ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಪಂನ ಕೆಲವು ಹಾಲಿ ಸದಸ್ಯರು ಬಿಜೆಪಿ ಪಕ್ಷ ತ್ಯಜಿಸಿ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಮತ್ತು ಮುಖಂಡ ಬಿ.ಎಲ್.ದೇವರಾಜು ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.ಮುಖಂಡರನ್ನು ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಆತ್ಮೀಯವಾಗಿ ಸ್ವಾಗತಿಸಿದ ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್, ಅನ್ಯ ಪಕ್ಷದ ಮುಖಂಡರ ಆಗಮನದಿಂದ ಅಕ್ಕಿಹೆಬ್ಬಾಳು ಭಾಗದಲ್ಲಿ ಕಾಂಗ್ರೆಸ್ ಶಕ್ತಿ ಮತ್ತಷ್ಟು ವೃದ್ಧಿಸಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಸ್ಟಾರ್ ಚಂದ್ರು ಅವರ ಗೆಲುವು ನಿಶ್ಚಿತ ಎಂದರು.
ದೇಶದ ಅಭಿವೃದ್ಧಿ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ. ಎಲ್ಲಾ ಕ್ಷೇತ್ರಗಳಲ್ಲೂ ದೇಶದ ಪ್ರಗತಿಗೆ ಅಡಿಪಾಯ ಹಾಕಿದವರು ಕಾಂಗ್ರೆಸ್ಸಿಗರು. ಇದರ ಅರಿವಿಲ್ಲದ ಕೆಲವರು ಮೋದಿ ಮೋದಿ ಎನ್ನುತ್ತಿದ್ದಾರೆ. ಧರ್ಮಕ್ಕಿಂತ ಬದುಕು ಮುಖ್ಯ. ದೇಶದ ಬಡವರಿಗಾಗಿ ಕಾಂಗ್ರೆಸ್ ಹಿಂದಿನಿಂದಲೂ ಕೆಲಸ ಮಾಡುತ್ತಿದೆ. ಈಗಲೂ ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಮೂಲಕ ಬಡವರ ಬದುಕಿಗೆ ಆಸರೆಯಾಗಿದೆ ಎಂದರು.ಈ ವೇಳೆ ಗ್ರಾಪಂ ಸದಸ್ಯರಾದ ರಮೇಶ್, ಜಲೇಂದ್ರ, ರಾಜು, ಕುಮಾರೇಗೌಡ, ಪ್ರತೀಪ, ರಾಘು, ಮನು, ಸಾಗರ್, ರಾಜೇಗೌಡ, ಮಂಜಶೆಟ್ಟಿ, ಮನೋಹರ, ಅವರು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಂಗ್ರೆಸ್ ಮುಖಂಡ ಬಿ.ಎಲ್.ದೇವರಾಜು, ಎಂ.ಡಿ.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ನಾಗೇಂದ್ರಕುಮಾರ್, ಗ್ರಾಪಂ ಮಾಜಿ ಸದಸ್ಯರಾದ ವಾಯಿದ್ ಖಾನ್, ಕಿಟ್ಟಣ್ಣ, ವೆಂಕಟಪ್ಪ, ಟಿ.ಕೃಷ್ಣ, ಆರ್.ಶ್ರೀನಿವಾಸ್, ಕೃಷ್ಣೇಗೌಡ, ರಾಜನಾಯಕ್, ಚಿಕ್ಕಯ್ಯ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಇಂದು ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶನಾಗಮಂಗಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಟಿ.ಬಿ.ಬಡಾವಣೆಯ ಶ್ರೀಬಡಗೂಡಮ್ಮದೇವಿ ದೇವಸ್ಥಾನದ ಆವರಣದಲ್ಲಿ ಏ.20ರಂದು ಮಧ್ಯಾಹ್ನ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಹಿರಿಯ ನಾಯಕರು ಸಮಾವೇಶದಲ್ಲಿ ಪಾಲ್ಗೊಂಡು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್‌ಚಂದ್ರು) ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಸಮಾವೇಶದ ಅಂಗವಾಗಿ ಬೃಹತ್ ವೇದಿಕೆಯ ವ್ಯವಸ್ಥೆಯನ್ನು ಜಿಲ್ಲಾ ಎಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಡಾ.ಎ.ಆರ್.ಸುಮಿತ್, ಸಿಪಿಐ ಬಿ.ಆರ್.ಗೌಡ, ಇನ್ಸ್‌ಪೆಕ್ಟರ್ ಅಶೊಕ್‌ಕುಮಾರ್, ಶುಕ್ರವಾರ ಬೆಳಿಗ್ಗೆ ಪರಿಶೀಲನೆ ನಡೆಸಿದರು.