ಸಿದ್ದರಾಮಯ್ಯ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ

| Published : Nov 18 2024, 12:06 AM IST

ಸಾರಾಂಶ

The Siddaramaiah government has kept its promise

-ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಬಿ. ಜಿ. ಗೋವಿಂದಪ್ಪ ಅಭಿಮತ

-----

ಕನ್ನಡಪ್ರಭ ವಾರ್ತೆ ಹೊಸದುರ್ಗ

ಪಂಚ ಗ್ಯಾರಂಟಿ ಯೋಜನೆ ಪ್ರಯೋಜನೆ ಎಲ್ಲ ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಬೇಕು. ಯಾರು ಕೂಡ ಸೌಲಭ್ಯದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ತಾಲೂಕು ಮಟ್ಟದಲ್ಲಿ ಸಮಿತಿ ರಚಿಸಿದೆ ಎಂದು ಶಾಸಕ ಬಿ. ಜಿ. ಗೋವಿಂದಪ್ಪ ಹೇಳಿದರು.

ತಾಪಂ ಆವರಣದಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ನೂತನ ಕಚೇರಿ ಉದ್ಘಾಟಿಸಿ, ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸುವ ಮೂಲಕ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದರು. ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 56220, ಗೃಹ ಜ್ಯೋತಿ ಸಂಪರ್ಕ 61388, ಅನ್ನ ಭಾಗ್ಯ 54949, ಯುವನಿಧಿಯಡಿ 1917 ಫಲಾನುಭವಿಗಳು ಗ್ಯಾರಂಟಿ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಪ್ರತಿ ತಿಂಗಳು 12000 ಮಹಿಳೆಯರು ಶಕ್ತಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ತಾಲೂಕಿನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ತಿಂಗಳು 21.59 ಕೋಟಿ ರು. ಹಾಗೂ ವರ್ಷಕ್ಕೆ 259.08 ಕೋಟಿ ರು. ಹಣ ತಾಲೂಕಿಗೆ ಬರುತ್ತಿದೆ ಎಂದರು.

ಈ ವೇಳೆ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಕಾರೇಹಳ್ಳಿ ಬಸವರಾಜು, ಗ್ಯಾರಂಟಿ ಸಮಿತಿ ಜಿಲ್ಲಾಧ್ಯಕ್ಷ ಶಿವಣ್ಣ, ತಾಲೂಕು ಅಧ್ಯಕ್ಷ ಮಹಮದ್ ಇಸ್ಮಾಯಿಲ್, ಉಪಾಧ್ಯಕ್ಷ ಶ್ರೀನಿವಾಸ್ ಮೂರ್ತಿ, ಸದಸ್ಯರಾದ ಸಣ್ಣ ಕಿಟ್ಟದಹಳ್ಳಿ ಶ್ರೀನಿವಾಸ್, ಕೆ ಕೆ ಹಟ್ಟಿ ಧನಂಜಯ್, ರಾಜೇಂದ್ರ ನಾಯ್ಕ್, ಲೋಕೇಶ್, ಗುರುಮೂರ್ತಿ, ಖಾಧರ್ ನವಜ್, ಮಂಜುನಾಥ್, ಪ್ರಭಾಕರ್, ಲೋಹಿತ್, ಮದುರೆ ಶರತ್ ಮತ್ತಿತರಿದ್ದರು.

----

ಪೋಟೋ: ಹೊಸದುರ್ಗ ತಾಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿಯನ್ನು ಶಾಸಕರಾದ ಬಿ. ಜಿ. ಗೋವಿಂದಪ್ಪ, ಟಿ. ರಘುಮೂರ್ತಿ ಉದ್ಘಾಟಿಸಿದರು.

17ಎಚ್. ಎಸ್. ಡಿ 2: