ಸಾರಾಂಶ
ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಮಡಿದ ನಮ್ಮ ಹಿರಿಯರ ಸೇವೆ, ತ್ಯಾಗ, ಬಲಿದಾನ ಅವಿಸ್ಮರಣೀಯವಾದುದು ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಹೊಳಲ್ಕೆರೆಯಲ್ಲಿ ನಡೆದ ಸ್ವಾತಂತ್ರ್ಯದಿನಾಚರಣೆಯಲ್ಲಿ ಶಾಸಕ ಎಂ. ಚಂದ್ರಪ್ಪ
ಕನ್ನಡಪ್ರಭವಾರ್ತೆ ಹೊಳಲ್ಕೆರೆದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಮಡಿದ ನಮ್ಮ ಹಿರಿಯರ ಸೇವೆ, ತ್ಯಾಗ, ಬಲಿದಾನ ಅವಿಸ್ಮರಣೀಯವಾದುದು ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.78ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಪಟ್ಟಣದ ಕೊಟ್ರೆ ನಂಜಪ್ಪ ಪದವಿಪೂರ್ವ ಕಾಲೇಜು ಆವರಣದಲ್ಲಿ ಗುರುವಾರ ಗಾಂಧೀಜಿ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ನಮ್ಮ ದೇಶವನ್ನು ಹಿಡಿತದಲ್ಲಿಟ್ಟುಕೊಂಡಿದ್ದ ಬ್ರಿಟೀಷರಿಂದ ಹಿಂಸೆ, ಸಾವು, ನೋವುಗಳನ್ನು ಅನುಭವಿಸಿದ ಮಹನೀಯರು, ಸ್ವತಂತ್ರ ಮೂಲಕ ಪ್ರಜಾಪ್ರಭುತ್ವವನ್ನು ತಂದು ಕೊಟ್ಟಿದ್ದಾರೆ ಎಂದರು.ಸ್ವಾರ್ಥವನ್ನು ಬದಿಗಿಟ್ಟು ಸಿಕ್ಕಿರುವ ಅಧಿಕಾರವನ್ನು ಯಾರು ಸಾರ್ವಜನಿಕ ಸೇವೆಗೆ ಮೀಸಲಿಡುತ್ತಾರೋ ಅವರೇ ನಿಜವಾಗಿಯೂ ದೇಶಭಕ್ತರು. ಪ್ರಧಾನಿ ನರೇಂದ್ರ ಮೋದಿ ಅಧಿಕಾರವನ್ನು ಸೇವೆ ಎಂದು ತಿಳಿದು ಹಗಲಿರುಳು ದೇಶ ಸೇವೆಯಲ್ಲಿ ತೊಡಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಆಡಳಿತ ಪ್ರತಿಪಕ್ಷ ಎನ್ನುವ ಮನಸ್ಥಿತಿಯನ್ನು ಬಿಟ್ಟು ಅಭಿವೃದ್ದಿಗೆ ಎಲ್ಲರೂ ಕೈ ಜೋಡಿಸುವಂತೆ ಶಾಸಕ ಡಾ.ಎಂ. ಚಂದ್ರಪ್ಪ ಮನವಿ ಮಾಡಿದರು.ಡಾ. ಬಿ.ಆರ್. ಅಂಬೇಡ್ಕರ್ ದೇಶಕ್ಕೆ ಸಂವಿಧಾನ ನೀಡಿರುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಎಲ್ಲಾ ಜಾತಿ ಧರ್ಮದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸುವುದು ರಾಜಕಾರಣಿಗಳ ಕರ್ತವ್ಯ. ರಾಜ್ಯ ಸರ್ಕಾರ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮುಂದಿನ ದಿನಗಳಲ್ಲಿ ನೀಡಲಿದೆ. ಪಿಯು ಕಾಲೇಜು, ಪದವಿಪೂರ್ವ ಕಾಲೇಜು, ಒಳಾಂಗಣ ಕ್ರೀಡಾಂಗಣ, ಈಜು ಕೊಳ, ಔಟ್‍ಡೋರ್ ಸ್ಟೇಡಿಯಂಗಳನ್ನು ತಾಲೂಕಿನಲ್ಲಿ ನಿರ್ಮಿಸಲಾಗಿದೆ. ಸರ್ಕಾರಿ ಶಾಲೆಗೆ ಬರುವ ಬಡ ಮಕ್ಕಳಿಗೆ ತೊಂದರೆಯಾಗಬಾರದೆಂದು ಬಸ್‍ಗಳ ಸಂಚಾರ ಆರಂಭಿಸಲಾಗಿದೆ. ಶಿಕ್ಷಕರುಗಳ ಸೇವೆ ಅತ್ಯಮೂಲ್ಯವಾದುದು. ಮಕ್ಕಳಿಗೆ ಪಾಠ ಹೇಳಿಕೊಡುವುದರ ಜೊತೆ ಸಮಾಜ ತಿದ್ದುವ ಹೊಣೆಗಾರಿಕೆ ನಿಮ್ಮ ಮೇಲಿದೆ ಎಂದು ತಿಳಿಸಿದರು.ತಹಶೀಲ್ದಾರ್ ಬೀಬಿ ಫಾತಿಮ, ಗಂಗಾಧರ್, ರುದ್ರಪ್ಪ, ಮುರುಗೇಶ್, ಅಬ್ದುಲ್‍ಕಲಾಂ, ದೇವೇಂದ್ರಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಲೋಕೇಶ್, ಅಶೋಕ್, ಮಲ್ಲಿಕಾರ್ಜುನ್, ಗಂಗಣ್ಣ,ಪುರುಷೋತ್ತಮ್, ಕಿರಣ್‍ಕುಮಾರ್, ಪಿಯು ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಿದ್ದರು. ಡಾ.ಉಮಾಪತಿ ಹಾಗೂ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿರುವವರನ್ನು ಗುರುತಿಸಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್‍ಗಳನ್ನು ವಿತರಿಸಲಾಯಿತು.-------15 ಸಿಟಿಡಿ 3
ಹೊಳಲ್ಕೆರೆಯಲ್ಲಿ ಗುರುವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸೇವೆ ಮಾಡಿರುವವರ ಗೌರವಿಸಲಾಯಿತು. ಶಾಸಕ ಎಂ.ಚಂದ್ರಪ್ಪ ಇದ್ದಾರೆ.