಷ್ಯದಲ್ಲಿ ಕಷ್ಟಕರ ನಾವು ಗುರುಗಳನ್ನು ಪೂಜ್ಯ ಭಾವನೆಯಿಂದ ಕಾಣಬೇಕು. ಅತಿಥಿ ಶಿಕ್ಷಕರಿಗೆ ಸರ್ಕಾರ ಸೌಲಭ್ಯಗಳನ್ನು ಕಲ್ಪಿಸಬೇಕು ಮತ್ತಷ್ಟು ಶಿಕ್ಷಣ ಕ್ಷೇತ್ರವನ್ನು ಉನ್ನತ ಮಟ್ಟಕ್ಕೆ ತರಬೇಕೆಂದು ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಭಾರತ ದೇಶವು ಉನ್ನತ ಮಟ್ಟಕ್ಕೆ ಸೇರಲು ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದೆ ಎಂದು ಶಾಸಕ ಸಿಮೆಂಟ್ ಮಂಜುನಾಥ್ ಹೇಳಿದರು.

ಶುಕ್ರವಾರ ಪಟ್ಟಣದ ಗುರುವೇ ಗೌಡ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು ಶಿಕ್ಷಣ ಇರುವ ಕಡೆ ಗೌರವ ಹೆಚ್ಚುತ್ತದೆ. ದೇಶ ಇಂದು ಉನ್ನತ ಮಟ್ಟಕ್ಕೆ ಬೆಳೆಯಲು ಶಿಕ್ಷಕರು ಕಾರಣ ಶಿಕ್ಷಕರಿಲ್ಲದ ಸಮಾಜ ಊಹಿಸಲು ಅಸಾಧ್ಯ ಶಿಕ್ಷಕರು ಮಕ್ಕಳಿಗೆ ವಿದ್ಯೆ ಕಲಿಸುವ ಜೊತೆಗೆ ಸಂಸ್ಕಾರವನ್ನು ಕಲಿಸಬೇಕು. ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಸಕಲೇಶಪುರ ತಾಲೂಕು ಐದನೇ ಸ್ಥಾನ ಬರುವಲ್ಲಿ ಶಿಕ್ಷಕರ ಪಾತ್ರ ಬಹುದೊಡ್ಡದು ಇದನ್ನು ಮುಂದೆಯೂ ಕೂಡ ಮುಂದುವರಿಸಿಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಬೇಕು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಬೇಕು ಇಂದು ಸರ್ಕಾರಿ ಶಾಲೆಗಳ ಪರಿಸ್ಥಿತಿ ಅತ್ಯಂತ ಶೋಚನಿಯವಾಗಿದೆ.

ಬಹುತೇಕವಾಗಿ ಬಡ ಮಕ್ಕಳೇ ಹೆಚ್ಚಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಾರೆ ಅದು ಅಲ್ಲದೆ ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆ ಬೀಳುವ ಕಾರಣದಿಂದಾಗಿ ಸರ್ಕಾರ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು. ಸರ್ಕಾರಿ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು ಕೂಡಲೇ ಶಾಲೆಗಳಿಗೆ ದೈಹಿಕ ಶಿಕ್ಷಕರನ್ನು ನಿಯೋಜನೆ ಮಾಡಬೇಕು ಗುಣಮಟ್ಟದ ಶಿಕ್ಷಣವಿಲ್ಲದ ದೇಶ ಭವಿಷ್ಯದಲ್ಲಿ ಕಷ್ಟಕರ ನಾವು ಗುರುಗಳನ್ನು ಪೂಜ್ಯ ಭಾವನೆಯಿಂದ ಕಾಣಬೇಕು. ಅತಿಥಿ ಶಿಕ್ಷಕರಿಗೆ ಸರ್ಕಾರ ಸೌಲಭ್ಯಗಳನ್ನು ಕಲ್ಪಿಸಬೇಕು ಮತ್ತಷ್ಟು ಶಿಕ್ಷಣ ಕ್ಷೇತ್ರವನ್ನು ಉನ್ನತ ಮಟ್ಟಕ್ಕೆ ತರಬೇಕೆಂದು ಅಭಿಪ್ರಾಯಪಟ್ಟರು.

ಮಾಜಿ ಶಾಸಕ ಎಚ್ ಎಂ ವಿಶ್ವನಾಥ್ ಮಾತನಾಡಿ, ಶಿಕ್ಷಕರು ಇಂದು ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದು, ಆದರೆ ದುರದೃಷ್ಟವೆಂಬಂತೆ ಇಂದು ಸಮಾಜಘಾತಕ ಶಕ್ತಿಗಳು ಮಕ್ಕಳ ಮೇಲೆ ಡ್ರಗ್ಸ್‌ನಂತಹ ಪ್ರಯೋಗಗಳನ್ನು ಮಾಡುವ ಮೂಲಕ ಇಡೀ ಸಮಾಜವನ್ನು ಹಾಳು ಮಾಡುತ್ತಿದ್ದು, ಶಿಕ್ಷಕರು ಮತ್ತು ಮಕ್ಕಳ ಪೋಷಕರು ಮಕ್ಕಳ ಮೇಲೆ ನಿಗಾ ಇಡುವ ಮೂಲಕ ನಾವೆಲ್ಲರೂ ಇಂತಹ ಡ್ರಗ್ಸ್‌ ಮಾಫಿಯಾ ಸಮಾಜದಿಂದ ಮಕ್ಕಳನ್ನು ಮುಕ್ತ ಮಾಡಿ ಸುಂದರ ಸಮಾಜವನ್ನು ನಿರ್ಮಾಣ ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಶಿಕ್ಷಕರ ಮಕ್ಕಳಿಗೆ ಹಾಗೂ ನಿವೃತ್ತ ಶಿಕ್ಷಕರಿಗೆ ಮತ್ತು ಉತ್ತಮ ಶಿಕ್ಷಕರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪುರಸಭೆಯ ಅಧ್ಯಕ್ಷೆ ಜ್ಯೋತಿ ರಾಜಕುಮಾರ್ ,ಉಪಾಧ್ಯಕ್ಷರಾದ ಜರೀನಾ, ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಪಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ತಮ್ಮಣ್ಣ ಶೆಟ್ಟಿ, ಅನುದಾನ ರಹಿತ ಶಾಲೆಗಳ ಅಧ್ಯಕ್ಷರಾದ ಮಲ್ನಾಡ್ ಜಾಕೀರ್‌, ಶಿಕ್ಷಕರ ಸಂಘದ ಜಗದೀಶ್, ಬ್ಯಾಕರವಳ್ಳಿ ಗುರುವೇ ಗೌಡ ಕಲ್ಯಾಣ ಮಂಟಪ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮೂಗಲಿ ಧರ್ಮಪ್ಪ, ಕಾರ್ಯದರ್ಶಿ ಯೆಡೆಹಳ್ಳಿ ಮಂಜುನಾಥ್ ಇತರರು ಉಪಸ್ಥಿತರಿದ್ದರು.