ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಗ್ರಾಮ ಆಡಳಿತ ಅಧಿಕಾರಿಗಳ ಹಾಗೂ ಗ್ರಾಮ ಸಹಾಯಕರ ಕುಂದುಕೊರತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ.ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಜಿಲ್ಲಾ ಘಟಕ ಕೊಡಗು ಜಿಲ್ಲೆಯ ವತಿಯಿಂದ ಗ್ರಾಮ ಆಡಳಿತ ಅಧಿಕಾರಿಗಳ ಹಾಗೂ ಗ್ರಾಮ ಸಹಾಯಕರ ಕುಂದುಕೊರತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೊಡಗು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರದಿಂದ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಸಂಘದ ಕೇಂದ್ರ ಸಂಘದ ಕಾರ್ಯಕಾರಿಣಿ ನಿರ್ಣಯದಂತೆ ಇಲಾಖೆಯ ವತಿಯಿಂದ ಅಭಿವೃದ್ಧಿಪಡಿಸಲಾಗಿರುವ 17 ಅಧಿಕ ತಂತ್ರಾಂಶಗಳನ್ನು ಮೊಬೈಲ್, ಲ್ಯಾಪ್ ಟಾಪ್, ಇಂಟರ್ನೆಟ್ ಹಾಗೂ ಅವಶ್ಯ ಸೌಲಭ್ಯಗಳನ್ನು ನೀಡದೆ ಅವುಗಳನ್ನು ನಿರ್ವಹಿಸಲು ಒತ್ತಡ ಏರುತ್ತಿರುವ ಬಗ್ಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯಗಳನ್ನು ಒದಗಿಸಬೇಕು, ಗ್ರಾಮ ಸಹಾಯಕರ ಸೇವಾ ಭದ್ರತೆ ಮಾಡಬೇಕು ಎಂದು ಆಗ್ರಹಿಸಿದರು.ಅಧಿಕಾರಿಗಳ ಭೇಟಿ: ಗ್ರಾಮ ಆಡಳಿತ ಅಧಿಕಾರಿಗಳ ಹಾಗೂ ಗ್ರಾಮ ಸಹಾಯಕರ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆ ಕೊಡಗು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಶ್ರೀನಿವಾಸ್ ಹಾಗೂ ಕಾರ್ಯದರ್ಶಿ, ಖಜಾಂಚಿಗಳು ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಮನವಿ ಪತ್ರ ಸ್ವೀಕರಿಸಿದರು.
ಈ ಸಂದರ್ಭ ಕೊಡಗು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಶ್ರೀನಿವಾಸ್ ಸಂಘದ ಮುಖಂತರ ಸಚಿವರ ಗಮನಕ್ಕೆ ತರುವ ಭರವಸೆಯನ್ನು ಪ್ರತಿಭಟನೆಗಾರರಿಗೆ ತಿಳಿಸಿದರು.ಕೊಡಗು ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಜಿಲ್ಲಾಧ್ಯಕ್ಷ ಅಕ್ಷತಾ ಬಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂತೋಷ ಪಾಟೀಲ್, ಗೌರವಾಧ್ಯಕ್ಷ ಗೋಪಿನಾಥ್, ಖಜಾಂಚಿ ರವಿಚಂದ್ರ, ಜಿಲ್ಲಾ ಉಪಾಧ್ಯಕ್ಷ ಹರೀಶ್ ಕುಮಾರ್, 5 ತಾಲೂಕು ಅಧ್ಯಕ್ಷರು, ಕೊಡಗು ಜಿಲ್ಲೆಯ ಎಲ್ಲಾ ಗ್ರಾಮ ಸಹಾಯಕರು ಮುಷ್ಕರದಲ್ಲಿ ಹಾಜರಿದ್ದರು.
ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆ ಆಲಿಸಿದರು. ನಿಮ್ಮ ಈ ಮುಷ್ಕರ ಗಂಭೀರವಾದ ವಿಷಯ ಇದನ್ನು ಪರಿಗಣಿಸಿ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕರ ಮುಖಂತರ ತಮ್ಮ ಬೇಡಿಕೆ ಈಡೇರಿಸಲು ಒತ್ತಾಯಿಸಲಾಗುವುದು ಎಂದು ಹೇಳಿದರು..........................
ನಮ್ಮ ಬೇಡಿಕೆ ಈಡೇರದಿದ್ದಲ್ಲಿ ಕರ್ನಾಟಕದಾದ್ಯಂತ ಎಲ್ಲಾ ಗ್ರಾಮಡಳಿತ ಅಧಿಕಾರಿಗಳು ಸೋಮವಾರದಿಂದ ಒಂದು ತಿಂಗಳ ಕಾಲ ತಾಲೂಕು ಕಚೇರಿಗೆ ರಜೆ ಹಾಕಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತೇವೆ.-ಅಕ್ಷತಾ ಶೆಟ್ಟಿ, ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಉಪಾಧ್ಯಕ್ಷೆ ಹಾಗೂ ಕೊಡಗು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷೆ.
;Resize=(128,128))
;Resize=(128,128))
;Resize=(128,128))
;Resize=(128,128))