ಸಾರಾಂಶ
ಜಿಲ್ಲೆಯ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಹೆಚ್ಚಿನದಾಗಿದ್ದು, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ನಿಮ್ಮೆಲ್ಲರ ಶ್ರಮ ಇದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ಕನ್ನಡಪ್ರಭ ವಾರ್ತೆ, ಚಾಮರಾಜನಗರ
ಜಿಲ್ಲೆಯ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಹೆಚ್ಚಿನದಾಗಿದ್ದು, ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ನಿಮ್ಮೆಲ್ಲರ ಶ್ರಮ ಇದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.ನಗರದ ಜೆಎಸ್‌ಎಸ್ ಸೆಮಿನಾರ್ ಹಾಲ್‌ನಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ , ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹಾಗೂ ಶಿಕ್ಷಕ ಸ್ಪೂರ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಗಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ಸಮಾಜವನ್ನು ತಿದ್ದುವ ಮತ್ತು ಉತ್ತಮ ಪ್ರಜೆಗಳನ್ನು ರೂಪಿಸುವ ಗುರುಗಳು. ಹೀಗಾಗಿ ಅವರಿಗೆ ಹೆಚ್ಚಿನ ಗೌರವ ಸಮಾಜದಲ್ಲಿ ಇದೆ. ಶಿಕ್ಷಕರು ಮಕ್ಕಳಿಗೆ ಪಾಠ ಮಾಡುವ ಜೊತೆಗೆ ಅವರಲ್ಲಿ ಶಿಸ್ತು, ಸಂಸ್ಕಾರವನ್ನು ಕಲಿಸುತ್ತಾರೆ. ಶೇ. ೯೦ ರಷ್ಟು ಅಂಕಗಳನ್ನು ಪಡೆದುಕೊಳ್ಳುವ ಸಾಮರ್ಥ್ಯ ವಿದ್ಯಾರ್ಥಿಗಳಿಗೆ ಇದೆ ಅಂದರೆ ಅದು ನಿಮ್ಮೆಲ್ಲರ ಶ್ರಮವಾಗಿದೆ. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮುಂದಾಗಬೇಕು. ನಮ್ಮೆಲ್ಲರ ಸಹಕಾರ ಇರುತ್ತದೆ. ಈ ಬಾರಿ ಎಸ್‌ಎಸ್‌ಎಲ್‌ಸಿ , ಪಿಯುಸಿಯಲ್ಲಿ ಹೆಚ್ಚಿನ ಮಕ್ಕಳು ಉತ್ತೀರ್ಣರಾಗಿ ರಾಜ್ಯದಲ್ಲಿ ಪಟ್ಟಿನಲ್ಲಿ ನಮ್ಮ ಜಿಲ್ಲೆ ಹತ್ತಾರ ಸಾಲಿನಲ್ಲಿರುವಂತೆ ಮಾಡಬೇಕು ಎಂದರು.ಶಿಕ್ಷಕರ ಸಮಸ್ಯೆಗಳು ನನಗೂ ಅರಿವಿದೆ. ಅವರು ಕೇಳಿದ ತಕ್ಷಣ ಮರು ಮಾತನಾಡದೆ ಸ್ಪಂದಿಸುತ್ತಿದ್ದೇನೆ. ಹೊಸ ವರ್ಷಕ್ಕೆ ನಮ್ಮ ಕಡೆಯಿಂದ ಶಿಕ್ಷಕ ಸಮುದಾಯಕ್ಕೆ ನೆನಪಿನ ಕಾಣಿಕೆಯನ್ನು ನೀಡುವ ಚಿಂತನೆ ಇದೆ. ಸಂಘದ ಮುಖ್ಯಸ್ಥರೊಂದಿಗೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಮಾಡುತ್ತೇವೆ ಎಂದರು.
ಮತ್ತೋರ್ವ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿ, ಶಿಕ್ಷಕರು ಜಿಲ್ಲೆಯ ಅಭಿವೃದ್ದಿಯಲ್ಲಿ ಪ್ರಮುಖ ಪಾಲುದಾರರು. ಅವರು ನೀಡುವ ಶಿಕ್ಷಣ ಒಬ್ಬ ವ್ಯಕ್ತಿಯ ಭವಿಷ್ಯವನ್ನು ಬದಲಾಯಿಸುತ್ತದೆ. ಹೀಗಾಗಿ ಶಿಕ್ಷಕರು ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡುವ ಜೊತೆಗೆ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ ಮಾಡಬೇಕು, ಪ್ರೌಢಶಾಲೆಯ ವಿಭಾಗದಲ್ಲಿ ಈ ಭಾರಿ ನಮ್ಮ ಜಿಲ್ಲೆ ೧೪ನೇ ಸ್ಥಾನವನ್ನು ಪಡೆದುಕೊಂಡಿದೆ. ಈ ಬಾರಿ ಇದನ್ನು ಮೀರಿ ಒಂದಂಕಿಯ ಸಾಲಿನಲ್ಲಿ ಫಲಿತಾಂಶ ಬರುವಂತೆ ಕ್ರಮ ವಹಿಸಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹಾಗೂ ಶಿಕ್ಷಕ ಸ್ಪೂರ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಮಾರಂಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಡಾ. ರೇಣುಕಾದೇವಿ, ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘ ಅಧ್ಯಕ್ಷ ಮಾದಪ್ಪ, ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಮೂಡ್ಲುಪುರ ನಂದೀಶ್, ಡಯಟ್ ಉಪನಿರ್ದೇಶಕ ಕಾಶೀನಾಥ್, ಸರ್ಕಾರಿ ನೌಕರರ ಸಂಘದ ಖಜಾಂಚಿ ಶಿವಕುಮಾರಯ್ಯ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ವೀರಭದ್ರಸ್ವಾಮಿ, ಪ್ರಧಾನ ಕಾರ್ಯದರ್ಶಿ ಎಂ. ಕಿರಣ್‌ರಾಜ್, ಮಾಜಿ ಅಧ್ಯಕ್ಷ ಸಿದ್ದಮಲ್ಲಪ್ಪ, ಉಪಾಧ್ಯಕ್ಷರಾದ ಶಾಂತರಾಜು, ಖಜಾಂಚಿ ಮಹೇಶ್‌ಕುಮಾರ್, ಸಂಘಟನಾ ಕಾರ್ಯದರ್ಶಿ ಶಿವಕುಮಾರ್ ಎಸ್.ಆರ್. ಸಹ ಕಾರ್ಯದರ್ಶಿ ಗಜೇಂದ್ರ, ತಾಲೂಕು ಅಧ್ಯಕ್ಷರಾದ ಗುಂಡ್ಲುಪೇಟೆ ಶಿವವೀರಭದ್ರಪ್ಪ, ಕಾರ್ಯದರ್ಶಿ ಪಶುಪತಿ, ಯಳಂದೂರು ಶಿವಾಲಂಕಾರ್, ಕಾರ್ಯದರ್ಶಿ ಪುತ್ರಸ್ವಾಮಿ, ಹನೂರು ತಾಲೂಕು ಚಂದ್ರಶೇಕರ್, ಕಾರ್ಯದರ್ಶಿ ಚಂದ್ರಶೇಖರಯ್ಯ, ಜಿಲ್ಲಾ ಪದಾಧಿಕಾರಿಗಳಾದ ಶಿವಕುಮಾರ್, ಆನಂದರಾಜ್, ನಾಗೇಶ್, ನಂಜುಂಡಸ್ವಾಮಿ, ಮಹೇಶ್, ಮಲ್ಲೇಶ್, ಶಾಲಿನಿ, ನಿರ್ಮಲ, ಪುಟ್ಟರಾಜು, ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.