ಎಚ್‌ಐವಿ ನಿರ್ಮೂಲನೆಯಲ್ಲಿ ಯುವಕರ ಪಾತ್ರ ಪ್ರಮುಖ: ಡಾ. ಆಜ್ಞಾ ನಾಯಕ

| Published : Oct 11 2025, 12:03 AM IST

ಎಚ್‌ಐವಿ ನಿರ್ಮೂಲನೆಯಲ್ಲಿ ಯುವಕರ ಪಾತ್ರ ಪ್ರಮುಖ: ಡಾ. ಆಜ್ಞಾ ನಾಯಕ
Share this Article
  • FB
  • TW
  • Linkdin
  • Email

ಸಾರಾಂಶ

ಇಲ್ಲಿನ ಡಾ. ಎ.ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಅಂತಾರಾಷ್ಟೀಯ ಯುವ ದಿನಾಚರಣೆ, ರಾಷ್ಟ್ರೀಯ ಸ್ವಯಂ ಸೇವಾ ದಿನಾಚರಣೆ ಮತ್ತು ಎಚ್‌ಐವಿ/ಏಡ್ಸ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ ಕುಮಟಾ

ಇಲ್ಲಿನ ಡಾ. ಎ.ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಕಾರವಾರ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟೀಯ ಯುವ ದಿನಾಚರಣೆ, ರಾಷ್ಟ್ರೀಯ ಸ್ವಯಂ ಸೇವಾ ದಿನಾಚರಣೆ ಮತ್ತು ಎಚ್‌ಐವಿ/ಏಡ್ಸ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಪ್ರಯುಕ್ತ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದಿಂದ ಏರ್ಪಡಿಸಿದ್ದ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕೋಲಾ ಜೆ.ಸಿ. ಕಾಲೇಜಿನ ಅಖಿಲೇಶ ನಾಯ್ಕ, ದ್ವಿತೀಯ ಸ್ಥಾನ ಪಡೆದ ಹೊನ್ನಾವರ ಸೈಂಟ್ ಇಗ್ನಿಶಿಯಸ್ ಕಾಲೇಜಿನ ಅಲಿನಾ ಸಾಬು, ತೃತೀಯ ಸ್ಥಾನ ಪಡೆದ ಕುಮಟಾ ಬಾಳಿಗಾ ಕಲಾ ಮತ್ತು ವಿಜ್ಞಾನ ಕಾಲೇಜಿನ ಅಂಬಿಕಾ ಗುನಗಾಗೆ ಬಹುಮಾನ ನೀಡಲಾಯಿತು. ಸ್ಪರ್ಧೆ ನಿರ್ಣಾಯಕರಾಗಿ ಶ್ರದ್ಧಾ ಪ್ರಭು ಮುಂಬೈ ಕಾರ್ಯನಿರ್ವಹಿಸಿದರು.

ತಾಲೂಕಾ ಆರೋಗ್ಯಾಧಿಕಾರಿ ಡಾ. ಆಜ್ಞಾ ನಾಯಕ ಕಾರ್ಯಕ್ರಮ ಉದ್ಘಾಟಿಸಿ ಎಚ್‌ಐವಿ/ಏಡ್ಸ್‌ ನಿರ್ಮೂಲನೆಯಲ್ಲಿ ಯುವಕರ ಪಾತ್ರ ಅತ್ಯಮೂಲ್ಯವಾದದ್ದು ಎಂದರು. ಆರೋಗ್ಯ ಶಿಕ್ಷಣಾಧಿಕಾರಿ ಆರ್.ಜಿ. ನಾಯ್ಕ, ಮಾದಕ ದ್ರವ್ಯಗಳಾದ ಗುಟಕಾ, ತಂಬಾಕು, ಸಿಗರೇಟ್ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ವಿನಾಯಕ ಭಟ್ ಮಾತನಾಡಿ, ಯಾವುದೇ ಕಾಯಿಲೆ ಬರದಂತೆ ಮುನ್ನೆಚ್ಚರಿಕೆ ವಹಿಸುವುದೇ ಜಾಣತನ ಎಂದರು.

ವೇದಿಕೆಯಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ವಿಭಾಗದ ಅಧಿಕಾರಿ ಶ್ರೀಕಾಂತ ಹಿರೇಮಠ, ಎನ್‌ಎಸ್‌ಎಸ್ ಕಾರ್ಯದರ್ಶಿಗಳಾದ ಆದಿತ್ಯ ನಾಯ್ಕ, ಕೀರ್ತಿ ಹರಿಕಾಂತ, ಮಾಧ್ಯಮ ಕಾರ್ಯದರ್ಶಿ ಗೌತಮಿ ನಾಯ್ಕ, ವಿದ್ಯಾರ್ಥಿ ಒಕ್ಕೂಟದ ಪ್ರಧಾನಕಾರ್ಯದರ್ಶಿ ಪವನ ನಾಯ್ಕ ಉಪಸ್ಥಿತರಿದ್ದರು.

ಪ್ರದೀಪ ಎಸ್. ನಾಯ್ಕ ಸ್ವಾಗತಿಸಿದರು. ದಿನೇಶ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು. ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಡಾ. ಶಿವಾನಂದ ಬುಳ್ಳ ವಂದಿಸಿದರು.