ಶಿಕ್ಷಕರ- ಪದವೀಧರರ ಸಮಸ್ಯೆಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದೆ: ಎಚ್‌.ಡಿ. ತಮ್ಮಯ್ಯ

| Published : May 30 2024, 12:50 AM IST

ಶಿಕ್ಷಕರ- ಪದವೀಧರರ ಸಮಸ್ಯೆಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದೆ: ಎಚ್‌.ಡಿ. ತಮ್ಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಪದವೀಧರರು ಮತ್ತು ಶಿಕ್ಷಕರ ಧ್ವನಿಯಾಗಿ ಕರ್ತವ್ಯ ನಿರ್ವಹಿಸಲು ಆಯನೂರು ಮಂಜುನಾಥ್ ಮತ್ತು ಕೆ.ಕೆ.ಮಂಜುನಾಥ್‌ ಕುಮಾರ್ ಸನ್ನದ್ಧರಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಮನವಿ ಮಾಡಿದರು.

ಚಿಕ್ಕಮಗಳೂರಿನ ಬೈಪಾಸ್‌ನ ಎಂಇಎಸ್ ಬಿಎಡ್ ಕಾಲೇಜು । ಪ ಎಂಇಎಸ್ ವಿದ್ಯಾಸಂಸ್ಥೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಪದವೀಧರರು ಮತ್ತು ಶಿಕ್ಷಕರ ಧ್ವನಿಯಾಗಿ ಕರ್ತವ್ಯ ನಿರ್ವಹಿಸಲು ಆಯನೂರು ಮಂಜುನಾಥ್ ಮತ್ತು ಕೆ.ಕೆ.ಮಂಜುನಾಥ್‌ ಕುಮಾರ್ ಸನ್ನದ್ಧರಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಮನವಿ ಮಾಡಿದರು.ನಗರದ ಬೈಪಾಸ್ ಸಮೀಪ ಎಂಇಎಸ್ ಬಿಎಡ್ ಕಾಲೇಜು, ಐಡಿಎಸ್‌ಜಿ, ಪಾಲಿಟೆಕ್ನಿಕ್ ಹಾಗೂ ಕೆ.ಎಂ.ರಸ್ತೆಯ ಸಮೀಪ ಎಂಇಎಸ್ ವಿದ್ಯಾಸಂಸ್ಥೆಯಲ್ಲಿ ಬುಧವಾರ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚಿಸಿದರು.ನಿರುದ್ಯೋಗ ಸಮಸ್ಯೆಯಲ್ಲಿರುವ ಯುವಕರಿಗೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯಡಿ ಯುವನಿಧಿ ನೀಡಿ ಪ್ರೋತ್ಸಾಹಿ ಸುತ್ತಿದೆ. ಅದರಂತೆ ಶಿಕ್ಷಕರು ಹಾಗೂ ಪದವೀಧರರಿಗೆ ಮೂಲ ಸವಲತ್ತು ಒದಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂದರು.ಪದವೀಧರರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ನಾಲ್ಕು ಸದನಗಳಲ್ಲಿ ಕೆಲಸ ನಿರ್ವಹಿಸಿರುವ ಅಪಾರ ಅನುಭವವಿದೆ. ಅಲ್ಲದೇ ತಳಮಟ್ಟದಿಂದ ಪದವೀಧರರ ಸಮಸ್ಯೆಗಳ ಬಗ್ಗೆ ಅರಿವಿರುವ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಪ್ರತಿಯೊಂದು ಸೌಲಭ್ಯಗಳನ್ನು ನ್ಯಾಯ ಸಮ್ಮತವಾಗಿ ಒದಗಿಸಲಿದ್ದಾರೆ ಎಂದು ಭರವಸೆ ನೀಡಿದರು.ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕೂಡಾ ಅನೇಕ ವರ್ಷಗಳಿಂದ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. ಶಿಕ್ಷಕರ ಸೌಲಭ್ಯ ಒದಗಿಸುವ ಮತ್ತು ವೃತ್ತಿಯಲ್ಲಿನ ಸಮಸ್ಯೆಗಳ ಬಗ್ಗೆ ಅರಿವಿದೆ. ಹೀಗಾಗಿ ಮತದಾರರು ಇವರನ್ನು ಆಯ್ಕೆ ಗೊಳಿಸಿದರೆ ಬಹುತೇಕ ಶಿಕ್ಷಕರ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಡಿ.ಎಲ್.ವಿಜಯ್‌ಕುಮಾರ್ ಮಾತನಾಡಿ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿ ಯೊಬ್ಬರು ಮತ ಕೇಳುವ ಹಕ್ಕಿದೆ. ಏಳನೇ ವೇತನ, ಹಳೇ ಪಿಂಚಣಿ ವ್ಯವಸ್ಥೆಗೆ ಪ್ರಸ್ತುತ ರಾಜ್ಯ ಸರ್ಕಾರ ಪೂರಕವಾಗಿ ಸ್ಪಂದಿಸುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕರು, ಪದವೀಧರರು ಮುಕ್ತವಾಗಿ ಮತಯಾಚಿಸಬಹುದು ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎಲ್.ಮೂರ್ತಿ ಮಾತನಾಡಿ, ವಿಧಾನಪರಿಷತ್ ಸ್ಥಾನಗಳಿಗೆ ಅರ್ಹರನ್ನು ಆಯ್ಕೆಮಾಡುವ ಜವಾಬ್ದಾರಿ ಶಿಕ್ಷಕರು, ಪದವೀಧರರ ಮೇಲಿದೆ. ಆ ನಿಟ್ಟಿನಲ್ಲಿ ಗಂಭೀರವಾಗಿ ಆಲೋಚಿಸುವ ಮೂಲಕ ಸವಲತ್ತುಗಳಿಗೆ ಸ್ಪಂದಿಸುವ ಹಾಗೂ ನಿಗಧಿತ ಸಮಯದಲ್ಲಿ ಸಮಸ್ಯೆ ಆಲಿಸುವ ಅಭ್ಯರ್ಥಿಗಳಿಗೆ ಗುರುತಿಸುವ ಮಹತ್ತರ ಜವಾಬ್ದಾರಿಯಿದೆ ಎಂದು ಹೇಳಿದರು.

ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಪಕ್ಷದ ಇಬ್ಬರು ಅಭ್ಯರ್ಥಿಗಳು ಗೆಲುವಿಗೆ ಮತದಾರರು ಶ್ರಮಿಸಬೇಕು. ರಾಜ್ಯ ಸರ್ಕಾರ ಜನತೆಗೆ ನೀಡಿರುವ ಗ್ಯಾರಂಟಿ ಯೋಜನೆಗಳಂತೆ ಶಿಕ್ಷಕರು, ಪದವೀಧರರಿಗೆ ಸಮರ್ಪಕವಾಗಿ ನ್ಯಾಯ ಒದಗಿಸುವ ಕೆಲಸ ಮಾಡಲಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್‌. ಹರೀಶ್‌, ಚಿಕ್ಕ ಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ, ಜಿಪಂ ಮಾಜಿ ಅಧ್ಯಕ್ಷ ಕೆ.ಮಹಮ್ಮದ್, ವಿಧಾನ ಪರಿಷತ್‌ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ರೂಬೆನ್ ಮೋಸಸ್, ಮಲೆನಾಡು ವಿದ್ಯಾ ಸಂಸ್ಥೆಯ ಅಧ್ಯಕ್ಷ ಎನ್.ಕೇಶವಮೂರ್ತಿ, ಉಪಾಧ್ಯಕ್ಷೆ ರಾಧಾ ಸುಂದ್ರೇಶ್ ಹಾಗೂ ಕಾಲೇಜಿನ ಪ್ರಾಧ್ಯಾಪಕರು, ಶಿಕ್ಷಕರು ಹಾಜರಿದ್ದರು. 29 ಕೆಸಿಕೆಎಂ 1ಚಿಕ್ಕಮಗಳೂರಿನ ಬೈಪಾಸ್‌ನಲ್ಲಿರುವ ಎಂಇಎಸ್ ಬಿಎಡ್ ಕಾಲೇಜಿನಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ ಬುಧವಾರ ಮತಯಾಚಿಸಿದರು. ಬಿ.ಎಚ್‌. ಹರೀಶ್‌, ಗಾಯತ್ರಿ ಶಾಂತೇಗೌಡ, ರೇಖಾ ಹುಲಿಯಪ್ಪಗೌಡ, ಡಾ.ಡಿ.ಎಲ್‌. ವಿಜಯಕುಮಾರ್‌, ಎಂ.ಎಲ್‌. ಮೂರ್ತಿ ಇದ್ದರು.