ನೆಲಮಂಗಲ: ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ಮರೆತಿದ್ದಾರೆಂದು ಆರೋಪಿಸಿ ಡಿ.8ರಂದು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಗೊಳ್ಳಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ಗ್ರಾಮಾಂತರ ಜಿಲ್ಲಾಧ್ಯಕ್ಷ ಕೆ.ಪಿ.ಬೃಂಗೇಶ್ ತಿಳಿಸಿದರು.
ನೆಲಮಂಗಲ: ರೈತರ ಹೆಸರಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ಮರೆತಿದ್ದಾರೆಂದು ಆರೋಪಿಸಿ ಡಿ.8ರಂದು ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಗೊಳ್ಳಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ಗ್ರಾಮಾಂತರ ಜಿಲ್ಲಾಧ್ಯಕ್ಷ ಕೆ.ಪಿ.ಬೃಂಗೇಶ್ ತಿಳಿಸಿದರು.
ನಗರದ ಅರಿಶಿನಕುಂಟೆಯಲ್ಲಿ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿದ್ಯುತ್ ದರ, ಮುದ್ರಾಂಕಿತ ಶುಲ್ಕ, ಪಹಣಿ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿದ್ದು ರೈತರ ಬದುಕು ಬೀದಿಗೆ ಬರುವಂತಾಗಿದೆ. ರೈತರ ಮೇಲೆ ನಿತ್ಯ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದೆ. ಸರ್ಕಾರ ಪಶು ಆಹಾರ ಬೆಲೆ ಹೆಚ್ಚಳ ಮಾಡಿದರೇ ಹೊರತು ಹಾಲಿನ ದರ ಹೆಚ್ಚಳ ಮಾಡಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ನೀಡಿದ್ದ ಹಾಲಿನ ಪ್ರೋತ್ಸಾಹ ಧನವನ್ನು ನೀಡಿಲ್ಲ. ರೈತರ ಬೆಳೆಗೆ ಬೆಂಬಲ ಬೆಲೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರನ್ನು ಕಡೆಗಣಿಸುತ್ತಿದೆ. ಆದ್ದರಿಂದ ರಾಜ್ಯ ಸರ್ಕಾರದ ವಿರುದ್ಧ ಡಿ.8ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ನಗರದ ಚೌಡೇಶ್ವರಿ ದೇವಾಲಯದಿಂದ ತಾಲೂಕು ಕಚೇರಿವರೆಗೂ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 25 ಟ್ರ್ಯಾಕ್ಟರ್, ಎತ್ತಿನಗಾಡಿ ಸೇರಿದಂತೆ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವರು ಎಂದು ಬೃಂಗೇಶ್ ಮಾಹಿತಿ ನೀಡಿದರು.ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ರಾಜ್ಯ ಸರ್ಕಾರ ರೈತರು, ದೀನ, ದಲಿತರನ್ನು ಕಡೆಗಣಿಸಿದೆ.
ರೈತರ ಸಮಸ್ಯೆಗಳತ್ತ ಗಮನ ಹರಿಸುತ್ತಿಲ್ಲ. ಜಿಲ್ಲೆಯಲ್ಲಿ ಮಳೆಯಿಂದಾಗಿ ಶೇ.40ರಷ್ಟು ರಾಗಿ ಬೆಳೆ ನಷ್ಟವಾಗಿದ್ದರೂ ರೈತರಿಗೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ. ಜತೆಗೆ ಭೂ ಸ್ವಾಧೀನ ಹೆಸರಲ್ಲಿ ಕೃಷಿ ಭೂಮಿಯನ್ನು ಸರ್ಕಾರವೇ ಕಿತ್ತುಕೊಳ್ಳುತ್ತಿದ್ದು, ಈಗಾಗಲೇ 10 ಸಾವಿರ ಎಕರೆ ಸ್ವಾಧೀನಪಡಿಸಿಕೊಂಡಿದ್ದು ಪರಿಹಾರ ಹಣ ನೀಡಿಲ್ಲವೆಂದು ದೂರಿದರು.ಈ ವೇಳೆ ಬಿಜೆಪಿ ತಾಲೂಕು ಅದ್ಯಕ್ಷ ಜಗದೀಶ್‌ಚೌಧರಿ, ಪ್ರಧಾನ ಕಾರ್ಯದರ್ಶಿ ಸತೀಶ್, ಖಜಾಂಚಿ ನಾಗರಾಜು, ಜಿಲ್ಲಾ ಉಪಾಧ್ಯಕ್ಷ ರಾಹುಲ್‌ಗೌಡ, ನಗರಸಭೆ ಹೆಚ್ಚುವರಿ ಸದಸ್ಯ ಅಂಜನಮೂರ್ತಿ, ರಾಮಮೂರ್ತಿ, ಕೃಪಾನಂದ್, ಮುನಿರಾಜು, ಮುಖಂಡ ಸಪ್ತಗಿರಿ ಶಂಕರ್‌ನಾಯಕ್, ಬಿಜೆಪಿ ರೈತ ಮೋರ್ಚಾ ತಾಲೂಕು ಅಧ್ಯಕ್ಷ ಉಮೇಶ್ , ಎಸ್ಟಿಮೋರ್ಚಾ ಅಧ್ಯಕ್ಷ ಕೆಂಪರಾಮಯ್ಯ, ಒಬಿಸಿ ಮೋರ್ಚಾ ಅದ್ಯಕ್ಷ ಲೋಕೇಶ್ , ನಗರಾfyಕ್ಷ ಕೇಶವ್ ಉಪಸ್ಥಿತರಿದರು.
ಪೊಟೊ-5ಕೆಎನ್‌ಎಲ್‌ಎಮ್ 1-ನೆಲಮಂಗಲದ ಅರಿಶಿನಕುಂಟೆಯಲ್ಲಿ ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಬಿಜೆಪಿ ರೈತ ಮೋರ್ಚಾ ಗ್ರಾಮಾಂತರ ಜಿಲ್ಲಾಧ್ಯಕ್ಷ ಕೆ.ಪಿ.ಬೃಂಗೇಶ್ ಮಾತನಾಡಿದರು.