ಭೀಮಾ ತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು; ರೌಡಿಶೀಟರ್‌ ಬಲಿ

| Published : Jun 17 2024, 01:37 AM IST / Updated: Jun 17 2024, 11:50 AM IST

Dead Body Of Husband Wife
ಭೀಮಾ ತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು; ರೌಡಿಶೀಟರ್‌ ಬಲಿ
Share this Article
  • FB
  • TW
  • Linkdin
  • Email

ಸಾರಾಂಶ

ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದ್ದು, ರೌಡಿಶೀಟರ್ ಅಶೋಕ ಮಲ್ಲಪ್ಪ ಗಂಟಗಲ್ಲಿ ಎಂಬಾತನ ಮೇಲೆ ಅಪರಿಚಿತರಿಂದ ಪಟ್ಟಣದ ನೀವರಗಿ ರಸ್ತೆ ಬಳಿ ಭಾನುವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದೆ. ಈ ಘಟನೆಯಲ್ಲಿ ಅಶೋಕ ಗಂಟಗಲ್ಲಿ ಸ್ಥಳದಲ್ಲೇ ಸಾವನಪ್ಪಿದ್ದಾನೆ.

ಚಡಚಣ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದ್ದು, ರೌಡಿಶೀಟರ್‌ ಅಶೋಕ ಮಲ್ಲಪ್ಪ ಗಂಟಗಲ್ಲಿ(49) ಎಂಬಾತನ ಮೇಲೆ ಅಪರಿಚಿತರಿಂದ ಪಟ್ಟಣದ ನೀವರಗಿ ರಸ್ತೆ ಬಳಿ ಭಾನುವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದೆ. ಈ ಘಟನೆಯಲ್ಲಿ ಅಶೋಕ ಗಂಟಗಲ್ಲಿ ಸ್ಥಳದಲ್ಲೇ ಸಾವನಪ್ಪಿದ್ದಾನೆ.

ಇತ್ತೀಚೆಗಷ್ಟೇ ಪೆರೋಲ್ ಮೇಲೆ ಬಂದಿದ್ದ ಅಶೋಕ ಮಲ್ಲಪ್ಪ ಗಂಟಗಲ್ಲಿ ಎಂಬಾತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹಳೇ ದ್ವೇಷವೇ ಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ. ಅಶೋಕ ತನ್ನ ಮನೆಯಿಂದ ಪಟ್ಟಣಕ್ಕೆ ಬರುತ್ತಿದ್ದ ವೇಳೆ ಆತನ ಹಿಂದಿನಿಂದ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆತನ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡುಗಳು ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಕೊಲೆ ಹಾಗೂ ಇತರೆ ಅಪರಾಧ ಪ್ರಕರಣಗಳಲ್ಲಿ ವಿಜಯಪುರದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಅಶೋಕ ಪೆರೋಲ್ ಮೇಲೆ ಹೊರಗೆ ಬಂದಿದ್ದ ಎಂದು ತಿಳಿದು ಬಂದಿದೆ. ಅಶೋಕ ಮೇಲಿನ ಹಳೇ ದ್ವೇಷದಿಂದ ಹಂತಕರು ಕೊಲೆ ಮಾಡಿದ್ದಾರೆ ಎಂಬ ಸಂಶಯ ವ್ಯಕ್ತವಾಗುತ್ತಿದೆ. ಕೊಲೆಗೀಡಾದ ಅಶೋಕನ ಪತ್ನಿ ಚಡಚಣ ಪಟ್ಟಣದ ವಾರ್ಡ್ ನಂಬರ್‌ 2ರ ಸದಸ್ಯೆಯಾಗಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹತ್ಯೆಗೀಡಾದ ಸ್ಥಳಕ್ಕೆ ಐಜಿ ವಿಕಾಸಕುಮಾರ ವಿಕಾಸ ಅವರು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಡಿಎಸ್ಪಿ ಜಗದೀಶ, ಸಿಪಿಐ ಸುರೇಶ ಬೆಂಡಗುಂಬಳ, ಪಿಎಸ್‌ಐ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.ಈ ಕುರಿತು ಚಡಚಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.