ಸಾರಾಂಶ
ಕನ್ನಡಪ್ರಭ ವಾರ್ತೆ ಭದ್ರಾವತಿ
ಸಮಾಜದಲ್ಲಿ ಪೌರಕಾರ್ಮಿಕರ ಸೇವೆ ಅನನ್ಯವಾಗಿದ್ದು, ಇವರ ಬದುಕು ಸಹ ಉತ್ತಮಗೊಳ್ಳುವ ಜೊತೆಗೆ ಇವರ ಮಕ್ಕಳು ಸಹ ಉತ್ತಮ ಶಿಕ್ಷಣ ಪಡೆದು ಉನ್ನತ ಸ್ಥಾನ ತಲುಪುವಂತಾಗಲಿ ಎಂದು ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್ ಹೇಳಿದರು.ಅವರು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಸಹಯೋಗದೊಂದಿಗೆ ನಗರದ ಬಿ.ಎಚ್ ರಸ್ತೆ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಗರಸಭೆಯಿಂದ ಆಯೋಜಿಸಲಾಗಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿ ದಿನ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ನಮ್ಮೆಲ್ಲರ ಆರೋಗ್ಯಕ್ಕೆ ರಕ್ಷಕರಾಗಿದ್ದಾರೆ. ಪೌರಕಾರ್ಮಿಕರ ಹಿತರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಇವುಗಳ ಸದುಪಯೋಗಪಡೆದುಕೊಂಡು ಉತ್ತಮ ಬದುಕು ಸಾಗಿಸುವಂತೆ ಕರೆ ನೀಡಿದರು.ಹಿರಿಯ ಸದಸ್ಯ ಬಿ.ಕೆ ಮೋಹನ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಬಡ ವರ್ಗದವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ. ಈ ಹಿಂದೆ ರಾಜ್ಯದಲ್ಲಿ ಎಸ್.ಎಂ ಕೃಷ್ಣರವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತಂದಿದ್ದರು. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಕ್ಕಳಿಗೆ ಪೌಷ್ಠಿಕಯುಕ್ತ ಆಹಾರ ನೀಡುವ ನಿಟ್ಟಿನಲ್ಲಿ ಹಾಲು, ಮೊಟ್ಟೆ ವಿತರಣೆ ಮಾಡುತ್ತಿದ್ದಾರೆ ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಪೌರಾಯುಕ್ತ ಕೆ.ಎನ್ ಹೇಮಂತ್, ಪೌರಕಾರ್ಮಿಕರು ಯಾವುದೇ ಕಾರಣಕ್ಕೂ ತಮ್ಮ ಮಕ್ಕಳನ್ನು ಪೌರಕಾರ್ಮಿಕರನ್ನಾಗಿಸಬೇಡಿ. ಉತ್ತಮ ಶಿಕ್ಷಣ ನೀಡಿ ಎಂದರು.ಸದಸ್ಯ ಚನ್ನಪ್ಪ ಸೇರಿದಂತೆ ಇನ್ನಿತರರು ಮಾತನಾಡಿದರು. ವೇದಿಕೆಯಲ್ಲಿ ಉಪಾಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸಯ್ಯದ್ ರಿಯಾಜ್, ಸದಸ್ಯರಾದ ಅನುಸುಧಾ ಮೋಹನ್ ಪಳನಿ, ಶೃತಿ ವಸಂತಕುಮಾರ್, ಸುದೀಪ್ ಕುಮಾರ್, ಸರ್ವಮಂಗಳ ಭೈರಪ್ಪ, ಟಿಪ್ಪು ಸುಲ್ತಾನ್, ಲತಾ ಚಂದ್ರಶೇಖರ್, ಬಸವರಾಜ ಬಿ. ಆನೆಕೊಪ್ಪ, ಬಿ.ಎಂ ಮಂಜುನಾಥ್, ನಾಗರತ್ನ ಅನಿಲ್‌ಕುಮಾರ್, ಸವಿತಾ ಉಮೇಶ್, ಪಲ್ಲವಿ ದಿಲೀಪ್, ಐ.ವಿ ಸಂತೋಷ್ ಕುಮಾರ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷ ಎಸ್. ಚೇತನ್‌ಕುಮಾರ್, ಪದಾಧಿಕಾರಿಗಳಾದ ಡಿ.ಎಸ್ ಹೇಮಂತ್ ಕುಮಾರ್, ಆರ್. ನರಸಿಂಹಮೂರ್ತಿ, ಎಸ್. ಪವನ್‌ಕುಮಾರ್, ವ್ಯವಸ್ಥಾಪಕಿ ಸುನೀತಾಕುಮಾರಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಪ್ರಸಾದ್, ಲೆಕ್ಕಾಧಿಕಾರಿ ಗಿರಿರಾಜ್, ಸಮುದಾಯ ಸಂಘಟನಾ ಅಧಿಕಾರಿ ಸುಹಾಸಿನಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪರಿಸರ ಅಭಿಯಂತರ ಪ್ರಭಾಕರ್ ಸ್ವಾಗತಿಸಿ, ಬಸವರಾಜನಾಯ್ಕ ಸ್ವಾಗತಿ, ಮಹಮದ್ ಗೌಸ್ ಕಾರ್ಯಕ್ರಮ ನಿರೂಪಿಸಿದರು. ನಗರದ ರಂಗಪ್ಪ ವೃತ್ತದಿಂದ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದವರೆಗೂ ಮೆರವಣಿಗೆ ನಡೆಸಲಾಯಿತು.;Resize=(128,128))
;Resize=(128,128))
;Resize=(128,128))
;Resize=(128,128))