‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ಚಿತ್ರದ ಹಾಡು ಬಿಡುಗಡೆ

| Published : Sep 12 2024, 01:54 AM IST

‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ಚಿತ್ರದ ಹಾಡು ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಕಲ್ಪನಾ ಥಿಯೇಟರ್‌ನಲ್ಲಿ ಜರುಗಿತು. ತುಳುನಾಡ ಬಾವುಟ ಹಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್‌ಮೆಂಟ್ ಅರ್ಪಿಸುವ, ಎಚ್.ಪಿ.ಆರ್. ಫಿಲ್ಮ್ಸ್‌ನ ಹರಿಪ್ರಸಾದ್ ರೈ ಅವರ ಸಹಯೋಗದಲ್ಲಿ ಆನಂದ್ ಕುಂಪಲ ಅವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಮಂಗಳವಾರ ಸಂಜೆ ಇಲ್ಲಿನ ಕಲ್ಪನಾ ಥಿಯೇಟರ್‌ನಲ್ಲಿ ಜರುಗಿತು.

ತುಳುನಾಡ ಬಾವುಟ ಹಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಬಳಿಕ ಸಾಯಿರಾಧಾ ಡೆವಲಪರ್ಸ್ ಮಾಲಕ ಮನೋಹರ್ ಶೆಟ್ಟಿ ಅವರು ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ತುಳು ಭಾಷೆ ಮೇಲಿನ ಪ್ರೀತಿ, ಅಭಿಮಾನದಿಂದ ಯುವಕರ ತಂಡ ಸಿನಿಮಾ ಮಾಡಿದ್ದಾರೆ. ಅವರಿಗೆ ನಾವೆಲ್ಲರೂ ಬೆಂಬಲ ನೀಡಬೇಕಿದೆ ಎಂದು ಕರೆ ನೀಡಿದರು. ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾತಾಡಿ, ಮಿಡ್ಲ್ ಕ್ಲಾಸ್ ಫ್ಯಾಮಿಲಿ ಸಿನಿಮಾವನ್ನು ಕೇವಲ ಮಿಡ್ಲ್ ಕ್ಲಾಸ್ ಪ್ರೇಕ್ಷಕರು ನೋಡಿದರೆ ಸಾಲದು. ಬಡ, ಮಧ್ಯಮ, ಶ್ರೀಮಂತ ಹೀಗೇ ಎಲ್ಲ ವರ್ಗದ ಪ್ರೇಕ್ಷಕರು ಈ ಸಿನಿಮಾ ನೋಡಿ ಗೆಲ್ಲಿಸಬೇಕು ಎಂದು ಶುಭಹಾರೈಸಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉದ್ಯಮಿ ಪ್ರಸಾದ್ ರಾಜ್, ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಸಮಾಜಮುಖಿ ಸೇವೆಯಲ್ಲಿ ಸಾಧನೆ ಮಾಡಿರುವ ರವಿ ಕಟಪಾಡಿ, ಹುಲಿ ವೇಷ ಧರಿಸುವ ಸುಷ್ಮಾ ರಾಜ್, ಯೂಟ್ಯೂಬರ್ ಶಟರ್ ಬಾಕ್ಸ್ ಫಿಲ್ಮ್ಸ್‌ನ ಸಚಿನ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ವೇದಿಕೆಯಲ್ಲಿ ನಗರಸಭಾ ಸದಸ್ಯರಾದ ವಿಜಯ್ ಕೊಡವೂರು ಮತ್ತು ರಮೇಶ್ ಕಾಂಚನ್, ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ಉದ್ಯಮಿ ಹರಿಪ್ರಸಾದ್ ರೈ, ನಿರ್ಮಾಪಕ ಆನಂದ್ ಕುಂಪಲ, ಸಹನಿರ್ಮಾಪಕರಾದ ಗಣೇಶ್ ಕೊಲ್ಯ, ನಟಿ ಸಮತಾ ಅಮೀನ್, ನಟರಾದ ವಿನೀತ್ ಕುಮಾರ್, ಭೊಜರಾಜ ವಾಮಂಜೂರು, ನಿರ್ದೇಶಕ ರಾಹುಲ್ ಅಮೀನ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್, ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ಉಡುಪಿ ವಲಯಾಧ್ಯಕ್ಷ ಸುಧೀರ್ ಎಂ.ಶೆಟ್ಟಿ, ಮಂಗಳೂರು ವಲಯಾಧ್ಯಕ್ಷ ಹರೀಶ್ ಅಡ್ಯಾರ್, ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ವಾಸುದೇವ ರಾವ್ ಮತ್ತು ಶ್ರೀಧರ್ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.