ಉಪ್ಪಾರ ಜನಾಂಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ

| Published : Jun 24 2024, 01:36 AM IST

ಉಪ್ಪಾರ ಜನಾಂಗದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ
Share this Article
  • FB
  • TW
  • Linkdin
  • Email

ಸಾರಾಂಶ

ಕಡೂರು, ರಾಜ್ಯ ಸರ್ಕಾರ ಉಪ್ಪಾರ ಜನಾಂಗದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಉಪ್ಪಾರ ಜನಾಂಗಕ್ಕೆ ನ್ಯಾಯಯುತವಾಗಿ ಸಿಗಬೇಕಾಗಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಮೀಸಲಾತಿ ಹೋರಾಟಕ್ಕೆ ನನ್ನ ಸಹಮತವೂ ಇದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.

ಕಡೂರಿನಲ್ಲಿ ಚಿಕ್ಕಮಗಳೂರು ಜಿಲ್ಲಾ , ತಾಲೂಕು ಉಪ್ಪಾರ ಸಂಘದಿಂದ ಪ್ರತಿಭಾ ಪುರಸ್ಕಾರದಲ್ಲಿ ಆನಂದ್‌ಕನ್ನಡಪ್ರಭ ವಾರ್ತೆ, ಕಡೂರುರಾಜ್ಯ ಸರ್ಕಾರ ಉಪ್ಪಾರ ಜನಾಂಗದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಉಪ್ಪಾರ ಜನಾಂಗಕ್ಕೆ ನ್ಯಾಯಯುತವಾಗಿ ಸಿಗಬೇಕಾಗಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಮೀಸಲಾತಿ ಹೋರಾಟಕ್ಕೆ ನನ್ನ ಸಹಮತವೂ ಇದೆ ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.ಕಡೂರು ಪಟ್ಚಣದ ಪಿಕಾರ್ಡ್ ಬ್ಯಾಂಕ್ ಸಭಾಂಗಣದಲ್ಲಿ ಚಿಕ್ಕಮಗಳೂರು ಜಿಲ್ಲಾ ಮತ್ತು ತಾಲೂಕು ಉಪ್ಪಾರ ಸಂಘಗಳಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಸಕ್ತ ಬದಲಾಗು ತ್ತಿರುವ ವೇಗದ ಜಗತ್ತಲ್ಲಿ ಸಾಮಾಜಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳೂ ಪೈಪೋಟಿ ನೀಡುತ್ತ ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವುದು ಅಭಿನಂದನಾರ್ಹ ಸಂಗತಿ. ತಮ್ಮ ಮಕ್ಕಳು ಬುದ್ದಿವಂತರಾಗಲು ಪೋಷಕರು ಇಂದು ಜಮೀನು ಮಾರಿ ಓದಿಸುತ್ತಿರುವುದನ್ನು ನೋಡುತ್ತಿದ್ದೇವೆ. ಉಪ್ಪಾರ ಸಮಾಜದ ಅಭಿವೃದ್ಧಿಗೆ ಸಂಘಟನೆ ಮತ್ತು ಶಿಕ್ಷಣ ಬಹುಮುಖ್ಯ. ವೈಯುಕ್ತಿಕ ಹಿತಾಸಕ್ತಿ ಬಿಟ್ಟು ಪರಸ್ಪರ ಸಹಕಾರದೊಂದಿಗೆ ಸಂಘಟಿತರಾಗಿ ಸಮಾಜದ ಹಿತಾಸಕ್ತಿ ಕಾಪಾಡುವಲ್ಲಿ ಎಲ್ಲರೂ ಶ್ರಮಿಸಬೇಕು. ಮಕ್ಕಳಿಗೆ ಉನ್ನತ ಶಿಕ್ಷಣ ದೊರೆಯಬೇಕು. ಆಗ ಸಮಾಜದ ಅಭಿವೃದ್ಧಿಗೆ ಪೂರಕ ಬೆಂಬಲ ದೊರೆಯುತ್ತದೆ ಎಂದರು.ತಮ್ಮ ರಾಜಕೀಯ ಬೆಳ‍ಣಿಗೆಗೆ ಸಹಕಾರ ನೀಡಿರುವ ಉಪ್ಪಾರ ಜನಾಂಗದ ಬಗ್ಗೆ ತಮಗೆ ಅಪಾರ ಪ್ರೀತಿ ಮತ್ತು ಗೌರವವಿದೆ. ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಉಪ್ಪಾರ ಸಮುದಾಯ ಭವನಕ್ಕೆ ಸರಕಾರದಿಂದ 25 ಲಕ್ಷ ರು. ನೀಡುತ್ತಿದ್ದೇನೆ. ನಾನು ಕೂಡ ವೈಯಕ್ತಿಕವಾಗಿ 25 ಲಕ್ಷ ರು.ಗಳನ್ನು ನೀಡುತ್ತೇನೆ. ಅಲ್ಲದೆ ಸಮಾಜದ ಮುಖಂಡರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿಸಿ ಹೆಚ್ಚಿನ ಅನುದಾನ ಕೊಡಿಸಲು ನನ್ನ ಇತಿಮಿತಿಯಲ್ಲಿ ಸಂಪೂರ್ಣ ಸಹಕಾರ ನೀಡುತ್ತೇನೆ. ಕಾಂಗ್ರೆಸ್ ಸರ್ಕಾರ ಉಪ್ಪಾರ ಜನಾಂಗದ ಅಭಿವೃದ್ಧಿಗೆ ಸಹಕಾರ ನೀಡುತ್ತಿದೆ. ಉಪ್ಪಾರ ಜನಾಂಗದ ಮೀಸಲಾತಿ ಹೋರಾಟಕ್ಕೆ ನನ್ನ ಸಹಮತವೂ ಇದೆ ಎಂದರು.ಹೊಸದುರ್ಗದ ಭಗೀರಥ ಪೀಠದ ಡಾ.ಪುರುಷೋತ್ತಮಾನಂದ ಪುರಿ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಭವಿಷ್ಯ ರೂಪಿಸಿಕೊಳ್ಳುವ ಕುರಿತು ಹಾಗು ಸಮಾಜದ ಮುಖಂಡರಿಗೆ ಮುಂದಿನ ಹೋರಾಟದ ಕುರಿತು ಸಂದೇಶ ನೀಡಿದರು.ಈ ಸಂದರ್ಭದಲ್ಲಿ ಸಮಾಜದ ಹೆಚ್ಚು ಅಂಕ ಗಳಿಸಿದ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.ತರೀಕೆರೆ ಶಾಸಕ ಜಿ.ಎಚ್.ಶ್ರೀನಿವಾಸ್‌, ಉಪ್ಪಾರ ಸಮಾಜದ ಜಿಲ್ಲಾ ಧ್ಯಕ್ಷ ಮಲ್ನಾಡ್ ನಾಗರಾಜ್, ಟಿ.ಆರ್.ಲಕ್ಕಪ್ಪ ಮಾತನಾಡಿದರು. ಉಪ್ಪಾರ ನೌಕರರ ಸಂಘದ ಜಿಲ್ಲಾಧ್ಯಕ್ಷ ವೈ.ಎಂ.ತಿಪ್ಪೇಶ್, ತಾಲೂಕು ಉಪ್ಪಾರ ನೌಕರರ ಸಂಘದ ಅಧ್ಯಕ್ಷ ಸತೀಶ್, ಉಪ್ಪಾರ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಲೋಕೇಶ್ ಬಾಬು, ಪ್ರಧಾನ ಕಾರ್ಯದರ್ಶಿ ಸಪ್ತಕೋಟಿ ಧನಂಜಯ, ಜಿ.ಎಂ.ಲಕ್ಷ್ಮಣ, ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಪಂಕಜ, ಎಂ.ಕೆ.ಸತೀಶ್, ಪಿ.ಎಲ್.ಡಿ. ಬ್ಯಾಂಕ್ ಮಾಜಿ ಅಧ್ಯಕ್ಷ ವಿರೂಪಾಕ್ಷಪ್ಪ, ನಿಂಗಪ್ಪ ಮತ್ತು ಸಮಾಜದ ಮುಖಂಡರು ಇದ್ದರು.-- ಬಾಕ್ಸ್ ಸುದ್ದಿ ---ಮೀಸಲಾತಿ ಹೋರಾಟ ಸರಿಯೇಹಿಂದುಳಿದ ಕೆಲ ಜನಾಂಗಗಳು ಮೇಲ್ವರ್ಗಗಳಿಗೆ ಸಮನಾದ ಮಾನ್ಯತೆ ಪಡೆಯುತ್ತಿರುವಾಗ ಎಸ್ಸಿ,ಎಸ್ಟಿ ಮೀಸಲಾತಿ ಹೋರಾಟ ಮಾಡುವುದು ಸರಿಯೇ ಎಂಬ ಪ್ರಶ್ನೆ ಕಾಡುತ್ತಿದೆ. ಎಲ್ಲೋ ಒಂದೆಡೆ ನಾವು ಸಾಮಾಜಿಕವಾಗಿ ನಮ್ಮನ್ನು ನಾವೇ ಹಿಂದುಳಿಸಿಕೊಳ್ಳುತ್ತಿದ್ದೇವೆಯೇ ಎಂಬ ಚಿಂತನೆ ನನ್ನಲ್ಲಿ ಮೂಡಿದೆ. ಮತ್ತಷ್ಟು ಜನಾಂಗಗಳಿಗೆ ಎಸ್ಸಿ,ಎಸ್ಟಿ ಮಾನ್ಯತೆ ದೊರೆ ತರೆ ಈಗ ಅವರಿಗೆ ದೊರೆಯುತ್ತಿರುವ ಮೀಸಲಾತಿ ಪ್ರಮಾಣ ಕಡಿಮೆಯಾಗಿ ಮತ್ತಷ್ಟು ಅಸಮಾಧಾನಕ್ಕೆ ಕಾರಣ ವಾಗುತ್ತದೆಯೇ ಎಂಬ ಪ್ರಶ್ನೆಯೂ ಕಾಡುತ್ತಿದೆ. ಹಾಗೆಂದು ನಾನು ಮೀಸಲಾತಿ ವಿರೋಧಿಯಲ್ಲ ಎಂದು ಕೆ.ಎಸ್.ಆನಂದ್ ಹೇಳಿದರು.

.23ಕೆಕೆಡಿಯು1.

ಕಡೂರು ಪಟ್ಚಣದ ಪಿಕಾರ್ಡ್ ಬ್ಯಾಂಕ್ ಸಭಾಂಗಣದಲ್ಲಿ ಚಿಕ್ಕಮಗಳೂರು ಜಿಲ್ಲಾ ಮತ್ತು ತಾಲ್ಲೂಕು ಉಪ್ಪಾರ ಸಂಘಗಳಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಕೆ.ಎಸ್.ಆನಂದ್ ಉದ್ಘಾಟಿಸಿದರು.

ಟೋ.23ಕೆೆಕೆಡಿಯು1.

ಕಡೂರು ಪಟ್ಚಣದ ಪಿಕಾರ್ಡ್ ಬ್ಯಾಂಕ್ ಸಭಾಂಗಣದಲ್ಲಿ ಚಿಕ್ಕಮಗಳೂರು ಜಿಲ್ಲಾ ಮತ್ತು ತಾಲೂಕು ಉಪ್ಪಾರ ಸಂಘಗಳಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಗಳನ್ನು ಪುರಸ್ಕರಿಸಲಾಯಿತು. ಶಾಸಕರಾದ ಕೆ ಎಸ್ ಆನಂದ್, ಜೆ.ಎಚ್ . ಶ್ರೀನಿವಾಸ್‌ ಮತ್ತಿತರರು ಇದ್ದರು.