ರೈತರಿಗೆ ತೊಂದರೆಯಾಗದಂತೆ ಯೋಜನೆ ಅನುಷ್ಠಾನಗೊಳಿಸಬೇಕು: ಶಾಸಕ ಸುನಿಲ್‌

| Published : Dec 20 2024, 12:45 AM IST

ರೈತರಿಗೆ ತೊಂದರೆಯಾಗದಂತೆ ಯೋಜನೆ ಅನುಷ್ಠಾನಗೊಳಿಸಬೇಕು: ಶಾಸಕ ಸುನಿಲ್‌
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿಯ ಎಲ್ಲೂರೂ ಯುಪಿಸಿಎಲ್ ವಿದ್ಯುತ್ ಸ್ಥಾವರದಿಂದ ಕೇರಳದ ಕಾಸರಗೋಡಿಗೆ 400 ಕೆ.ವಿ. ವಿದ್ಯುತ್ ಲೈನ್ ಯೋಜನೆಯಲ್ಲಿ ಸರ್ಕಾರ ರೈತರಿಗೆ ಅನೂಕೂಲವಾಗುವಂತೆ ಬದಲಾವಣೆ ಮಾಡಿಕೊಳ್ಳಬೇಕು. ಆದ್ದರಿಂದ ತಕ್ಷಣಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಗುರುವಾರ ಶಾಸಕ ವಿ. ಸುನಿಲ್‌ ಕುಮಾರ್‌, ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಗಮನ ಸೆಳೆದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಈ ಯೋಜನೆಗೆ ಯಾರ ವಿರೋಧವೂ ಇಲ್ಲ. ಆದರೆ ರೈತರಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಯೋಜನೆ ಅನುಷ್ಠಾನದ ಕುರಿತಾಗಿ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ರೈತರು ಆಂತಕದಲ್ಲಿದ್ದಾರೆ. ಕೃಷಿ ಭೂಮಿ ಹಾಗೂ ಸಮೃದ್ಧವಾಗಿ ಬೆಳೆದು ನಿಂತ ಕೃಷಿಗೆ ಹಾನಿಯಾಗದಂತೆ ಸರ್ಕಾರಿ ಭೂಮಿಯಲ್ಲಿ ವಿದ್ಯುತ್‌ ಲೈನ್‌ ಮತ್ತು ಟವರ್‌ ಅಳವಡಿಸಬೇಕು ಎಂಬುದು ರೈತರ ಆಗ್ರಹ. ಆದ್ದರಿಂದ ರೈತರ ಬೇಡಿಕೆಯಂತೆ ಕೃಷಿ ಭೂಮಿಗೆ ಹಾನಿಯಾಗದಂತೆ ಪರ್ಯಾಯ ಮಾರ್ಗವಾಗಿ ವಿದ್ಯತ್‌ ಲೈನ್‌ ಅಳವಡಿಕೆಯ ಬಗ್ಗೆ ಅಧಿಕಾರಿಗಳು ರೈತರೊಂದಿಗೆ ಮಾತುಕೆತೆ ನಡೆಸಿ ಯೋಜನೆಯಲ್ಲಿ ಬದಲಾವಣೆ ಮಾಡಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳುವ ಬಗ್ಗೆ ಸರಕಾರ ಕಾರ್ಯಪ್ರವೃತ್ತವಾಗಬೇಕು ಎಂದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಇಂಧನ ಸಚಿವರು, ಈ ವಿಚಾರವಾಗಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದರು.