ದೊಡ್ಡಬಳ್ಳಾಪುರ: ಯುವಜನರ ನಾವೀನ್ಯತೆ, ಉತ್ಸಾಹ ಮತ್ತು ಸಾಮರ್ಥ್ಯಗಳು ದೇಶ ಹಾಗೂ ವಿಶ್ವದ ಪ್ರಗತಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ ಎಂದು ಸಾರ್ವಜನಿಕ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯ ವೈದ್ಯಾಧಿಕಾರಿ ಡಾ. ಪರಮೇಶ್ವರಯ್ಯ ಹೇಳಿದರು.

ಬೆಂ.ಗ್ರಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದಿಂದ ಇಲ್ಲಿನ ಶ್ರೀ ದೇವರಾಜ್ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ನಿರುದ್ಯೋಗ, ಬಡತನ, ಆರೋಗ್ಯ ಸಮಸ್ಯೆಗಳು ಮತ್ತು ಅಸಮಾನತೆಯಂತಹ ಸವಾಲುಗಳ ಕುರಿತು ಚರ್ಚಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಅಂತರಾಷ್ಟ್ರೀಯ ಯುವ ದಿನಾಚರಣೆಯಂತಹ ವೇದಿಕೆಗಳು ಸಹಕಾರಿಯಾಗುತ್ತವೆ ಎಂದರು.

ಎಸ್‌ಡಿಯುಇಟಿ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಒಂದು ದೇಶ ಅಭಿವೃದ್ಧಿಯತ್ತ ಸಾಗಬೇಕಾದರೆ ಯುವಶಕ್ತಿಯನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಹಾಗೂ ಯುವಕರು ತಮ್ಮ ಶಕ್ತಿಯನ್ನು ಸದ್ಬಳಕೆ ಮಾಡಿಕೊಂಡು ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಹೇಳಿದರು.

ಸಾರ್ವಜನಿಕ ಆಸ್ಪತ್ರೆಯ ಎ.ಆರ್.ಟಿ. ಕೇಂದ್ರದ ವೈದ್ಯಾಧಿಕಾರಿ ಡಾ. ಸುನಿಲ್ ಕುಮಾರ್, ಎಚ್‌.ಐ.ವಿ ಮತ್ತು ಏಡ್ಸ್ ಜಾಗೃತಿ ಕುರಿತು ಮಾಹಿತಿ ನೀಡಿದರು.


ಪ್ರಭಾರ ಜಿಲ್ಲಾ ಮೇಲ್ವಿಚಾರಕ ರಾಜೇಂದ್ರ ಮಾತನಾಡಿದರು. ಪ್ರಾಂಶುಪಾಲ ಡಾ. ಎಂ.ಎಸ್. ಗೌರಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಕೆ. ದಕ್ಷಿಣಾಮೂರ್ತಿ, ಎನ್‌.ಎಸ್‌.ಎಸ್ ಅಧಿಕಾರಿ ಡಾ.ಎಂ.ಚಿಕ್ಕಣ್ಣ, ಪ್ರಗತಿ ಕಾಲೇಜಿನ ಶೆಟ್ಟಿ ನಾಯಕ್, ಸಹಾಯಕ ಅಧಿಕಾರಿ ವೆಂಕಟೇಶ್, ಮೆಡಿಕಲ್ ಕೌನ್ಸಿಲರ್ ಜೈಪ್ರಕಾಶ್, ರವಿ ಉಪಸ್ಥಿತರಿದ್ದರು.

13ಕೆಡಿಬಿಪಿ3-

ದೊಡ್ಡಬಳ್ಳಾಪುರದ ಎಸ್‌ಡಿಯುಐಎಂನಲ್ಲಿ ಅಂತರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು.