ಚಿಕ್ಕಮಗಳೂರುಸಮಾಜದ ಆರೋಗ್ಯ ರಕ್ಷಣೆ ಮತ್ತು ಸ್ವಾಸ್ಥ್ಯ ಕಾಪಾಡುವಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯವಾಗಿದೆ. ಹಗಲಿರುಳು ಶ್ರಮಿಸುವ ಅವರ ದುಃಖ ದುಮ್ಮಾನ ಆಲಿಸಿ, ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ ಹೇಳಿದರು.
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಸಮಾಜದ ಆರೋಗ್ಯ ರಕ್ಷಣೆ ಮತ್ತು ಸ್ವಾಸ್ಥ್ಯ ಕಾಪಾಡುವಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯವಾಗಿದೆ. ಹಗಲಿರುಳು ಶ್ರಮಿಸುವ ಅವರ ದುಃಖ ದುಮ್ಮಾನ ಆಲಿಸಿ, ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ ಹೇಳಿದರು.ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡ ಸೇವಾ ಸಂಕಲ್ಪ ಅಭಿಯಾನದಡಿ ಶುಕ್ರವಾರ ನಗರದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.ಆರೋಗ್ಯ ಕ್ಷೇತ್ರದಲ್ಲಿ ಆಶಾ ಕಾರ್ಯಕರ್ತೆಯರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಗ್ರಾಮೀಣ ಹಾಗೂ ನಗರ ಪ್ರದೇಶ ಗಳಲ್ಲಿ ಜನರ ಆರೋಗ್ಯದ ಕಾಳಜಿ ವಹಿಸುವ ಮೂಲಕ ನಿರಂತರ ಜನಸೇವೆ ಮಾಡುತ್ತಿದ್ದಾರೆ. ಅವರ ನಿಸ್ವಾರ್ಥ ಸೇವೆಗುರುತಿಸಿ ಗೌರವಿಸುವುದು ಸಮಾಜದ ಕರ್ತವ್ಯ ಎಂದರು.ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಕನಿಷ್ಠ ವೇತನ, ವಿಶ್ರಾಂತಿ ಕೊಠಡಿ, ಪ್ರೋತ್ಸಾಹಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಈ ಕುರಿತು ಮುಂಬರುವ ಅಧಿವೇಶನದಲ್ಲಿ ಅವರ ಪರವಾಗಿ ಧ್ವನಿ ಎತ್ತಿ, ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಈಶ್ವರಹಳ್ಳಿ ಮಹೇಶ್, ಕನಕರಾಜ ಅರಸ್, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಸೀತಾರಾಮ್ ಅರಣ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಜಿ.ಎನ್. ವಿಜಯ್ ಕುಮಾರ್, ಮಂಡಲ ಕಾರ್ಯದರ್ಶಿ ಎಚ್.ಪಿ. ರಾಜೀವ್ ಮತ್ತು ಪ್ರಕಾಶ್ ಬಿ.ಎಲ್., ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಲೀಲಾ ಪರಮೇಶ್ ಸೇರಿದಂತೆ ಗ್ರಾಮಾಂತರ ಮತ್ತು ನಗರ ಮಂಡಲಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.