ಕಾಂಗ್ರೆಸ್ ಗೆಲುವಿನಲ್ಲಿ ಕಾರ್ಯಕರ್ತರ ಪಾತ್ರ ಅಪಾರ: ಸಚಿವ ಡಿ.ಸುಧಾಕರ್

| Published : Apr 13 2025, 02:07 AM IST

ಕಾಂಗ್ರೆಸ್ ಗೆಲುವಿನಲ್ಲಿ ಕಾರ್ಯಕರ್ತರ ಪಾತ್ರ ಅಪಾರ: ಸಚಿವ ಡಿ.ಸುಧಾಕರ್
Share this Article
  • FB
  • TW
  • Linkdin
  • Email

ಸಾರಾಂಶ

ಕಾಂಗ್ರೆಸ್‌ನ ಸರ್ವತೋಮುಖ ಬೆಳವಣಿಗೆಗೆ ಪಕ್ಷದ ಕಾರ್ಯಕರ್ತರು ಶ್ರಮಿಸಿದ್ದು ಕಾರ್ಯಕರ್ತರ ಸೇವೆಯ ಬಗ್ಗೆ ಪಕ್ಷಕ್ಕೆ ಅಪಾರ ಗೌರವವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಬೆಳವಣಿಗೆಗೆ ಶ್ರಮಿಸಿದ್ಧಾರೆ ಎಂದು ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ ತಿಳಿಸಿದರು.

ಗ್ಯಾರಂಟಿಗಳ ಅನುಷ್ಠಾನದಿಂದ ಪಕ್ಷಕ್ಕೆ ಮತ್ತೊಮ್ಮೆ ಉತ್ತಮ ಭವಿಷ್ಯ

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ರಾಷ್ಟ್ರದ ಭವಿಷ್ಯವನ್ನು ಉಜ್ವಲಗೊಳಿಸಿದ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್‌ ಮಾತ್ರ. ಸುಮಾರು ೧೪೦ ವರ್ಷಗಳಿಂದ ದೇಶದ ಎಲ್ಲಾ ಜನಾಂಗದ ಹಿತವನ್ನು ಕಾಪಾಡುವಲ್ಲಿ ಕಾಂಗ್ರೆಸ್ ಬದ್ಧವಾಗಿದೆ. ಕಾಂಗ್ರೆಸ್‌ನ ಸರ್ವತೋಮುಖ ಬೆಳವಣಿಗೆಗೆ ಪಕ್ಷದ ಕಾರ್ಯಕರ್ತರು ಶ್ರಮಿಸಿದ್ದು ಕಾರ್ಯಕರ್ತರ ಸೇವೆಯ ಬಗ್ಗೆ ಪಕ್ಷಕ್ಕೆ ಅಪಾರ ಗೌರವವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಕ್ಷದ ಬೆಳವಣಿಗೆಗೆ ಶ್ರಮಿಸಿದ್ಧಾರೆ ಎಂದು ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ ತಿಳಿಸಿದರು.

ನಗರದ ಶಾಸಕರ ಭವನದ ಆವರಣದಲ್ಲಿ ಶನಿವಾರ ಪಕ್ಷ ಹಮ್ಮಿಕೊಂಡಿದ್ದ ಸರ್ಕಾರದ ನಡೆ, ಕಾರ್ಯಕರ್ತರ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ಚುನಾವಣೆಯಲ್ಲಿ ನೀಡಿದ ಐದು ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಮೂಲಕ ಸರ್ಕಾರ ಹಾಗೂ ಪಕ್ಷ ಜನರ ವಿಶ್ವಾಸಗಳಿಸಿದೆ. ಮುಂಬರುವ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಸಂಕಲ್ಪವನ್ನು ಕಾರ್ಯಕರ್ತರು ಮಾಡಬೇಕೆಂದರು.

ಮಾಜಿ ಸಂದಸ ಬಿ.ಎನ್.ಚಂದ್ರಪ್ಪ, ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಶ್ರಮದಿಂದಲೇ ಅಧಿಕಾರಕ್ಕೆ ಬಂದ ಪಕ್ಷವಾಗಿದೆ. ಕಾಂಗ್ರೆಸ್‌ ಜನಪ್ರಿಯತೆಯಿಂದ ಬಿಜೆಪಿ ನಾಯಕರಲ್ಲಿ ಅಸಮದಾನ ಮೂಡಿದೆ. ಅನಗ್ಯವಾಗಿ ಸುಳ್ಳು ಪ್ರಚಾರ ಮಾಡುವ ಮೂಲಕ ಕಾಂಗ್ರೆಸ್ ವರ್ಚಸಿಗೆ ಧಕ್ಕೆ ತರಲು ವಿರೋಧ ಪಕ್ಷಗಳು ನಿರಂತರ ಶ್ರಮಿಸುತ್ತಿದ್ದರೂ ನಾಡಿನ ಮತದಾರರ ಒಲವು ಪಕ್ಷದ ಮೇಲಿದೆ. ಪಕ್ಷದ ಕಾರ್ಯಕರ್ತರು ಸ್ಥಳೀಯ ಚುನಾವಣೆಗಳಲ್ಲಿ ಪಕ್ಷವನ್ನು ಬಲಪಡಿಸುವ ಕಾರ್ಯ ಮಾಡಬೇಕು. ಚುನಾವಣೆಯಲ್ಲಿ ಗೆಲುವು ಸಾಧಿಸಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಗತವೈಭವವನ್ನು ಎಲ್ಲರೂ ಕಾಣುವಂತೆ ಆಗಬೇಕೆಂದರು.

ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಪ್ರತಿನಿತ್ಯವೂ ಬಿಜೆಪಿ ನಾಯಕರು ಪಕ್ಷದ ವಿರುದ್ಧ ವಿನಾಕಾರಣ ಸುಳ್ಳು ಆರೋಪಗಳನ್ನು ಹೋರಿಸುತ್ತ ಬಂದಿದ್ಧಾರೆ. ಪಕ್ಷದ ಕಾರ್ಯಕರ್ತರು ದಕ್ಷತೆ, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ಮಾತ್ರ ಪಕ್ಷದ ಬೆಳವಣಿಗೆ ಸಾಧ್ಯ. ಪಕ್ಷ ಬೆಳೆದರೆ ಕಾರ್ಯಕರ್ತರೂ ಸಹ ಬೆಳೆದಂತೆ ಎಂದರು.

ಜಿಲ್ಲಾ ಕೆಪಿಸಿಸಿ ಅಧ್ಯಕ್ಷ ತಾಜ್‌ಪೀರ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಟಿ.ಪ್ರಭುದೇವ್, ಜಿಲ್ಲಾ ಗ್ಯಾರಂಟಿ ಸಮಿತಿ ಅದ್ಯಕ್ಷ ಶಿವಣ್ಣ, ನಗರಸಭೆ ಅಧ್ಯಕ್ಷೆ ಆರ್.ಮಂಜುಳಾ, ಸದಸ್ಯೆ ಕವಿತಾ ಬೋರಯ್ಯ, ಎಸ್.ಎಚ್.ಸೈಯದ್ ಮುಂತಾದವರು ಮಾತನಾಡಿದರು.

ಶಾಸಕ ಟಿ.ರಘುಮೂರ್ತಿ, ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್‌ ಕುಮಾರ್, ಕಾರ್ಯದರ್ಶಿ ಮೈಲಾರಪ್ಪ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಗೀತಾ ನಂದಿನಿಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಬಾಬುರೆಡ್ಡಿ, ಪ್ರಕಾಶ್‌ಮೂರ್ತಿ, ರವಿಕುಮಾರ್, ಶಶಿಕಲಾ ಸುರೇಶ್‌ಬಾಬು, ಸಿ.ವೀರಭದ್ರಬಾಬು, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ನಗರಸಭಾ ಉಪಾಧ್ಯಕ್ಷೆ ಸುಮಭರಮಣ್ಣ, ಸದಸ್ಯರಾದ ಕೆ.ವೀರಭದ್ರಪ್ಪ, ಜೈತುಂಬಿ, ವಿರೂಪಕ್ಷ, ಎಂ.ಜೆ.ರಾಘವೇಂದ್ರ, ಸುಜಾತ, ನಾಮಿನಿ ಸದಸ್ಯರಾದ ಅನ್ವರ್‌ಮಾಸ್ಟರ್, ವೀರಭದ್ರಪ್ಪ, ಬಡಗಿಪಾಪಣ್ಣ, ನಟರಾಜ ಮುಂತಾದವರು ಇದ್ದರು.