ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ನ್ಯಾಯಯುತವಾಗಿ ನಡೆಸುವ ಬದಲು ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ಪ್ರಕರಣದ ಹಿಂದಿರುವವರನ್ನು ರಕ್ಷಿಸಿ, ನಮ್ಮ ಪಕ್ಷದ ಕಾರ್ಯಕರ್ತರನ್ನು ಗುರಿಯಾಗಿಸುವ ಪ್ರಯತ್ನ ನಡೆಯುತ್ತಿದೆ. ಈ ವಿಚಾರದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುವುದಾಗಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ತಿಳಿಸಿದರು. ೨೦೨೩ರಲ್ಲಿ ಈ ಕಾರ್ಯಾಚರಣೆ ನಡೆಸಲು ಯಾರು ಪ್ರೇರಣೆ ನೀಡಿದರು. ಇದರ ಹಿಂದಿನ ಉದ್ದೇಶವೇನು ಎಂಬುದರ ಬಗ್ಗೆ ತನಿಖೆ ನಡೆಯಬೇಕು. ಆದರೆ ನಮ್ಮ ಪಕ್ಷದ ವಾರ್ ರೂಂನಲ್ಲಿ ಹಾಗೂ ಸಾಮಾಜಿಕ ಮಾಧ್ಯಮದಲ್ಲಿ ಕೆಲಸ ಮಾಡುವವರ ಕುಟುಂಬಗಳಿಗೆ ಸರ್ಚ್ ವಾರೆಂಟ್ ಹೆಸರಿನಲ್ಲಿ ಕಿರುಕುಳ ನೀಡಲಾಗುತ್ತಿದೆ. ಮೊಬೈಲ್ ಮತ್ತು ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಳ್ಳುವ ಮೂಲಕ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದರು.
ಕನ್ನಡಪ್ರಭ ವಾರ್ತೆ ಹೊಳೆನರಸೀಪುರ
ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ನ್ಯಾಯಯುತವಾಗಿ ನಡೆಸುವ ಬದಲು ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ಪ್ರಕರಣದ ಹಿಂದಿರುವವರನ್ನು ರಕ್ಷಿಸಿ, ನಮ್ಮ ಪಕ್ಷದ ಕಾರ್ಯಕರ್ತರನ್ನು ಗುರಿಯಾಗಿಸುವ ಪ್ರಯತ್ನ ನಡೆಯುತ್ತಿದೆ. ಈ ವಿಚಾರದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುವುದಾಗಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ತಿಳಿಸಿದರು.ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಹಾಗೂ ಮಾವಿನಕೆರೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಖಾಸಗಿ ಸುದ್ದಿವಾಹಿನಿಯ ವ್ಯಕ್ತಿಯೊಬ್ಬರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ಟಿಂಗ್ ಆಪರೇಷನ್ ನಡೆಸಿರುವುದಾಗಿ ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಸಿದ್ದರಾಮಯ್ಯ ಮತ್ತು ಇತರರು ಹೇಳಿಕೆ ನೀಡಿದ್ದಾರೆ. ಹಾಗಿದ್ದರೆ ೨೦೨೩ರಲ್ಲಿ ಈ ಕಾರ್ಯಾಚರಣೆ ನಡೆಸಲು ಯಾರು ಪ್ರೇರಣೆ ನೀಡಿದರು. ಇದರ ಹಿಂದಿನ ಉದ್ದೇಶವೇನು ಎಂಬುದರ ಬಗ್ಗೆ ತನಿಖೆ ನಡೆಯಬೇಕು. ಆದರೆ ನಮ್ಮ ಪಕ್ಷದ ವಾರ್ ರೂಂನಲ್ಲಿ ಹಾಗೂ ಸಾಮಾಜಿಕ ಮಾಧ್ಯಮದಲ್ಲಿ ಕೆಲಸ ಮಾಡುವವರ ಕುಟುಂಬಗಳಿಗೆ ಸರ್ಚ್ ವಾರೆಂಟ್ ಹೆಸರಿನಲ್ಲಿ ಕಿರುಕುಳ ನೀಡಲಾಗುತ್ತಿದೆ. ಮೊಬೈಲ್ ಮತ್ತು ಲ್ಯಾಪ್ಟಾಪ್ಗಳನ್ನು ವಶಪಡಿಸಿಕೊಳ್ಳುವ ಮೂಲಕ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದರು.
ಸ್ಟಿಂಗ್ ಆಪರೇಷನ್ ತನಿಖೆ ಶೇ.೮೦ರಷ್ಟು ಪೂರ್ಣಗೊಂಡಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೆಪಿಎಸ್ಸಿ ಹಗರಣದ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು. ಪಿಡಿಒ, ಎಇಇ, ಪಶುವೈದ್ಯಕೀಯ ಅಭ್ಯರ್ಥಿಗಳು ಹಾಗೂ ಆರ್ಟಿಒ ನೇಮಕಾತಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಎಷ್ಟು ಸತ್ಯಾಂಶ ಹೊರಬಂದಿದೆ? ಭ್ರಷ್ಟಾಚಾರ ಮತ್ತು ಅಕ್ರಮಗಳ ವಿರುದ್ಧ ಸರ್ಕಾರ ಕೈಗೊಂಡ ಕ್ರಮಗಳೇನು ಎಂದು ಪ್ರಶ್ನಿಸಿದರು. ಕೆಪಿಎಸ್ಸಿ ಹಗರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಎಂಬುದು ತಮ್ಮ ಆರೋಪವಾಗಿದ್ದು, ತನಿಖೆಯ ಹೆಸರಿನಲ್ಲಿ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ದೂರಿದರು. ಪ್ರಕರಣದ ಎಲ್ಲ ಆಯಾಮಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಸತ್ಯಾಂಶ ಹೊರಬರುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದರು.ವಿಕ್ಕಿ ಸಾವಿನ ಪ್ರಕರಣದ ಬಗ್ಗೆಯೂ ಪ್ರಶ್ನೆವಿಕ್ಕಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ನೀಡಲಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪ್ರಕರಣದಲ್ಲಿ ಯುಡಿಆರ್ ದಾಖಲಿಸಿದ್ದು ಏಕೆ, ತನಿಖೆ ಏಕೆ ನಡೆಸಲಿಲ್ಲ, ಅಸಹಜ ಸಾವು ಸಂಭವಿಸಿದ್ದರೆ ಮರಣೋತ್ತರ ಪರೀಕ್ಷೆ ಏಕೆ ಮಾಡಲಿಲ್ಲ ಎಂಬ ಪ್ರಶ್ನೆಗಳಿಗೆ ಉತ್ತರ ನೀಡಬೇಕು ಎಂದರು. ಸಂತ್ರಸ್ತ ಕುಟುಂಬಕ್ಕೆ ₹ ೧೦ ಲಕ್ಷ ನೀಡುವುದಾಗಿ ಹೇಳಿ ₹ ೨ ಲಕ್ಷ ಮಾತ್ರ ನೀಡಲಾಗಿದೆ ಎಂಬ ಚರ್ಚೆಯೂ ನಡೆಯುತ್ತಿದೆ. ಇಂತಹ ಪ್ರಕರಣಗಳಲ್ಲಿ ಸತ್ಯಾಂಶ ಹೊರಬರಲು ಪೊಲೀಸ್ ಇಲಾಖೆ ಸಮರ್ಪಕವಾಗಿ ತನಿಖೆ ನಡೆಸಬೇಕು. ಪ್ರತಿಯೊಂದು ವಿಚಾರಕ್ಕೂ ನಮ್ಮನ್ನೇ ಸಾಕ್ಷ್ಯ ಕೇಳುವುದಾದರೆ ತನಿಖಾ ಸಂಸ್ಥೆಗಳ ಪಾತ್ರವೇನು ಎಂದು ಪ್ರಶ್ನಿಸಿದರು. ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ ಎಂಬುದು ತಮ್ಮ ಆರೋಪವಾಗಿದ್ದು, ನ್ಯಾಯಯುತ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.ಇದೇ ಸಂದರ್ಭದಲ್ಲಿ ಅವರ ಸಹೋದರ, ಮಾಜಿ ಸಚಿವ ಎಚ್. ಡಿ. ರೇವಣ್ಣ ಉಪಸ್ಥಿತರಿದ್ದರು.
ತಮ್ಮ ಆಪ್ತರು ಓಡಿಹೋಗಿದ್ದಾರೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರು ಓಡಿಹೋಗಿದ್ದಾರೆ? ಯಾರ ಮೇಲೆ ಯಾವ ಆರೋಪಗಳಿವೆ ಎಂಬುದನ್ನು ಸ್ಪಷ್ಟಪಡಿಸಲಿ. ಇಂತಹ ಹೇಳಿಕೆಗಳ ಮೂಲಕ ಬೇರೆ ವಿಚಾರಗಳಿಂದ ಗಮನ ಬೇರೆಡೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ ಎಂದು ಟೀಕಿಸಿದರು.ಸರ್ಕಾರ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಬದಲು ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂಬ ಅನುಮಾನವಿದೆ. ನ್ಯಾಯಯುತ ತನಿಖೆ ನಡೆಸುವ ಜವಾಬ್ದಾರಿ ಸರ್ಕಾರದ್ದಾಗಿದ್ದು, ಅಧಿಕಾರಿಗಳ ಮೂಲಕ ಪಕ್ಷದ ಕಾರ್ಯಕರ್ತರನ್ನು ಗುರಿಯಾಗಿಸುವುದನ್ನು ಸಹಿಸುವುದಿಲ್ಲ. ಈ ಹೋರಾಟವನ್ನು ಅಷ್ಟು ಸುಲಭವಾಗಿ ಕೈಬಿಡುವುದಿಲ್ಲ ಎಂದು ಹೇಳಿದರು.