ಜನ ಜಾಗೃತಿಯಿಂದ ಸಮಸ್ಯೆಗೆ ಪರಿಹಾರ

| Published : Jul 13 2024, 01:40 AM IST

ಸಾರಾಂಶ

ಜನಸಂಖ್ಯೆ ಹೆಚ್ಚಳದಿಂದಾಗುವ ಪರಿಣಾಮಗಳನ್ನು ವಿದ್ಯಾರ್ಥಿಗಳು ಅರಿತು ಅದರ ನಿಯಂತ್ರಣದಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಜನಸಂಖ್ಯೆ ಹೆಚ್ಚಳದಿಂದಾಗುವ ಪರಿಣಾಮಗಳನ್ನು ವಿದ್ಯಾರ್ಥಿಗಳು ಅರಿತು ಅದರ ನಿಯಂತ್ರಣದಲ್ಲಿ ಮಹತ್ವದ ಪಾತ್ರ ವಹಿಸಬೇಕು ಎಂದು ಪ್ರಾಚಾರ್ಯ ಶ್ರೀನಿವಾಸ ನರಗುಂದ ಹೇಳಿದರು.

ನಗರದ ವಿದ್ಯಾ ಪ್ರಸಾರಕ ಮಂಡಳದ ಎಸ್.ಆರ್.ನರಸಾಪೂರ ಕಲಾ ಹಾಗೂ ಎಂ.ಬಿ.ಶಿರೂರ ವಾಣಿಜ್ಯ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗ ಆಯೋಜಿಸಿದ್ದ ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ತಗೆದುಕೊಳ್ಳುತ್ತಿದೆ. ಇದರ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುವುದರ ಮೂಲಕ ಇಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು.

ಜನಸಂಖ್ಯೆ ಹೆಚ್ಚಳದಿಂದ ಅಭಿವೃದ್ಧಿಗೆ ಹಿನ್ನೆಡೆಯಾಗತ್ತದೆ. ಯುವ ಸಮುದಾಯ ಇಂತಹ ಸಂಗತಿಗಳನ್ನು ತಿಳಿದುಕೊಂಡು ಉಳಿದವರಲ್ಲೂ ಇದರ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಉಪನ್ಯಾಸಕಿ ಎಸ್.ಪಿ.ದೇಶಪಾಂಡೆ ಮಾತನಾಡಿ, ಸಶಕ್ತ ಭಾರತ ನಿರ್ಮಾಣ ಮಾಡುವ ಉದ್ದೇಶದಿಂದ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿದೆ ಎಂದರು.

ವಿದ್ಯಾರ್ಥಿಗಳಾದ ಸಂಗೀತಾ ಭಜಂತ್ರಿ ಮತ್ತು ಸುಗಂಧಾ ರಾಮೋಡಗಿ ಮಾತನಾಡಿದರು. ಸ್ವಪ್ನಾ ಗೌಡರ ಪ್ರಾರ್ಥಿಸಿದರು. ಉಪನ್ಯಾಸಕಿ ಎ.ಎ.ಗಂಗಲ್ ನಿರೂಪಿಸಿದರು. ಉಪನ್ಯಾಸಕಿ ಎನ್.ಎಚ್.ಹವಾಲ್ದಾರ ವಂದಿಸಿದರು.