ಕಾನೂನು ಸುವ್ಯವಸ್ಥೆ ಪಾಲನೆಗೆ ಪೊಲೀಸರ ಸೇವೆ ಅನನ್ಯ: ತ್ಯಾಗರಾಜ್ ಇನವಳ್ಳಿ

| Published : Oct 22 2024, 12:10 AM IST

ಕಾನೂನು ಸುವ್ಯವಸ್ಥೆ ಪಾಲನೆಗೆ ಪೊಲೀಸರ ಸೇವೆ ಅನನ್ಯ: ತ್ಯಾಗರಾಜ್ ಇನವಳ್ಳಿ
Share this Article
  • FB
  • TW
  • Linkdin
  • Email

ಸಾರಾಂಶ

ಜನರು ಕಾನೂನು ಮತ್ತು ಸುವ್ಯವಸ್ಥೆ ಪಾಲಿಸುವಲ್ಲಿ ಪೊಲೀಸರ ಪಾತ್ರ ಬಹುಮುಖ್ಯವಾಗಿದೆ ಎಂದು ಬೆಳಗಾವಿಯ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ತ್ಯಾಗರಾಜ್ ಇನವಳ್ಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜನರು ಕಾನೂನು ಮತ್ತು ಸುವ್ಯವಸ್ಥೆ ಪಾಲಿಸುವಲ್ಲಿ ಪೊಲೀಸರ ಪಾತ್ರ ಬಹುಮುಖ್ಯವಾಗಿದೆ ಎಂದು ಬೆಳಗಾವಿಯ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ತ್ಯಾಗರಾಜ್ ಇನವಳ್ಳಿ ಹೇಳಿದರು.

ನಗರ ಪೊಲೀಸ್ ಕಮೀಷನರೇಟ್‌ ಮತ್ತು ಜಿಲ್ಲಾ ಪೊಲೀಸ್‌ ಘಟಕದ ವತಿಯಿಂದ ಪೊಲೀಸ್‌ ಹುತಾತ್ಮರ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, 1959ರ ಅಕ್ಟೋಬರ್ 21ರಂದು ನಡೆದ

ಯುದ್ಧದಲ್ಲಿ ಹಲವಾರು ಪೊಲೀಸರು ಹುತಾತ್ಮರಾಗಿದ್ದಾರೆ. ಪೊಲೀಸ್‌ ಎಂಬ ಅರ್ಥ ಅವರ ಗುಣಗಳನ್ನು ತಿಳಿಸುತ್ತದೆ ಎಂದು ಹೇಳಿದರು.

ಕೇವಲ ಹುತಾತ್ಮರ ಬಲಿದಾನ ಸ್ಮರಿಸಿದರೆ ಸಾಲದು. ಅವರ ಕರ್ತವ್ಯ ದಕ್ಷತೆ ಅರಿತುಕೊಳ್ಳಬೇಕು. ಪೊಲೀಸರ ಕಾರ್ಯ ಕೇವಲ ಕಾನೂನನ್ನು ಕಾಪಾಡುವುದಲ್ಲ. ಸಮಾಜ ರಕ್ಷಿಸುವ ಕಾರ್ಯವನ್ನೂ ಮಾಡುತ್ತಾರೆ ಅವರದ್ದಾಗಿದೆ ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಹುತಾತ್ಮ ಪೊಲೀಸರ ಹೆಸರು ಉಲ್ಲೇಖಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ, ಪುಷ್ಪಚಕ್ರಗಳನ್ನು ಸಮರ್ಪಿಸಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಲಾಯಿತು.

ಬೆಳಗಾವಿ ಉತ್ತರ ವಲಯ ಪೊಲೀಸ್‌ ಮಹಾನಿರೀಕ್ಷಕ ವಿಕಾಸಕುಮಾರ್ ವಿಕಾಸ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ನಗರ ಪೊಲೀಸ್‌ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಡಿಸಿಪಿ ರೋಹನ್ ಜಗದೀಶ ಇತರರು ಇದ್ದರು.