ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಜನರ ಪಾತ್ರ ಮುಖ್ಯವಾಗಿದ್ದು, ವ್ಯಸನಮುಕ್ತ ಸಮಾಜದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ ತಿಳಿಸಿದರು.

ನಗರದ ಸರ್ಕಾರಿ ಕಲಾ ಕಾಲೇಜಿನ (ಸ್ವಾಯತ್ತ) ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ), ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಚಿತ್ತರಗಿ ಇಳಕಲ್ ಶ್ರೀ ವಿಜಯ ಮಹಂತೇಶ್ವರ ಸಂಸ್ಥಾನದ ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಡತನ, ಉದ್ಯೋಗಾವಕಾಶದ ಕೊರತೆ, ಶಿಕ್ಷಣದಲ್ಲಿ ಆಸಕ್ತಿ ಕುಂದುವುದು ಅಥವಾ ಮನೆಯ ವಾತಾವರಣ ಸರಿಯಿಲ್ಲದ ಕಾರಣಕ್ಕೆ ಯುವಕರು ದುಶ್ಚಟಗಳಿಗೆ ಬಲಿಯಾಗುವ ಸಾಧ್ಯತೆ ಇರುತ್ತದೆ. ಇದನ್ನು ಮನಗಂಡು ಸರ್ಕಾರವು ಯುವ ಜನರ ಹಿತಕ್ಕಾಗಿ ಹಲವು ಯೋಜನೆಗಳ ಜಾರಿಗೆ ತಂದಿದೆ. ಶಾಲಾ-ಕಾಲೇಜುಗಳ ಸುತ್ತಮುತ್ತ ಗಾಂಜಾ, ಗುಟ್ಕಾ ಹಾಗೂ ಮದ್ಯದ ಮಾರಾಟ ನಿಷೇಧಿಸಿ ಸರ್ಕಾರ ಆದೇಶಿಸಿದೆ. ವಿದ್ಯಾರ್ಥಿಗಳು ಇಂತಹ ವಸ್ತುಗಳನ್ನು ನೋಡಿ ಆಕರ್ಷಿತರಾಗಬಾರದು ಹಾಗೂ ಇವುಗಳಿಂದ ದೂರವಿರಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ಮತ್ತು ಯುವಜನರು ಮೊಬೈಲ್ ಹಾಗೂ ವ್ಯಸನಗಳಿಂದ ದೂರವಿದ್ದು, ಸರ್ಕಾರ ಜಾರಿಗೆ ತಂದಿರುವ ವಿವಿಧ ಜನಪರ ಯೋಜನೆಗಳ ಸದುಪಯೋಗ ಪಡೆದುಕೊಂಡು ತಮ್ಮ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು. ದೇಶ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಯುವಜನರು ಜ್ಞಾನ ಬೆಳೆಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳು ಹಾಗೂ ಯೂಟ್ಯೂಬ್‍ಗಳಂತಹ ಮನರಂಜನಾ ಚಾನೆಲ್‍ಗಳಿಗೆ ದಾಸರಾಗದೆ, ದಿನಪತ್ರಿಕೆಗಳನ್ನು ಓದುವ ಮೂಲಕ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕು ಯುವ ಜನರಿಗೆ ಸಲಹೆ ನೀಡಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ.ಸುನೀಲ್ ಕುಮಾರ್ ಮಾತನಾಡಿ, ಇಂದಿನ ಯುವಜನತೆ ಹಾಗೂ ಮಕ್ಕಳು ನಾನಾ ನಮೂನೆಯ ವ್ಯಸನಗಳಿಗೆ ತುತ್ತಾಗುತ್ತಿರುವುದು ತೀವ್ರ ಆತಂಕಕಾರಿ ಸಂಗತಿಯಾಗಿದ್ದು, ಮೊಬೈಲ್, ಗೇಮಿಂಗ್ ಹಾಗೂ ಮಾದಕದ್ರವ್ಯಗಳ ದಾಸರಾಗುವುದನ್ನು ತಡೆಯುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದರು.

ಮದ್ಯಪಾನ ಹಾಗೂ ಮಾದಕ ವಸ್ತು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಕುರಿತು ಉಪನ್ಯಾಸ ನೀಡಿದ ಮಾನಸಿಕ ಆರೋಗ್ಯ ತಜ್ಞರು ಹಾಗೂ ಚಿಕ್ಕಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಆರ್.ಮಂಜುನಾಥ್ ಮಾತನಾಡಿ, ಮದ್ಯಪಾನ, ಸಿಗರೆಟ್ ಹಾಗೂ ಮಾದಕ ವಸ್ತುಗಳಷ್ಟೇ ಅಲ್ಲದೆ, ಪ್ರಸ್ತುತ ಯುವಜನತೆಯನ್ನು ಕಾಡುತ್ತಿರುವ 15-20 ಸೆಕೆಂಡುಗಳ ಯೂಟ್ಯೂಬ್ ರೀಲ್ಸ್, ಇನ್‍ಸ್ಟಾಗ್ರಾಮ್ ಹಾಗೂ ಮೊಬೈಲ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ, ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಪ್ರಾಂಶುಪಾಲೆ ಡಾ.ಆರ್.ತಾರಿಣಿ ಶುಭದಾಯಿನಿ, ಸಿದ್ದಯ್ಯನಕೋಟೆ ವಿಜಯ ಮಹಂತೇಶ್ವರ ಶಾಖಾ ಮಠದ ಕೆ.ರಾಮಚಂದ್ರಪ್ಪ ಸೇರಿದಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿ, ಸರ್ಕಾರಿ ಕಲಾ ಕಾಲೇಜು ವಿದ್ಯಾರ್ಥಿಗಳು ಇದ್ದರು. ಆಕಾಶವಾಣಿಯ ಡಾ.ನವೀನ್ ಮಸ್ಕಲ್ ನಿರೂಪಿಸಿದರು.