ಕಾಂತರಾಜ್ ವರದಿ ಜಾರಿಗೆ ರಾಜ್ಯ ಸರ್ಕಾರ ಮೀನಮೇಷ

| Published : Dec 08 2023, 01:45 AM IST

ಸಾರಾಂಶ

ಸಂವಿಧಾನ ಬದ್ಧ ಹಕ್ಕುಗಳನ್ನು ಸರ್ಕಾರ ಕೂಡಲೆ ಪರಿಗಣಿಸಿ ಆದತೆ ಮೇರೆಗೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ವಿಧಾನಸೌಧದಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಹೊರಟಿರುವ ಜಾಥಾ ಗುರುವಾರ ಚಿತ್ರದುರ್ಗಕ್ಕೆ ಆಗಮಿಸಿತು.ಒನಕೆ ಓಬವ್ವ ವೃತ್ತದಲ್ಲಿ ಜಾಥಾವನ್ನು ಸ್ವಾಗತಿಸಿ ಮಾತನಾಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಕಾಂತರಾಜ್ ಆಯೋಗದ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಅನೇಕ ವರ್ಷಗಳೇ ಕಳೆದಿದ್ದರೂ ಇನ್ನು ಜಾರಿಗೆ ತರುವಲ್ಲಿ ಆಳುವ ಸರ್ಕಾರಗಳು ಮೀನಮೇಷ ಎಣಿಸುತ್ತಿವೆ. ಹಾಗಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಕೂಡಲೇ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪ । ಸುವರ್ಣ ಸೌಧ ಜಾಥಾಗೆ ಚಿತ್ರದುರ್ಗದಲ್ಲಿ ಸ್ವಾಗತಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಸಂವಿಧಾನ ಬದ್ಧ ಹಕ್ಕುಗಳನ್ನು ಸರ್ಕಾರ ಕೂಡಲೆ ಪರಿಗಣಿಸಿ ಆದತೆ ಮೇರೆಗೆ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ವಿಧಾನಸೌಧದಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಹೊರಟಿರುವ ಜಾಥಾ ಗುರುವಾರ ಚಿತ್ರದುರ್ಗಕ್ಕೆ ಆಗಮಿಸಿತು.

ಒನಕೆ ಓಬವ್ವ ವೃತ್ತದಲ್ಲಿ ಜಾಥಾವನ್ನು ಸ್ವಾಗತಿಸಿ ಮಾತನಾಡಿದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಕಾಂತರಾಜ್ ಆಯೋಗದ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಅನೇಕ ವರ್ಷಗಳೇ ಕಳೆದಿದ್ದರೂ ಇನ್ನು ಜಾರಿಗೆ ತರುವಲ್ಲಿ ಆಳುವ ಸರ್ಕಾರಗಳು ಮೀನಮೇಷ ಎಣಿಸುತ್ತಿವೆ. ಹಾಗಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಕೂಡಲೇ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.

ಪರಿಶಿಷ್ಟರ ಒಳಮೀಸಲಾತಿ ಹಂಚಿಕೆಯಲ್ಲಿ ಅಸ್ಪೃಶ್ಯರು ಎನ್ನುವ ಕಾರಣಕ್ಕಾಗಿ ಸಮುದಾಯಕ್ಕೆ ಅನ್ಯಾಯವಾಗುತ್ತಲೆ ಬರುತ್ತಿದೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ 30 ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ಬದ್ಧತೆ ಪ್ರದರ್ಶನವಾಗಿಲ್ಲ. ರಾಜಕೀಯ ಕಾರಣಗಳ ಮುಂದಿಟ್ಟುಕೊಂಡು ಒಳ ಮೀಸಲಾತಿ ಪ್ರಸ್ತಾವ ಮುಂದೂಡಲಾಗುತ್ತಿದೆ. ಶೀಘ್ರವೇ ವರದಿ ಯನ್ನು ರಾಜ್ಯ ಸರ್ಕಾರ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿದರು. ರಾಜ್ಯದಲ್ಲಿ ಮುಸಲ್ಮಾನರಿಗಿದ್ದ 2 ಬಿಯಡಿ ನಾಲ್ಕು ಪರ್ಸೆಂಟೇಜ್‌ ಮೀಸಲಾತಿಯನ್ನು ಹಿಂದಿನ ಬಸವರಾಜ್ ಬೊಮ್ಮಾಯಿ ಸರ್ಕಾರ ರದ್ದುಪಡಿಸಿತ್ತು. ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರ 2 ಬಿ ಮೀಸಲಾತಿಯನ್ನು ಪುನರ್ ಘೋಷಿಸಿ ಶೇ.ನಾಲ್ಕರಿಂದ ಎಂಟು ಪರ್ಸೆಂಟ್‍ಗೆ ಹೆಚ್ಚಿಸುವಂತೆ ಮನವಿ ಮಾಡಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್ ಮಾತನಾಡಿ, ದಲಿತರು, ಮುಸಲ್ಮಾನರು, ಹಿಂದುಳಿದಿರುವ ಮತಗಳನ್ನು ಪಡೆದು ಗೆದ್ದಿರುವ ಚಿತ್ರದುರ್ಗ ಶಾಸಕ ಬೆಳಗಾವಿಯ ಸುರ್ವಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಣುತ್ತಿಲ್ಲ. ನಿಜವಾಗಿಯೂ ಮತದಾರರ ಋಣ ನಿಮ್ಮ ಮೇಲಿದ್ದರೆ ದಲಿತರು, ಮುಸಲ್ಮಾನರ ಪರ ಧ್ವನಿ ಎತ್ತಬೇಕು. ಎಲ್ಲಿಯವರೆಗೂ ಸುಳ್ಳು ಇರುತ್ತದೋ ಅಲ್ಲಿಯ ತನಕ ಎಸ್‌ಡಿಪಿಐ ಜೀವಂತವಾಗಿದ್ದು ಹೋರಾಟ ನಡೆಸುತ್ತದೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಮ್ಮ ಶಕ್ತಿಯನ್ನು ತೋರಿಸುತ್ತದೆ ಎಂದು ಹೇಳಿದರು.

ಎಸ್‌ಡಿಪಿಐ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೂಡ್ಲಿಪೇಟೆ, ಭೀಮಯಾತ್ರೆ ಬಳಗದ ಮುಖಂಡ ಭಾಸ್ಕರ್ ಪ್ರಸಾದ್, ಕುಂಚಿಗನಹಾಳ್ ಮಹಾಲಿಂಗಪ್ಪ, ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್, ಉಪಾಧ್ಯಕ್ಷ ಕಮ್ರಾನ್‍ ಆಲಿ ಸೇರಿದಂತೆ ಪದಾಧಿಕಾರಿಗಳು ಜಾಥಾದಲ್ಲಿದ್ದರು.