ರಾಜ್ಯದ ಕಾನೂನು ವ್ಯವಸ್ಥೆ ಉತ್ತಮ: ಡಾ.ಪರಮೇಶ್ವರ್‌

| Published : Jul 10 2025, 01:45 AM IST

ರಾಜ್ಯದ ಕಾನೂನು ವ್ಯವಸ್ಥೆ ಉತ್ತಮ: ಡಾ.ಪರಮೇಶ್ವರ್‌
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳವಾರ ಸಂಜೆ ಪತ್ರಕರ್ತರೊಂದಿಗೆ ಮಾತನಾಡಿದರು.

ಇತ್ತೀಚೆಗೆ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ವಿವಿಧ ಅಪರಾಧಗಳ ಬಗ್ಗೆ ಮಾಹಿತಿ ವಿಶ್ಲೇಷಿಸಿದ ವೇಳೆ ರಾಜ್ಯದಲ್ಲಿ ಅಪರಾಧ ಪ್ರಮಾಣ ಕಡಿಮೆಯಾಗಿರುವುದು ಕಂಡುಬಂದಿದೆ. ಕಾನೂನನ್ನು ಬಹಳ ಕಠಿಣವಾಗಿ ತೆಗೆದುಕೊಂಡಿದ್ದರಿಂದ ಕ್ರೈಂ ರೇಟ್ ಕಡಿಮೆಯಾಗಿದೆ ಎಂದರು.ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಗಮನಿಸಿದಾಗ ಕಠಿಣ ಕ್ರಮ ಕೈಗೊಂಡ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರಲು ಸಾಧ್ಯವಾಗಿದೆ ಎಂದರು.

ವಿಶೇಷ ಕಾರ್ಯಪಡೆ ರಚನೆ ಶಾಂತಿ-ಸುವ್ಯವಸ್ಥೆಗೆ ಪೂರಕವಾಗಿದೆ. ಈ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ. ಬೆಂಗಳೂರು ಬಳಿಕ ಬೆಳೆಯುವಲ್ಲಿ ಅವಕಾಶಗಳಿರುವ ಕರಾವಳಿಯಲ್ಲಿ ಶಾಂತಿ ಅತೀ ಮುಖ್ಯ, ಅದಕ್ಕಾಗಿ ಈ ಭಾಗಕ್ಕೆ ಹೆಚ್ಚು ಗಮನ ಹರಿಸುತ್ತೇವೆ. ಒಂದೆರಡು ಜನ ಬೇರೆ ರೀತಿಯಲ್ಲಿ ಇದ್ದರೂ ಜಿಲ್ಲೆಯ ಜನ ಉತ್ತಮರಾಗಿರುವವರು ಎಂದರು. ಪೊಲೀಸರ ವರ್ಗಾವಣೆಯಿಂದ ಏನು ಪರಿಣಮ ಎಂದು ನೀವು ಹೇಳಬೇಕು ಎಂದರು.ಮಂಗಳೂರಿನಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಎಲ್ಲಾ ವರ್ಗದ ಜನರೊಂದಿಗೆ ಸಭೆ ನಡೆಸುತ್ತೇವೆ. ಅಲ್ಲಿ ಸಲಹೆಗಳನ್ನು ಪಡೆದು ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದರು.ಪುತ್ತೂರಿಗೆ ಎಸ್ಪಿ ಕಚೇರಿ ಬೇಡಿಕೆ ಇದೆ:ಮಂಗಳೂರಿನ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ವರ್ಗಾಯಿಸಬೇಕು ಎಂಬ ಬೇಡಿಕೆ ಇದೆ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ, ಸಾಧಕ-ಬಾಧಕಗಳನ್ನು ಸಂಗ್ರಹಿಸಿ ತೀರ್ಮಾಣ ಕೈಗೊಳ್ಳುತ್ತೇವೆ ಎಂದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ ಹಾಗೂ ಪ್ರಮುಖರು ಸ್ವಾಗತಿಸಿದರು. ಬಳಿಕ ಸಚಿವರು ಪ್ರಮುಖರ ಜೊತೆ ಜಿಲ್ಲೆಯ ಬಗ್ಗೆ, ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಚರ್ಚಿಸಿದರು. ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.