ಒಳ ಮೀಸಲು ಜಾರಿ ಮಾಡುವಲ್ಲಿ ರಾಜ್ಯ ಸರ್ಕಾರ ಉದಾಸೀನ

| Published : Mar 02 2025, 01:17 AM IST

ಸಾರಾಂಶ

ಕರ್ನಾಟಕ ರಾಜ್ಯ ಮಾದಿಗರ ಸಾಂಸ್ಕೃತಿಕ ಸಂಘದ ರಾಜ್ಯಾಧ್ಯಕ್ಷ ಕಪ್ರೊ.ಸಿ.ಕೆ.ಮಹೇಶ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯ ಮಾದಿಗರ ಸಾಂಸ್ಕೃತಿಕ ಸಂಗದ ರಾಜ್ಯಾಧ್ಯಕ್ಷ ಪ್ರೊ.ಸಿ.ಕೆ.ಮಹೇಶ್ ಆರೋಪಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಒಳ ಮೀಸಲು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ಉದಾಸೀನ ತೋರುತ್ತಿದೆ ಎಂದು ಕರ್ನಾಟಕ ರಾಜ್ಯ ಮಾದಿಗರ ಸಾಂಸ್ಕೃತಿಕ ಸಂಘದ ರಾಜ್ಯಾಧ್ಯಕ್ಷ ಪ್ರೊ.ಸಿ.ಕೆ.ಮಹೇಶ್ ಆಪಾದಿಸಿದರು.

ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗಮೋಹನ್‍ದಾಸ್ ವರದಿಯ ಗಡುವು ಮುಗಿದಿರುವುದರಿಂದ ರಾಜ್ಯ ಸರ್ಕಾರ ಇಷ್ಟೊತ್ತಿಗಾಗಲೇ ಒಳ ಮೀಸಲಾತಿಯನ್ನು ಜಾರಿಗೊಳಿಸಬೇಕಿತ್ತು. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಎಸ್‌ಸಿಪಿ, ಟಿಎಸ್‌ಪಿ ಹಣ ದುರುಪಯೋಗವಾಗುತ್ತಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಶಾಸಕರು ಧ್ವನಿ ಎತ್ತದೆ ಸುಮ್ಮನಿರುವುದು ನೋವಿನ ಸಂಗತಿ. ಬ್ಯಾಕ್‍ಲಾಗ್ ಸಮಿತಿಯಲ್ಲಿ ಕೆ.ಎಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಎಚ್.ಕೆ.ಪಾಟೀಲ್ ಇದ್ದರು ಪ್ರಯೋಜನವಿಲ್ಲದಂತಾಗಿದೆ ಎಂದು ದೂರಿದರು.

ಸಂಘದ ಮಹಾ ಪ್ರಧಾನ ಕಾರ್ಯದರ್ಶಿ ಹಿರೇಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿ, ಒಳ ಮೀಸಲಾತಿ ಜಾರಿಯಾಗುವತನಕ ಯಾವುದೇ ಹುದ್ದೆಗಳನ್ನು ಭರ್ತಿ ಮಾಡಬಾರದೆಂಬುದು ನಮ್ಮ ಬೇಡಿಕೆ. ಆದರೆ ಸಿಎಂ ಸಿದ್ದರಾಮಯ್ಯ ನೇಮಕಾತಿ ಮಾಡುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.

ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸರ್ಕಾರಗಳು ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಬಳಸಬೇಕಾಗಿದ್ದ 70 ಸಾವಿರ ಕೋಟಿ ರು. ಬೇರೆ ಬೇರೆ ಇಲಾಖೆಗಳಿಗೆ ಬಳಸಿ ಎಸ್‌ಸಿ, ಎಸ್‌ಟಿ ಗಳಿಗೆ ದ್ರೋಹವೆಸಗುತ್ತಿದೆ ಎಂದರು.

ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಕೆ.ಕುಮಾರ್, ಗೌರವಾಧ್ಯಕ್ಷ ಡಿ.ದುರುಗೇಶಪ್ಪ, ಪ್ರಧಾನ ಕಾರ್ಯದರ್ಶಿ ಸಿ.ಎ.ಚಿಕ್ಕಣ್ಣ, ಸುಧಾಕರ್ ಉಪಸ್ಥಿತರಿದ್ದರು.