ರಾಜ್ಯ ಸರ್ಕಾರ ಗ್ಯಾರಂಟಿಗೂ ಸೈ, ಅಭಿವೃದ್ಧಿಗೂ ಬದ್ಧ: ಶಾಸಕ ಬಣಕಾರ

| Published : Jan 21 2025, 12:33 AM IST

ರಾಜ್ಯ ಸರ್ಕಾರ ಗ್ಯಾರಂಟಿಗೂ ಸೈ, ಅಭಿವೃದ್ಧಿಗೂ ಬದ್ಧ: ಶಾಸಕ ಬಣಕಾರ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರ ಬಡಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರೂ ಅಭಿವೃದ್ಧಿಗೂ ಬದ್ಧವಾಗಿದೆ ಎಂದು ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಹೇಳಿದರು.

ರಾಣಿಬೆನ್ನೂರು: ರಾಜ್ಯ ಸರ್ಕಾರ ಬಡಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರೂ ಅಭಿವೃದ್ಧಿಗೂ ಬದ್ಧವಾಗಿದೆ ಎಂದು ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಹೇಳಿದರು. ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ಸೋಮವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಲಜೀವನ ಮಿಷನ್ ಯೋಜನೆಯಡಿ 100 ಕೋಟಿ ರು.ಗಳ ವೆಚ್ಚದಲ್ಲಿ ಜಿಲ್ಲೆಯ ರಾಣಿಬೆನ್ನೂರು ಮತ್ತು ರಟ್ಟೀಹಳ್ಳಿ ತಾಲೂಕುಗಳ ಭೈರನಪಾದ ಮತ್ತು ಇತರೆ 55 ಗ್ರಾಮಗಳಿಗೆ ಬಹುಗ್ರಾಮ ನೀರು ಸರಬರಾಜು ಪುನಶ್ಚೇತನ ಯೋಜನೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಅಭಿವೃದ್ಧಿ ಯೋಜನೆಗಳಿಗಾಗಿ 55 ಸಾವಿರ ಕೋಟಿ ರು. ಮೀಸಲಾಗಿಟ್ಟಿದ್ದಾರೆ. ರಾಜ್ಯದ ಗ್ಯಾರಂಟಿ ಯೋಜನೆ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದೆ. ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಯನ್ನು ಎಲ್ಲ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದರು. ಸ್ಥಳೀಯ ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ಗ್ಯಾರಂಟಿಯಿಂದ ರಾಜ್ಯದಲ್ಲಿ ಅಭಿವೃದ್ಧಿಯಾಗುತ್ತಿಲ್ಲ ಎಂಬ ಬಿಜೆಪಿ ಹೇಳಿಕೆ ಸುಳ್ಳಾಗಿದ್ದು ಇದಕ್ಕೆ ಇಂದಿನ ಕಾಮಗಾರಿ ಸಾಕ್ಷಿಯಾಗಿದೆ. ಗ್ಯಾರಂಟಿಯಿಂದ ಅರ್ಹ ಫಲಾನುಭವಿಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಶ್ರೀಮಂತರ ಮೇಲೆ ಅಧಿಕ ತೆರಿಗೆ ವಿಧಿಸಿ ಬಂದ ಹಣದಲ್ಲಿ ಬಡ ಜನರ ಜೀವನ ಮಟ್ಟ ಸುಧಾರಣೆಗೆ ಕಾಂಗ್ರೆಸ್ ಪಕ್ಷ ಕಟಿಬದ್ಧವಾಗಿದೆ ಎಂದರು. ಮಾಳನಾಯಕನಹಳ್ಳಿ ಗ್ರಾಪಂ ಅಧ್ಯಕ್ಷ ರಮೇಶ ಹಿರೇಬಿದರಿ, ಮಂಜಣ್ಣ, ಬಸನಗೌಡ್ರ, ಕವಿತಾ ಅಡಿವೇರ, ಗಂಗನಗೌಡ ಪಾಟೀಲ, ಭಾಗ್ಯಮ್ಮ ಮೂಡಬಾಗಿಲ, ತಿರುಪತಿ ಅಜ್ಜನವರ, ಹನುಮಂತಪ್ಪ ಬ್ಯಾಲದಹಳ್ಳಿ, ಯಲ್ಲಪ್ಪರೆಡ್ಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಧಾರವಾಡ ವೃತ್ತದ ಅಧೀಕ್ಷಕ ಇಂಜನೀಯರ್ ಆರ್.ಎಂ. ಸೊಪ್ಪಿಮಠ, ಹಾವೇರಿ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಮಹೇಶಪ್ಪ ಎನ್., ರಾಣಿಬೆನ್ನೂರು ಉಪ ವಿಭಾಗದ ಸಕಾನಿ ಎಂಜಿನಿಯರ್ ಎ. ಜಯರಾಮಪ್ಪ, ಸಹಾಯಕ ಎಂಜಿನಿಯರ್ ರಾಮಕೃಷ್ಣ ಹಾಗೂ ಗುತ್ತಿಗೆದಾರ ಹುಬ್ಬಳ್ಳಿಯ ಸಿವಿಕೆ ಕನ್‌ಸ್ಟ್ರಕ್ಷನ್ ಕಂಪನಿ ಸಿಬ್ಬಂದಿ ಮತ್ತಿತರರಿದ್ದರು.